CSK vs SRH: ವಾರ್ನರ್, ಪಾಂಡೆ ಅರ್ಧಶತಕ: ಸಿಎಸ್​ಕೆಗೆ ಸ್ಪರ್ಧಾತ್ಮಕ ಸವಾಲು ನೀಡಿದ ಎಸ್​ಆರ್​ಹೆಚ್

ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ , ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ಕೇದರ್ ಜಾಧವ್, ವಿಜಯ್ ಶಂಕರ್, ರಶೀದ್ ಖಾನ್, ಜಗದೀಶ್ ಸುಚಿತ್.

Warner

Warner

 • Share this:
  ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 172 ರನ್​ಗಳ ಕಠಿಣ ಗುರಿ ನೀಡಿದೆ. ನಾಯಕ ಡೇವಿಡ್ ವಾರ್ನರ್ ಹಾಗೂ ಮನೀಷ್ ಪಾಂಡೆ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಎಸ್​ಆರ್​ಹೆಚ್​ ಬೃಹತ್ ಮೊತ್ತ ಪೇರಿಸಿತು.

  ಇದಕ್ಕೂ ಮುನ್ನ ಟಾಸ್ ಜಯಿಸಿ ಬ್ಯಾಟಿಂಗ್ ಆರಂಭಿಸಿದರೂ ಸನ್​ರೈಸರ್ಸ್​ ಹೈದರಾಬಾದ್ ಆರಂಭ ಉತ್ತಮವಾಗಿರಲಿಲ್ಲ. ತಂಡದ ಆರಂಭಿಕ ಜಾನಿ ಬೈರ್​ಸ್ಟೋವ್ (7) 4ನೇ ಓವರ್​ನಲ್ಲಿ ಸ್ಯಾಮ್​ ಕರನ್​ಗೆ ವಿಕೆಟ್ ಒಪ್ಪಿಸಿದ್ದರು. ಈ ವೇಳೆ ಡೇವಿಡ್ ವಾರ್ನರ್​ ಜೊತೆಗೂಡಿದ ಮನೀಷ್ ಪಾಂಡೆ ಉತ್ತಮ ಜೊತೆಯಾಟವಾಡಿದರು. ಅದರಂತೆ 14 ಓವರ್ ಮುಕ್ತಾಯದ ವೇಳೆಗೆ ತಂಡದ ಮೊತ್ತ 102ಕ್ಕೆ ಬಂದು ನಿಂತಿತು. ಈ ನಡುವೆ ಮನೀಷ್ ಪಾಂಡೆ 35 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

  ಇನ್ನೊಂದೆಡೆ ಎಚ್ಚರಿಕೆಯ ಆಟವಾಡಿದ ಡೇವಿಡ್ ವಾರ್ನರ್ 50ನೇ ಎಸೆತದ ಮೂಲಕ ಐಪಿಎಲ್​ನ 50ನೇ ಅರ್ಧಶತಕವನ್ನು ಪೂರೈಸಿದರು. ಅಲ್ಲದೆ ಮನೀಷ್ ಪಾಂಡೆ ಜೊತೆಗೂಡಿ 80 ಎಸೆತಗಳಲ್ಲಿ ಶತಕದ ಜೊತೆಯಾಟವಾಡಿದರು. ಇದರ ಬೆನ್ನಲ್ಲೇ ವಾರ್ನರ್ (57) ಲುಂಗಿ ಎನ್​ಗಿಡಿಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇದರ ಬೆನ್ನಲ್ಲೇ ಮನೀಷ್ ಪಾಂಡೆ (61) ಕೂಡ ಕ್ಯಾಚ್ ನೀಡಿ ನಿರ್ಗಮಿಸಿದರು.

  ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕೇನ್ ವಿಲಿಯಮ್ಸನ್ ಶಾರ್ದುಲ್ ಠಾಕುರ್ ಎಸೆದ 19ನೇ ಓವರ್​ನಲ್ಲಿ 20 ರನ್ ಕಲೆಹಾಕಿದರು. ಹಾಗೆಯೇ 20ನೇ ಓವರ್​ನಲ್ಲಿ 13 ರನ್ ಕಲೆಹಾಕುವ ಮೂಲಕ ಸನ್​ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್​ನಲ್ಲಿ 3 ವಿಕೆಟ್ ನಷ್ಟದೊಂದಿಗೆ 171 ರನ್ ಪೇರಿಸಿತು.

  ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದುಲ್ ಠಾಕೂರ್, ಲುಂಗಿ ಎನ್‌ಗಿಡಿ, ದೀಪಕ್ ಚಹರ್.

  ಸನ್​ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ ಇಲೆವೆನ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ , ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ಕೇದರ್ ಜಾಧವ್, ವಿಜಯ್ ಶಂಕರ್, ರಶೀದ್ ಖಾನ್, ಜಗದೀಶ್ ಸುಚಿತ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಸಿದ್ದಾರ್ಥ್ ಕೌಲ್.
  Published by:zahir
  First published: