CSK vs RCB: ಕೊಹ್ಲಿ ಅರ್ಧಶತಕ: ಸಿಎಸ್​ಕೆಗೆ ಸಾಧಾರಣ ಸವಾಲು ನೀಡಿದ ಆರ್​ಸಿಬಿ

Chennai Super Kings (CSK) vs Royal Challengers Bangalore: ಐಪಿಎಲ್‌ನಲ್ಲಿ ಈವರೆಗೆ ಉಭಯ ತಂಡಗಳು 25 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ಬಾರಿ ಗೆಲುವು ದಾಖಲಿಸಿದರೆ, ಆರ್​ಸಿಬಿ ಕೇವಲ 9 ರಲ್ಲಿ ಮಾತ್ರ ವಿಜಯ ಸಾಧಿಸಿದೆ. ಹಾಗೆಯೇ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು.

Virat Kohli

Virat Kohli

 • Share this:
  ಇಂಡಿಯನ್ ಪ್ರೀಮಿಯರ್ ಲೀಗ್​ನ 44ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ 146 ರನ್​ಗಳ ಟಾರ್ಗೆಟ್ ನೀಡಿದೆ.  ದುಬೈ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ದೇವದತ್ ಪಡಿಕ್ಕಲ್ ಹಾಗೂ ಆರೋನ್ ಫಿಂಚ್ ಉತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ್ದ ಫಿಂಚ್ (15), ಸ್ಯಾಮ್ ಕರ್ರನ್ ಎಸೆತದಲ್ಲಿ ಕ್ಯಾಚ್ ನೀಡಿ 4ನೇ ಓವರ್​ನಲ್ಲಿ ನಿರ್ಗಮಿಸಿ ನಿರಾಸೆ ಮೂಡಿಸಿದರು.

  ಮತ್ತೊಂದೆಡೆ ಉತ್ತಮವಾಗಿ ಬ್ಯಾಟ್ ಬೀಸಿದ ಪಡಿಕ್ಕಲ್ ಪವರ್​ಪ್ಲೇ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 46 ಕ್ಕೇರಿಸಿದರು. ಆದರೆ ಇದರ ಬೆನ್ನಲ್ಲೇ ಸ್ಯಾಂಟ್ನರ್ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಫಾಫ್ ಡು ಪ್ಲೆಸಿಸ್ ಹಿಡಿದ ಅದ್ಭುತ ಕ್ಯಾಚ್​ಗೆ ದೇವದತ್ ಪಡಿಕ್ಕಲ್ (22) ಬಲಿಯಾದರು.

  ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಎಚ್ಚರಿಕೆಯ ಆಟಕ್ಕೆ ಒತ್ತು ನೀಡಿದರು. ಅದರಂತೆ ಮೊದಲ ಹತ್ತು ಓವರ್ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 72 ಕ್ಕೆ ತಂದು ನಿಲ್ಲಿಸಿದರು. ಅಲ್ಲದೆ ಅರ್ಧಶತಕದ ಜೊತೆಯಾಟದ ಮೂಲಕ 15 ಓವರ್​ ಮುಕ್ತಾಯಕ್ಕೆ ತಂಡದ ಮೊತ್ತವನ್ನು 101ಕ್ಕೇರಿಸಿದರು.

  ಕೊನೆಯ 4 ಓವರ್​ಗಳಿರುವಾಗ ಬಿರುಸಿನ ಆಟಕ್ಕೆ ಮುಂದಾದ ಎಬಿ ಡಿವಿಲಿಯರ್ಸ್​ (39) ಚಹರ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಕೊನೆಯ ಎರಡು ಓವರ್​ಗಳಿರುವಾಗ ನಾಯಕ ಕೊಹ್ಲಿ ಜೊತೆಗೂಡಿದ ಮೊಯೀನ್ ಅಲಿ (1) ಬಂದ ವೇಗದಲ್ಲೇ ಹಿಂತಿರುಗಿದರು. ಆದರೆ ಮತ್ತೊಂದೆಡೆ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 42 ಎಸೆತಗಳಲ್ಲಿ 38ನೇ ಐಪಿಎಲ್ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಫಾಫ್ ಡುಪ್ಲೆಸಿಸ್ ಮನಮೋಹಕ ಕ್ಯಾಚ್​ಗೆ ಕೊಹ್ಲಿ ನಿರ್ಗಮಿಸಬೇಕಾಯಿತು.

  ಇನ್ನು ಕೊನೆಯ ಮೂರು ಓವರ್​ನಲ್ಲಿ ಕಂಬ್ಯಾಕ್ ಮಾಡಿದ ಸಿಎಸ್​ಕೆ ಬೌಲರುಗಳ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ರನ್​ಗಳಿಸದಂತೆ ತಡೆಯುವಲ್ಲಿ ಯಶಸ್ವಿಯಾದರು. ಅದರಂತೆ ಡೆತ್ ಓವರ್​ನಲ್ಲಿ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ RCB ನಿಗದಿತ 20 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್​ಗಳಿಸಲಷ್ಟೇ ಶಕ್ತರಾದರು. ಸಿಎಸ್​ಕೆ ಪರ ಸ್ಯಾಮ್ ಕರ್ರನ್ 3 ಓವರ್​ನಲ್ಲಿ 19 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

  POINTS TABLE:

  SCHEDULE TIME TABLE:

  ORANGE CAP:

  PURPLE CAP:

  RESULT DATA:

  MOST SIXES:

  ಇದನ್ನೂ ಓದಿ: IPL 2020: 3ನೇ ವರ್ಷಕ್ಕೆ CSK ಸುಸ್ತು: ಡ್ಯಾಡಿಸ್ ಆರ್ಮಿ ವಿರುದ್ಧ ಕಿಡಿಕಾರಿದ ಕೋಚ್​
  Published by:zahir
  First published: