ಚೆನ್ನೈನಲ್ಲಿ ನಡೆಯುತ್ತಿರುವ ಐಪಿಎಲ್ನ 5ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದೆ. ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೋರ್ಗನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ಇಂಡಿಯನ್ಸ್ಗೆ 2ನೇ ಓವರ್ನಲ್ಲೇ ಸ್ಪಿನ್ನರ್ ವರುಣ್ ಚಕ್ರವರ್ತಿ ಆಘಾತ ನೀಡಿದರು. 2 ರನ್ಗಳಿಸಿದ್ದ ಕ್ವಿಂಟನ್ ಡಿಕಾಕ್ ವಿಕೆಟ್ ಪಡೆಯುವ ಮೂಲಕ ಕೆಕೆಆರ್ಗೆ ಮೊದಲ ಯಶಸ್ಸು ತಂದುಕೊಟ್ಟರು. ಈ ಹಂತದಲ್ಲಿ ಕ್ರೀಸ್ಗೆ ಆಗಮಿಸಿದ ಸೂರ್ಯಕುಮಾರ್ ಯಾದವ್ ನಾಯಕ ರೋಹಿತ್ ಶರ್ಮಾ ಜೊತೆಗೂಡಿ ಉತ್ತಮ ಬ್ಯಾಟಿಂಗ್ ನಡೆಸಿದರು. ಪರಿಣಾಮ ಪವರ್ಪ್ಲೇ ಮುಕ್ತಾಯದ ವೇಳೆ ಮುಂಬೈ ಮೊತ್ತವು 42ಕ್ಕೆ ಬಂದು ನಿಂತಿತು.
6 ಓವರ್ಗಳ ಬಳಿಕ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಈ ಜೋಡಿ ಕೇವಲ 37 ಎಸೆತಗಳಲ್ಲಿ ಅರ್ಧಶತಕಗಳ ಜೊತೆಯಾಟ ಪೂರೈಸಿದರು. ಇದರ ಬಳಿಕ ಅಬ್ಬರಿಸಲಾರಂಭಿಸಿದ ಸೂರ್ಯಕುಮಾರ್ ಯಾದವ್ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು. ಅಲ್ಲದೆ ಮೊದಲ 10 ಓವರ್ನಲ್ಲಿ ತಂಡದ ಮೊತ್ತವನ್ನು 81ಕ್ಕೆ ತಂದು ನಿಲ್ಲಿಸಿದರು.
ಹಾಫ್ ಸೆಂಚುರಿ ಬೆನ್ನಲ್ಲೇ ಶಕೀಬ್ ಅಲ್ ಹಸನ್ಗೆ ವಿಕೆಟ್ ಒಪ್ಪಿಸಿ ಸೂರ್ಯಕುಮಾರ್ ಯಾದವ್ (56) ಹೊರ ನಡೆದರು. ಈ ವೇಳೆ ಕ್ರೀಸ್ಗೆ ಆಗಮಿಸಿದ ಇಶಾನ್ ಕಿಶನ್ (1) ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಔಟಾಗಿ ನಿರ್ಗಮಿಸಿದರು. ಈ ಹಂತದಲ್ಲಿ ರೋಹಿತ್ ಶರ್ಮಾ ಜೊತೆಗೂಡಿದ ಹಾರ್ದಿಕ್ ಪಾಂಡ್ಯ ಇನಿಂಗ್ಸ್ ಕಟ್ಟುವ ಜವಾಬ್ದಾರಿವಹಿಸಿಕೊಂಡರು. ಅದರಂತೆ 14ನೇ ಓವರ್ ವೇಳೆಗೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಆದರೆ ಪ್ಯಾಟ್ ಕಮಿನ್ಸ್ ಎಸೆದ 15ನೇ ಓವರ್ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ (43) ಕ್ಲೀನ್ ಬೌಲ್ಡ್ ಆದರು. ಹಾಗೆಯೇ 17ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯ (15) ಕೂಡ ವಿಕೆಟ್ ಒಪ್ಪಿಸಿದರು.
17 ಓವರ್ ಮುಕ್ತಾಯದ ವೇಳೆಗೆ ಮುಂಬೈ ಇಂಡಿಯನ್ಸ್ ಮೊತ್ತವು 5 ವಿಕೆಟ್ ನಷ್ಟಕ್ಕೆ 125 ಆಗಿತ್ತು. ರಸೆಲ್ ಎಸೆದ 18ನೇ ಓವರ್ನಲ್ಲಿ ಕೀರನ್ ಪೊಲಾರ್ಡ್ (5) ಕೂಡ ಕೀಪರ್ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವೇಳೆ ಮೈದಾನಕ್ಕಿಳಿದ ಮಾರ್ಕೊ ಜಾನ್ಸನ್ ಬಂದ ವೇಗದಲ್ಲೇ ಶೂನ್ಯದೊಂದಿಗೆ ಮರಳಿದರು.
ಕೊನೆಯ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಕೃನಾಲ್ ಪಾಂಡ್ಯ (24) ಮೂರನೇ ಎಸೆತದಲ್ಲಿ ಕ್ಯಾಚ್ ನೀಡಿದರು. 4ನೇ ಎಸೆತದಲ್ಲಿ ಬುಮ್ರಾ ಕೂಡ ವಿಕೆಟ್ ಒಪ್ಪಿಸಿದರು. ಅಂತಿಮ ಎಸೆತದಲ್ಲಿ ರಾಹುಲ್ ಚಹರ್ ವಿಕೆಟ್ ಪಡೆಯುವುದರೊಂದಿಗೆ ಆ್ಯಂಡ್ರೆ ರಸೆಲ್ 5 ವಿಕೆಟ್ಗಳನ್ನು ಕಬಳಿಸಿದರು. ಅಲ್ಲದೆ ನಿಗದಿತ 20 ಓವರ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 152 ರನ್ಗಳಿಗೆ ಆಲೌಟ್ ಮಾಡಿದರು.
ಉಭಯ ತಂಡಗಳು ಈಗಾಗಲೇ ತಲಾ ಒಂದು ಪಂದ್ಯವನ್ನಾಡಿದ್ದು, ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡ ಎಸ್ಆರ್ಹೆಚ್ ವಿರುದ್ದ ಗೆಲುವು ದಾಖಲಿಸಿದರೆ, ಮುಂಬೈ ಇಂಡಿಯನ್ಸ್ ಆರ್ಸಿಬಿ ವಿರುದ್ದ ಉದ್ಘಾಟನಾ ಪಂದ್ಯದಲ್ಲಿ ಸೋಲುಂಡಿತ್ತು. ಹೀಗಾಗಿ ಇಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯಲು ರೋಹಿತ್ ಶರ್ಮಾ ಪಡೆ ಸಕಲ ಸಿದ್ದತೆಯಲ್ಲಿದೆ.
ಸ್ಕೋರ್: 152
ಓವರ್: 20
ಉಭಯ ತಂಡಗಳು ಈಗಾಗಲೇ ತಲಾ ಒಂದು ಪಂದ್ಯವನ್ನಾಡಿದ್ದು, ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡ ಎಸ್ಆರ್ಹೆಚ್ ವಿರುದ್ದ ಗೆಲುವು ದಾಖಲಿಸಿದರೆ, ಮುಂಬೈ ಇಂಡಿಯನ್ಸ್ ಆರ್ಸಿಬಿ ವಿರುದ್ದ ಉದ್ಘಾಟನಾ ಪಂದ್ಯದಲ್ಲಿ ಸೋಲುಂಡಿತ್ತು. ಹೀಗಾಗಿ ಇಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯಲು ರೋಹಿತ್ ಶರ್ಮಾ ಪಡೆ ಸಕಲ ಸಿದ್ದತೆಯಲ್ಲಿದೆ.
IPL 2021, KKR vs MI Playing 11: ಮುಂಬೈ ಟೀಮ್ನಲ್ಲಿ 1 ಬದಲಾವಣೆ: ಉಭಯ ತಂಡಗಳು ಹೀಗಿವೆ
ಇನ್ನು ಉಭಯ ತಂಡಗಳ ನಡುವಣ ಕದನದ ಅಂಕಿ ಅಂಶಗಳನ್ನು ಗಮನಿಸಿದರೆ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠವಾಗಿದೆ. ಏಕೆಂದರೆ ಇದುವರೆಗೆ ಈ ತಂಡಗಳು 27 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು ದಾಖಲಿಸಿರುವುದು ಕೇವಲ 6 ಬಾರಿ ಮಾತ್ರ. ಹಾಗೆಯೇ ಮುಂಬೈ ಇಂಡಿಯನ್ಸ್ 21 ಬಾರಿ ಜಯಗಳಿಸಿ ಕೆಕೆಆರ್ ವಿರುದ್ದ ಪಾರುಪತ್ಯ ಸಾಧಿಸಿದೆ. ಇನ್ನು ಕಳೆದ ಸೀಸನ್ ಐಪಿಎಲ್ನ ಎರಡೂ ಪಂದ್ಯಗಳಲ್ಲೂ ಮುಂಬೈ ಇಯಾನ್ ಮೋರ್ಗನ್ ಪಡೆಯನ್ನು ಬಗ್ಗು ಬಡಿದಿದೆ. ಅಲ್ಲದೆ ಕೊನೆಯ 10 ಪಂದ್ಯಗಳನ್ನು ಗಣನೆಗೆ ತೆಗೆದುಕೊಂಡರೆ ಕೆಕೆಆರ್ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ