ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಆರ್ಭಟ ಮುಂದುವರೆದಿದೆ. ಆಡಿರುವ 6 ಪಂದ್ಯಗಳಲ್ಲಿ 4 ರಲ್ಲಿ ಭರ್ಜರಿ ಜಯ ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕಳೆದ ಸೀಸನ್ಗೆ ಹೋಲಿಸಿದರೆ ಈ ಬಾರಿ ಕೊಹ್ಲಿ ಪಡೆ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಯುಎಇ ಐಪಿಎಲ್ ಗೆಲ್ಲುವ ಫೇವರೀಟ್ ತಂಡಗಳಲ್ಲಿ ಆರ್ಸಿಬಿ ಗುರುತಿಸಿಕೊಂಡಿದೆ. ಅದರಲ್ಲೂ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಭರ್ಜರಿ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ.
ಇತ್ತ ಆರ್ಸಿಬಿ ಕಪ್ತಾನ ವಿರಾಟ್ ಕೊಹ್ಲಿ ಕೂಡ ನಾಯಕನಿಗೆ ತಕ್ಕ ಆಟವನ್ನು ಪ್ರದರ್ಶಿಸುತ್ತಿದ್ದಾರೆ. ಕೊಹ್ಲಿ-ಧೋನಿ ಕಾಳಗ ಎಂದು ಬಿಂಬಿತವಾಗಿದ್ದ ಆರ್ಸಿಬಿ-ಸಿಎಸ್ಕೆ ಪಂದ್ಯದಲ್ಲಿ ಕೊಹ್ಲಿ ಅಜೇಯ 90 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 169 ಕ್ಕೆ ತಂದು ನಿಲ್ಲಿಸಿದರು. ಈ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಸಿಎಸ್ಕೆ 37 ರನ್ಗಳ ಸೋಲನುಭವಿಸಿತು.
ಈ ಭರ್ಜರಿ ಗೆಲುವಿಗೆ ಮತ್ತೊಂದು ಕಾರಣ ಆರ್ಸಿಬಿ ಆಲ್ರೌಂಡರ್ ಕ್ರಿಸ್ ಮೋರಿಸ್. ಮೊದಲ ಪಂದ್ಯದಲ್ಲೇ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ವೇಗಿ 4 ಓವರ್ಗಳಲ್ಲಿ 19 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಆರ್ಸಿಬಿ ಪರ ಆಡಿದ ಮೊದಲ ಪಂದ್ಯದಲ್ಲೇ ಗೆಲುವು ದಾಖಲಿಸಿದ ಖುಷಿ ಹಂಚಿಕೊಂಡ ಮೋರಿಸ್, ಗೆಲುವಿನ ಎಲ್ಲಾ ಶ್ರೇಯಸ್ಸನ್ನು ನಾಯಕನಿಗೆ ನೀಡಿದರು.
ವಿರಾಟ್ ಕೊಹ್ಲಿ ಅದ್ಭುತ ಪ್ರತಿಭೆ. ಅವರೇ ಮುಂದೆ ನಿಂತು ತಂಡವನ್ನು ಮುನ್ನಡೆಸಲು ಇಷ್ಟಪಡುತ್ತಾರೆ. ಸಿಎಸ್ಕೆ ಅನುಭವಿ ಬೌಲಿಂಗ್ ವಿರುದ್ಧವಾಗಿ ಅವರು ಉತ್ತಮವಾಗಿ ಆಡಿದ್ದಾರೆ. ತಾನೇ ಮುಂದೆ ನಿಂತು ಪಂದ್ಯದ ಗತಿಯನ್ನೇ ಬದಲಿಸಿದ್ದಾರೆ. ಕೊಹ್ಲಿ ಯಾವಾಗಲೂ ಗೆಲುವನ್ನು ಬಯಸುವ ಆಟಗಾರ. ಅಂತಹ ಒಂದು ಮನಸ್ಥಿತಿ ಉಳಿದ ಆಟಗಾರರ ಮೇಲೂ ಪ್ರಭಾವ ಬೀರುತ್ತದೆ. ಒಟ್ಟಾರೆ ಆರ್ಸಿಬಿ ನಾಯಕನ ನಡೆಯು ನನಗೆ ತುಂಬಾ ಇಷ್ಟವಾಗಿದೆ ಎಂದು ಮೋರಿಸ್ ಶ್ಲಾಘಿಸಿದರು.
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
ಇದನ್ನೂ ಓದಿ: IPL 2020: ಐಪಿಎಲ್ನಲ್ಲಿ ದ್ರಾವಿಡ್ ಗರಡಿ ಹುಡುಗರ ಮಿಂಚಿಂಗ್..! ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ