IPL 2021: ಒಂದೇ ಪಂದ್ಯದಲ್ಲಿ ಮೂರು ದಾಖಲೆ ಬರೆದ ಡೇವಿಡ್ ವಾರ್ನರ್..!

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್​ ಧವನ್​​ 43 ಹಾಫ್ ಸೆಂಚುರಿ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ, ಎಬಿಡಿ ವಿಲಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್​ ಶರ್ಮಾ ತಲಾ 40 ಅರ್ಧಶತಕ ಬಾರಿಸಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

david warner

david warner

 • Share this:
  ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ದ ನಡೆದ ಐಪಿಎಲ್​ 23ನೇ ಪಂದ್ಯದ ಮೂಲಕ ಸನ್​ರೈಸರ್ಸ್​ ಹೈದರಾಬಾದ್​ ತಂಡದ ನಾಯಕ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮೂರು ಪ್ರಮುಖ ದಾಖಲೆಗಳನ್ನು ಬರೆದಿದ್ದಾರೆ. ಸಿಎಸ್​ಕೆ ವಿರುದ್ದ ತಮ್ಮ 148ನೇ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ ವಾರ್ನರ್ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಹಾಫ್​ ಸೆಂಚುರಿಯೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 50 ಅರ್ಧಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ವಾರ್ನರ್ ಬರೆದರು.

  ಅರ್ಧಶತಕಗಳ ಸರದಾರರ ಪಟ್ಟಿಯಲ್ಲಿ ವಾರ್ನರ್ ಅಗ್ರಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್​ ಧವನ್​​ 43 ಹಾಫ್ ಸೆಂಚುರಿ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ, ಎಬಿಡಿ ವಿಲಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್​ ಶರ್ಮಾ ತಲಾ 40 ಅರ್ಧಶತಕ ಬಾರಿಸಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

  ಇನ್ನು ಈ ಅರ್ಧಶತಕದೊಂದಿಗೆ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ 4ನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಆಸ್ಟ್ರೇಲಿಯಾ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ವಾರ್ನರ್ ಪಾತ್ರರಾದರು. ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ , ಕೀರನ್ ಪೊಲಾರ್ಡ್ ಮತ್ತು ಪಾಕಿಸ್ತಾನದ ಶೋಯೆಬ್ ಮಲಿಕ್ 10 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶೇಷ ಸಾಧಕರ ಪಟ್ಟಿಗೆ ವಾರ್ನರ್ ಎಂಟ್ರಿ ಕೊಟ್ಟಿದ್ದಾರೆ.

  ಹಾಗೆಯೇ ವಾರ್ನರ್​ ಬಾರಿಸಿದ ಅರ್ಧಶತಕದಲ್ಲಿ 2 ಭರ್ಜರಿ ಸಿಕ್ಸರ್​ಗಳು ಮೂಡಿಬಂದಿದ್ದವು. ಇದರೊಂದಿಗೆ ಐಪಿಎಲ್​ನಲ್ಲಿ 200 ಸಿಕ್ಸ್ ಬಾರಿಸಿದ ಎಂಟನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಡೇವಿಡ್ ವಾರ್ನರ್ ಪಾತ್ರರಾದರು. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಆಸ್ಟ್ರೇಲಿಯಾ ಆಟಗಾರ ಎನಿಸಿಕೊಂಡರು. ಐಪಿಎಲ್​ನಲ್ಲಿ 354 ಸಿಕ್ಸ್ ಬಾರಿಸಿರುವ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ 245 ಸಿಕ್ಸ್ ಸಿಡಿಸಿರುವ ಎಬಿ ಡಿವಿಲಿಯರ್ಸ್​ ಇದ್ದಾರೆ. ಹಾಗೆಯೇ 222 ಸಿಕ್ಸ್​ ಬಾರಿಸಿರುವ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.
  Published by:zahir
  First published: