RR vs SRH, IPL 2020 Live Score: ರಾಜಸ್ಥಾನ್ 4 ವಿಕೆಟ್ ಪತನ
IPL 2020, Rajasthan Royals vs Sunrisers Hyderabad Live Score: ಉಭಯ ತಂಡಗಳು 12 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 6 ಪಂದ್ಯಗಳಲ್ಲಿ ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಕೂಡ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ದುಬೈ (ಅ. 22): ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐಪಿಎಲ್ನ 40ನೇ ಪಂದ್ಯ ನಡೆಯುತ್ತಿದ್ದು ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಡೇವಿಡ್ ವಾರ್ನರ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಸೆಣೆಸಾಟ ನಡೆಸುತ್ತಿವೆ. ಮುಂದಿನ ಹಂತಕ್ಕೆ ತಲುಪಲು ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ.
ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಆರ್ಆರ್ ತಂಡದ ಆರಂಭದಲ್ಲೇ ಆಘಾತ ಅನುಭವಿಸಿತು. ಬೆನ್ ಸ್ಟೋಕ್ಸ್ ಜೊತೆ ಓಪನರ್ ಆಗಿ ಕಣಕ್ಕಿಳಿದ ರಾಬಿನ್ ಉತ್ತಪ್ಪ 13 ಎಸೆತಗಳಲ್ಲಿ 19 ರನ್ ಬಾರಿಸಿ ಔಟ್ ಆದರು. ಆದರೆ, ಎರಡನೇ ವಿಕೆಟ್ಗೆ ಸ್ಟೋಕ್ಸ್ ಹಾಗೂ ಸಂಜು ಸ್ಯಾಮ್ಸನ್ ಉತ್ತಮ ಜೊತೆಯಾಟ ಆಡಿದರು. ಆರಂಭಿಕ ಆಘಾತದಿಂದ ತಂಡವನ್ನು ಪಾರು ಮಾಡಿದ ಈ ಜೋಡಿ 56 ರನ್ಗಳ ಕಾಣಿಕೆ ನೀಡಿತು.
ಈ ಸಂದರ್ಭ ಬೌಲಿಂಗ್ಗೆ ಇಳಿದ ಹೋಲ್ಡರ್ 36 ರನ್ ಬಾರಿಸಿದ್ದ ಸ್ಯಾಮ್ಸನ್ ಅವರನ್ನು ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೆ 30 ರನ್ ಗಳಿಸಿದ್ದ ಸ್ಟೋಕ್ಸ್ ಕೂಡ ನಿರ್ಗಮಿಸಿದರು. ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಜೋಸ್ ಬಟ್ಲರ್ ಈ ಬಾರಿ ಕೇವಲ 9 ರನ್ಗೆ ಸುಸ್ತಾದರು.
ಸದ್ಯ ಕ್ರೀಸ್ನಲ್ಲಿ ನಾಯಕ ಸ್ಟೀವ್ ಸ್ಮಿತ್ ಹಾಗೂ ಪ್ರಿಯಂ ಗರ್ಗ್ ಇದ್ದಾರೆ. ಇದ್ದಾರೆ.
ಇಂದಿನ ಪಂದ್ಯಕ್ಕೆ ಎಸ್ಆರ್ಹೆಚ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕೇನ್ ವಿಲಿಯಮ್ಸನ್ ಬದಲು ಜೇಸನ್ ಹೋಲ್ಡರ್ ಹಾಗೂ ಬಸಿಲ್ ಥಂಪಿ ಬದಲು ನದೀಮ್ ಆಡುತ್ತಿದ್ದಾರೆ.
ಇತ್ತ ಆರ್ಆರ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್ಸ್ಟೋ (ವಿಕೆಟ್ ಕೀಪರ್), ಮನೀಷ್ ಪಾಂಡೆ, ವಿಜಯ್ ಶಂಕರ್, ಪ್ರಿಯಂ ಗಾರ್ಗ್, ಜೇಸನ್ ಹೋಲ್ಡರ್, ರಶೀದ್ ಖಾನ್, ಅಬ್ದುಲ್ ಸಮದ್, ಶಹ್ಬಾಜ್ ನದೀಮ್, ಸಂದೀಪ್ ಶರ್ಮಾ, ಟಿ. ನಟರಾಜನ್.
ರಾಜಸ್ಥಾನ್ ರಾಯಲ್ಸ್: ಜಾಸ್ ಬಟ್ಲರ್, ಬೆನ್ ಸ್ಟೋಕ್ಸ್, ರಾಬಿನ್ ಉತ್ತಪ್ಪ, ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ರಾಹುಲ್ ತೇವಾಟಿಯಾ, ಶ್ರೇಯಸ್ ಗೋಪಾಲ್, ಜೋಫ್ರಾ ಆರ್ಚರ್, ಕಾರ್ತಿಕ್ ತ್ಯಾಗಿ, ಅಂಕಿತ್ ರಜಪೂತ್.
ಹೈದರಾಬಾದ್ ಆಡಿರುವ 9 ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳಲ್ಲಿ ಗೆದ್ದು ಆರರಲ್ಲಿ ಸೋಲು ಕಂಡಿದೆ. ಹೀಗಾಗಿ 6 ಅಂಕದೊಂದಿಗೆ 7ನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ್ ಸ್ಥಿತಿ ಕೂಡ ಭಿನ್ನವಾಗಿಲ್ಲ. ಆಡಿರುವ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಆರರಲ್ಲಿ ಸೋತಿದೆ. 8 ಅಂಕದೊಂದಿಗೆ 6ನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಸೋತಿತ್ತು. ಹೀಗಾಗಿ ಗೆಲುವಿನ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಇದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯಿಸಿ ಗೆಲುವಿನ ಲಯಕ್ಕೆ ಮರಳಿರುವ ಸ್ಮಿತ್ ಪಡೆ ಮತ್ತೊಂದು ಗೆಲುವವನ್ನು ಎದುರುನೋಡುತ್ತಿದೆ.
ಉಭಯ ತಂಡಗಳು ಇಲ್ಲಿಯವರೆಗೆ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 6 ಪಂದ್ಯಗಳಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಗೆಲುವು ಕಂಡಿದ್ದರೆ, 6 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ.
Published by:Vinay Bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ