news18-kannada Updated:October 16, 2020, 4:44 PM IST
yuvraj singh
ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯುವ ಮೂಲಕ ಗೇಲ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಮತ್ತೆ ಮಿಂಚಿದರು. ಐಪಿಎಲ್ 2020 ಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ 45 ಎಸೆತಗಳಲ್ಲಿ 53 ರನ್ ಬಾರಿಸಿ ಗಮನ ಸೆಳೆದರು. ಈ ಅರ್ಧಶತಕದ ಇನಿಂಗ್ಸ್ನಲ್ಲಿ ಗೇಲ್ ಬ್ಯಾಟ್ನಿಂದ ಒಂದು ಫೋರ್ ಹಾಗೂ 5 ಸಿಕ್ಸರ್ಗಳು ಸಿಡಿದಿದ್ದವು. ಈ ಪಂದ್ಯದಲ್ಲಿ ಗೇಲ್ ಸಿಡಿಸಿದ ಸಿಕ್ಸರ್ಗಳ ಬಗ್ಗೆ ಟೀಮ್ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ-ಕಿಂಗ್ಸ್ ಇಲೆವೆನ್ ಪಂಜಾಬ್ ಪಂದ್ಯದ ಬಳಿಕ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ಬ್ಯಾಟ್ನ ಮಧ್ಯಭಾಗಕ್ಕೆ ಚೆಂಡು ತಾಗಿದರೆ ಅದು ಶಾರ್ಜಾದಿಂದ ಅಬುಧಾಬಿಗೆ ಹೋಗಿ ಬೀಳಬಹುದು ಎಂದು ಗೇಲ್ ಬ್ಯಾಟಿಂಗ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲದೆ ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಯುವಿ, ಇಬ್ಬರು ಉತ್ತಮ ಆರಂಭ ಒದಗಿಸಿದ್ದರು. ಅವರಿಬ್ಬರಿಂದಲೇ ಗುರಿ ತಲುಪಲಿದೆ ಎಂದು ಭಾವಿಸಿದ್ದೆ ಎಂದು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಆರ್ಸಿಬಿ ಎಬಿ ಡಿವಿಲಿಯರ್ಸ್ನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಸಿದ ಬಗ್ಗೆಯೂ ಯುವಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದಿದ್ದರು. ಸಾಮಾನ್ಯವಾಗಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಎಬಿಡಿ ಗುರುವಾರ 6ನೇ ಸ್ಥಾನದಲ್ಲಿ ಕ್ರೀಸ್ಗೆ ಇಳಿದಿರುವುದು ಅಚ್ಚರಿಯಾಯಿತು ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
ಇದನ್ನೂ ಓದಿ: IPL 2020: ರಾಹುಲ್ ಸಲಹೆಗೆ ಕೊಹ್ಲಿಯ ಕೌಂಟರ್..!
Published by:
zahir
First published:
October 16, 2020, 4:44 PM IST