SRH vs MI, IPL 2020 Live Score: ಎಸ್ಆರ್ಹೆಚ್ ಭರ್ಜರಿ ಕಮ್ಬ್ಯಾಕ್: ಮುಂಬೈ 7 ವಿಕೆಟ್ ಪತನ
IPL 2020, Sunrisers Hyderabad vs Mumbai Indians Live Score: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಸನ್ರೈಸರ್ಸ್ ಹೈದರಾಬಾದ್ ಪಡೆಗೆ ಮಾಡು ಇಲ್ಲ ಮಡಿ ಪಂದ್ಯವಾಗಿದೆ. ಈ ಪಂದ್ಯದ ಫಲಿತಾಂಶದ ಮೇಲೆ ಕೆಕೆಆರ್ ತಂಡದ ಪ್ಲೇ ಆಫ್ ಪ್ರವೇಶದ ಅವಕಾಶ ನಿಂತಿದೆ.
ಶಾರ್ಜಾ (ನ. 03): 13ನೇ ಆವೃತ್ತಿಯ ಐಪಿಎಲ್ನಲ್ಲಿಂದು ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಡೇವಿಡ್ ವಾರ್ನರ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೀರೊನ್ ಪೊಲಾರ್ಡ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಅಂತಿಮ ಹಣಾಹಣಿಯಲ್ಲಿ ಕಾದಾಟ ನಡೆಸುತ್ತಿವೆ. ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಇವತ್ತಿನ ಪಂದ್ಯದಲ್ಲಿ ವಾರ್ನರ್ ಪಡೆಗೆ ಮಾಡು ಇಲ್ಲ ಮಡಿ ಪಂದ್ಯವಾಗಿದೆ. ಈ ಪಂದ್ಯದ ಫಲಿತಾಂಶದ ಮೇಲೆ ಕೆಕೆಆರ್ ತಂಡದ ಪ್ಲೇ ಆಫ್ ಪ್ರವೇಶದ ಅವಕಾಶ ನಿಂತಿದೆ. ಹೈದರಾಬಾದ್ ಸೋತರೆ ಕೆಕೆಆರ್ ನಾಲ್ಕನೇ ತಂಡವಾಗಿ ಪ್ಲೇ ಆಫ್ ಪ್ರವೇಶ ಪಡೆಯುತ್ತದೆ.
ಸದ್ಯ ಟಾಸ್ ಸೋತು ಬ್ಯಾಟಿಂಗ್ಗೆ ಇಳಿದಿರುವ ಮುಂಬೈ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆ 2 ವಿಕೆಟ್ ಕಳೆದುಕೊಂಡಿದೆ. ಇಂಜುರಿಯಿಂದ ಗುಣಮುಖರಾಗಿ ಕಮ್ಬ್ಯಾಕ್ ಮಾಡಿರುವ ನಾಯಕ ರೋಹಿತ್ ಶರ್ಮಾ ಕೇವಲ 4 ರನ್ ಗಳಿಸಿ ಔಟ್ ಆದರು. ಡಿಕಾಕ್ 2 ಬೌಂಡರಿ, 2 ಸಿಕ್ಸರ್ ಸಿಡಿಸಿ 13 ಎಸೆತಗಳಲ್ಲಿ 25 ರನ್ ಬಾರಿಸಿ ನಿರ್ಗಮಿಸಿದರು.
ಚೆನ್ನಾಗಿಯೇ ಆಡುತ್ತಿದ್ದ ಸೂರ್ಯಕುಮಾರ್(36) ನದೀಂ ಸ್ಪಿನ್ ಬಲೆಗೆ ಸಿಲುಕಿದರೆ, ಕ್ರುನಾಲ್ ಪಾಂಡ್ಯ ಸೊನ್ನೆ ಸುತ್ತಿದರು. ಸೌರಭ್ ತಿವಾರಿ ಆಟ 1 ರನ್ಗೆ ಅಂತ್ಯವಾಯಿತು. ಸದ್ಯ ಕ್ರೀಸ್ನಲ್ಲಿ ಇಶಾನ್ ಕಿಶನ್ ಹಾಗೂ ಕೀರೊನ್ ಪೊಲಾರ್ಡ್ ಇದ್ದಾರೆ.
ಇಂದಿನ ಪಂದ್ಯಕ್ಕೆ ಎಸ್ಆರ್ಹೆಚ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಭಿಷೇಕ್ ಶರ್ಮಾ ಬದಲು ಪ್ರಿಯಂ ಗರ್ಗ್ ಸ್ಥಾನ ಪಡೆದುಕೊಂಡಿದ್ದಾರೆ.
ಮುಂಬೈ ತಂಡದಲ್ಲಿ ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಟ್ರೆಂಟ್ ಬೌಲ್ಟ್ಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾ, ಜೇಮ್ಸ್ ಪ್ಯಾಟಿನ್ಸನ್ ಹಾಗೂ ಧವಳ್ ಕುಲ್ಕರ್ಣಿಗೆ ಅವಕಾಶ ನೀಡಲಾಗಿದೆ.
ಹ್ಯಾಟ್ರಿಕ್ ಗೆಲುವಿನೊಂದಿಗೆ ನೇರವಾಗಿ ಅರ್ಹತೆ ಪಡೆಯುವ ಗುರಿಯಲ್ಲಿರುವ ಸನ್ರೈಸರ್ಸ್ ತಂಡ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿದೆ. ಸ್ಟಾರ್ ಬ್ಯಾಟ್ಸ್ಮನ್ಗಳಿದ್ದರೂ ತಂಡಕ್ಕೆ ದಿಢೀರ್ ಕುಸಿತದ ಭೀತಿ ಕಾಡುತ್ತಿದೆ.
ಅದರಲ್ಲೂ ಎಸ್ಆರ್ಹೆಚ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳ ವೈಫಲ್ಯ ತಂಡವನ್ನು ಕಾಡುತ್ತಿದೆ. ಜೇಸನ್ ಹೋಲ್ಡರ್ ತಂಡಕ್ಕೆ ಆಗಮಿಸಿದ ಬಳಿಕ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಬಲ ತುಂಬುತ್ತಿದ್ದಾರೆ.
ಟೂರ್ನಿಯಲ್ಲಿ ಈಗಾಗಲೇ 13 ರಲ್ಲಿ 6 ಪಂದ್ಯಗಳಲ್ಲಿ ಗೆದ್ದಿರುವ ವಾರ್ನರ್ ಪಡೆ, ಪಾಯಿಂಟ್ ಟೇಬಲ್ನಲ್ಲಿ +0.555 ನೆಟ್ ರನ್ರೇಟ್ನಿಂದ 5ನೇ ಸ್ಥಾನ ಕಾಯ್ದುಕೊಂಡಿದೆ. ಮುಂದಿನ ಪ್ಲೇ ಆಫ್ ಹಂತಕ್ಕೇರಲು, ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ಕೊನೆಯ ಲೀಗ್ ಪಂದ್ಯ ಮುಂಬೈ ಇಂಡಿಯನ್ಸ್ ಪಾಲಿಗೆ ಯಾವ ಪರಿಣಾಮ ಬೀರದ ಪಂದ್ಯ. ಇದನ್ನ ಸೋತರೂ ಮುಂಬೈನ ಅಗ್ರಸ್ಥಾನಕ್ಕೆ ಯಾವುದೇ ಸಂಚಕಾರ ಇರುವುದಿಲ್ಲ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲೂ ಮುಂಬೈನ ಬ್ಯಾಟಿಂಗ್ ಸ್ಫೋಟಕ ಶಕ್ತಿ ಹೊಂದಿದೆ.
Published by:Vinay Bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ