KKR vs MI: ಮುಂಬೈ ತಂಡದಲ್ಲಿ 1 ಬದಲಾವಣೆ ಸಾಧ್ಯತೆ: ಇಂದು ಕಣಕ್ಕಿಳಿಯುವ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

ಉಭಯ ತಂಡಗಳ ನಡುವಣ ಕದನದ ಅಂಕಿ ಅಂಶಗಳನ್ನು ಗಮನಿಸಿದರೆ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠವಾಗಿದೆ. ಏಕೆಂದರೆ ಇದುವರೆಗೆ ಈ ತಂಡಗಳು 27 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಕೊಲ್ಕತ್ತಾ ನೈಟ್​ ರೈಡರ್ಸ್​ ಗೆಲುವು ದಾಖಲಿಸಿರುವುದು ಕೇವಲ 6 ಬಾರಿ ಮಾತ್ರ. ಹಾಗೆಯೇ ಮುಂಬೈ ಇಂಡಿಯನ್ಸ್ 21 ಬಾರಿ ಜಯಗಳಿಸಿ ಕೆಕೆಆರ್​ ವಿರುದ್ದ ಪಾರುಪತ್ಯ ಸಾಧಿಸಿದೆ.

KKR vs MI

KKR vs MI

 • Share this:
  ಇಂದು ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್​ನ 5ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ. ಕೆಕೆಆರ್​ ತಂಡವು ಭಾನುವಾರ ನಡೆದ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಅನ್ನು 10 ರನ್‌ಗಳಿಂದ ಸೋಲಿಸಿ 14ನೇ ಸೀಸನ್ ಆರಂಭಿಸಿದರೆ, ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ವಿರುದ್ದ ಮುಗ್ಗರಿಸುವ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹೊಸ ಆವೃತ್ತಿಯನ್ನು ಸೋಲಿನೊಂದಿಗೆ ಶುರು ಮಾಡಿಕೊಂಡಿದೆ.

  ಚೆನ್ನೈನ ಚಿದಂಬರಂ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಮುಂಬೈ 2 ವಿಕೆಟ್​ಗಳಿಂದ ಸೋಲನುಭವಿಸಿತು. ಇದಾಗ್ಯೂ ಮುಂಬೈ ಸಾಂಘಿಕ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಕಳೆದ ಪಂದ್ಯದಲ್ಲಿನ ಸಣ್ಣ ಪುಟ್ಟ ತಪ್ಪುಗಳಿಂದ ಪಾಠ ಕಲಿತು ಮುಂಬೈ ಇಂದು ಕಣಕ್ಕಿಳಿಯಲಿದೆ. ಅದೇ ಸಮಯದಲ್ಲಿ, ಇಯಾನ್ ಮೋರ್ಗನ್ ನಾಯಕತ್ವದ ಕೆಕೆಆರ್ ತಂಡ ಎಸ್​ಆರ್​ಹೆಚ್ ವಿರುದ್ದ 10 ರನ್​ಗಳ ರೋಚಕ ಜಯ ಸಾಧಿಸಿ ಬೀಗುತ್ತಿದೆ.

  ಮೊದಲ ಪಂದ್ಯದಲ್ಲೇ ನಿತೀಶ್ ರಾಣಾ ಮತ್ತು ರಾಹುಲ್ ತ್ರಿಪಾಠಿ ಅಬ್ಬರಿಸಿರುವುದು ಕೆಕೆಆರ್​ ಪಾಲಿಗೆ ಶುಭ ಸೂಚನೆ ಎನ್ನಬಹುದು. ಇದಾಗ್ಯೂ ಬೌಲಿಂಗ್​ ವಿಭಾಗವನ್ನು ಮತ್ತಷ್ಟು ಬಲಗೊಳಿಸಬೇಕಾದ ಅನಿವಾರ್ಯತೆ ಕೆಕೆಆರ್​ಗೆ ಇದೆ. ಮೊದಲ ಪಂದ್ಯದ ಗೆಲುವಿನ ಕಾರಣ ಇಂದಿನ ಪಂದ್ಯಕ್ಕಾಗಿ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ. ಹಾಗೆಯೇ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಒಂದು ಬದಲಾವಣೆ ಕಂಡು ಬರಬಹುದು. ಆರ್​ಸಿಬಿ ವಿರುದ್ದ 4 ಓವರ್‌ಗಳಲ್ಲಿ 43 ರನ್ ನೀಡಿದ್ದ ರಾಹುಲ್ ಚಹರ್ ಬದಲು ಇಂದು ಪಿಯೂಷ್ ಚಾವ್ಲಾ ಸ್ಥಾನ ಪಡೆಯುವ ಸಾಧ್ಯತೆಯಿದೆ. ಇದರ ಹೊರತಾಗಿ ಉಭಯ ತಂಡಗಳಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.

  ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ:-
  ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ರಿಸ್ ಲಿನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸನ್, ಪಿಯೂಷ್ ಚಾವ್ಲಾ, ಟ್ರೆಂಟ್ ಬೌಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.

  ಕೋಲ್ಕತಾ ನೈಟ್ ರೈಡರ್ಸ್: ನಿತೀಶ್ ರಾಣಾ, ಶುಭ್​ಮನ್ ಗಿಲ್, ಇಯಾನ್ ಮೋರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸ್ಸೆಲ್, ಶಕೀಬ್ ಅಲ್ ಹಸನ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ ಕೃಷ್ಣ ಮತ್ತು ವರುಣ್ ಚಕ್ರವರ್ತಿ.
  Published by:zahir
  First published: