IPL

  • associate partner
HOME » NEWS » Ipl » IPL 2020 SRH VS DC LIVE CRICKET SCORE SUNRISERS HYDERABAD VS DELHI CAPITALS WRIDDHIMAN SAHA COMPLETED 50 VB 2

SRH vs DC, IPL 2020 Live Score: 200 ದಾಟಿದ ಹೈದರಾಬಾದ್ ಮೊತ್ತ

IPL 2020, Sunrisers Hyderabad vs Delhi Capitals Live Score: ಉಭಯ ತಂಡಗಳು ಈವರೆಗೆ 16 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ.

news18-kannada
Updated:October 27, 2020, 8:52 PM IST
SRH vs DC, IPL 2020 Live Score: 200 ದಾಟಿದ ಹೈದರಾಬಾದ್ ಮೊತ್ತ
SRH vs DC Live Score Updates
  • Share this:
ದುಬೈ (ಅ. 27): 13ನೇ ಆವೃತ್ತಿ ಐಪಿಎಲ್​ನ 47ನೇ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಡೇವಿಡ್ ವಾರ್ನರ್ ನಾಯಕತ್ವದ ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಮುಖಾಮುಖಿ ಆಗುತ್ತಿವೆ. ಎಸ್​ಆರ್​ಹೆಚ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾದರೆ, ಇತ್ತ ಡೆಲ್ಲಿ ಗೆದ್ದರೆ ಅಗ್ರಸ್ಥಾನಕ್ಕೇರಿ ಪ್ಲೇ ಆಫ್ ಹಂತವನ್ನು ಖಚಿತಪಡಿಸಲಿದೆ.

ಸದ್ಯ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದಿರುವ ಹೈದರಾಬಾದ್ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ಗಳಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಹಾಗೂ ವೃದ್ದಿಮಾನ್ ಸಾಹ ಬೌಂಡರಿ-ಸಿಕ್ಸರ್​ಗಳ ಮಳೆ ಸುರಿಸಿದರು. ಕೇವಲ 6 ಓವರ್​ಗೂ ಮುನ್ನವೇ ತಂಡದ ಮೊತ್ತವನ್ನು 70ರ ಗಡಿ ದಾಟಿಸಿದರು.

ಹುಟ್ಟುಹಬ್ಬದ ದಿನ ಅಬ್ಬರಿಸಿದ ವಾರ್ನರ್ ಕೇವಲ 25 ಎಸೆತಗಳಲ್ಲಿ 50 ರನ್ ಪೂರೈಸಿದರು. ಇವರ ಸ್ಫೋಟಕ ಆಟಕ್ಕೆ ಬ್ರೇಕ್ ಹಾಕಿದ್ದು ಆರ್. ಅಶ್ವಿನ್. 10ನೇ ಓವರ್​ನಲ್ಲಿ ಸಿಕ್ಸ್​ ಸಿಡಿಸುವಲ್ಲಿ ಎಡವಿದ ಡೇವಿಡ್ 34 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ 66 ರನ್ ಚಚ್ಚಿದರು.

ವಾರ್ನರ್ ನಿರ್ಗಮನದ ಬಳಿಕ ಶುರುವಾಗಿದ್ದು ಸಾಹ ಆಟ. ಮನೀಶ್ ಪಾಂಡೆ ಜೊತೆಸೇರಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವೃದ್ದಿಮಾನ್ 14 ಓವರ್ ಆಗುವ ಹೊತ್ತಿಗೆ ತಂಡದ ಮೊತ್ತವನ್ನು 170ಕ್ಕೆ ತಂದಿಟ್ಟು ಔಟ್ ಆದರು. ಸಾಹ ಸ್ಫೋಟಕ ಆಟದಲ್ಲಿ 12 ಬೌಂಡರಿ, 2 ಸಿಕ್ಸರ್ ಸೇರಿ 87 ರನ್ ಬಾರಿಸಿದರು.

ಇಂದಿನ ಪಂದ್ಯಕ್ಕೆ ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್: ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಶಿಮ್ರೋನ್ ಹೆಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ತುಷಾರ್ ದೇಶಪಾಂಡೆ, ಕಗಿಸೊ ರಬಡಾ, ಆನ್ರಿಚ್ ನಾರ್ಟ್ಜೆ.

ಎಸ್​ಆರ್​ಹೆಚ್​ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಕೇನ್ ವಿಲಿಯಮ್ಸನ್, ವೃದ್ದಿಮಾನ್ ಸಾಹ ಹಾಗೂ ಶಹ್ಬಾಜ್ ನದೀಂ ಸ್ಥಾನ ಪಡೆದುಕೊಂಡಿದ್ದಾರೆ.ಸನ್​ರೈಸರ್ಸ್​ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ವಿಜಯ್ ಶಂಕರ್, ವೃದ್ದಿಮಾನ್ ಸಾಹ, ಜೇಸನ್ ಹೋಲ್ಡರ್, ಶಹ್ಬಾಜ್ ನದೀಂ, ರಶೀದ್ ಖಾನ್, ಅಬ್ದುಲ್ ಸಮದ್, ಸಂದೀಪ್ ಶರ್ಮಾ, ಟಿ. ನಟರಾಜನ್.

ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ 11 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಸಾಧಿಸಿ, ನಾಲ್ಕರಲ್ಲಿ ಸೋಲುಂಡಿದೆ. ಸದ್ಯ 2ನೇ ಸ್ಥಾನದಲ್ಲಿದೆ. ಇತ್ತ ಹೈದರಾಬಾದ್ 11 ಪಂದ್ಯಗಳಲ್ಲಿ ಕೇವಲ 4ರಲ್ಲಿ ಜಯ ಸಾಧಿಸಿ 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಯ್ಯರ್ ಪಡೆ ಈ ಹಿಂದಿನ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವುದು ತಂಡಕ್ಕೆ ಸ್ವಲ್ಪ ಹಿನ್ನಡೆಯಾಗಿದೆ. ಆದರೆ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರುವ ಇರಾದೆಯಲ್ಲಿದೆ.

ಇತ್ತ ಉಳಿದಿರುವ ಮೂರು ಪಂದ್ಯವನ್ನೂ ಗೆದ್ದರು ಹೈದರಾಬಾದ್ ಪ್ಲೇ ಆಫ್​ಗೆ ಏರುವುದು ಖಚಿತವಿಲ್ಲ. ಇತರೆ ತಂಡಗಳ ಪ್ರದರ್ಶನದ ಮೇಲೆ ವಾರ್ನರ್ ಪಡೆಯ ಭವಿಷ್ಯ ನಿರ್ಧಾರವಾಗಲಿದೆ. ಮಧ್ಯಮ ಕ್ರಮಾಂಕವೇ ಎಸ್​ಆರ್​ಹೆಚ್​ಗೆ ಮುಳುವಾಗಿದೆ. ಆರಂಭದಲ್ಲಿ ವಾರ್ನರ್, ಬೈರ್​ಸ್ಟೋ, ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ಬಿಟ್ಟರೆ ನಂತರದ ಸ್ಥಾನದಲ್ಲಿ ಅಬ್ಬರಿಸುವ ಬ್ಯಾಟ್ಸ್​ಮನ್ ಯಾರೂ ಇಲ್ಲ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 16 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿದ ಇತಿಹಾಸವಿದೆ.
Published by: Vinay Bhat
First published: October 27, 2020, 7:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories