ಐಪಿಎಲ್ ಟೂರ್ನಿಗೆ ಇದೀಗ ಕೊರೋನಾಂತಕ ಎದುರಾಗಿದೆ. ಕೆಕೆಆರ್ ತಂಡದ ಇಬ್ಬರು ಆಟಗಾರರು ಕೊರೋನಾ ಪಾಸಿಟಿವ್ ಆಗಿದ್ದ ಕಾರಣ ಆರ್ಸಿಬಿ ನಡುವಣ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೂವರು ಸದಸ್ಯರೂ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಮುಂಬೈ ಇಂಡಿಯನ್ಸ್ ಆಟಗಾರರಲ್ಲೂ ಕೊರೋನಾ ಆತಂಕ ಎದುರಾಗಿದೆ ಎಂದು ವರದಿಯಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಕೋಚ್ ಲಕ್ಷ್ಮಿಪತಿ ಬಾಲಾಜಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಬಾಲಾಜಿ ಮೇ 1 ರಂದು ದೆಹಲಿಯಲ್ಲಿ ನಡೆದ ಚೆನ್ನೈ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಹಲವು ಮುಂಬೈ ಇಂಡಿಯನ್ಸ್ ಸದಸ್ಯರನ್ನು ಭೇಟಿಯಾಗಿದ್ದರು. ಪ್ರೋಟೋಕಾಲ್ ನಿಯಮದ ಪ್ರಕಾರ, ಮುಂಬೈನ ಆಟಗಾರರನ್ನು ಸಹ ಕೋವಿಡ್ ಟೆಸ್ಟ್ಗೆ ಒಳಪಡಿಸಬೇಕಾಗುತ್ತದೆ. ಹೀಗಾಗಿ ಮಂಗಳವಾರ ನಡೆಯಲಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಮುಂಬೈ ಇಂಡಿಯನ್ಸ್ ಕಣಕ್ಕಿಳಿಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಮತ್ತೊಂದೆಡೆ ದೆಹಲಿ ಕ್ರಿಕೆಟ್ ಮೈದಾನದ ಐವರು ಸಿಬ್ಬಂದಿಗಳಲ್ಲೂ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಇವರಲ್ಲಿ ಕೆಲವರು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯದ ವೇಳೆ ಸಂಪರ್ಕಕ್ಕೆ ಬಂದಿರುವ ಸಾಧ್ಯತೆಗಳಿವೆ ”ಎಂದು ಡಿಡಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಈ ಆಟಗಾರರು ಕೂಡ ಕೋವಿಡ್ ಟೆಸ್ಟ್ಗೆ ಒಳಗಾಗಬೇಕಾಗಿ ಬರಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ