PBKS vs SRH: ಕಿಂಗ್ಸ್​ vs ಸನ್​ರೈಸರ್ಸ್​​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಬೌಲರುಗಳ ವಿಭಾಗದಲ್ಲಿ ಪಂಜಾಬ್ ವೇಗಿ ಮೊಹಮ್ಮದ್ ಶಮಿ ಸನ್​ರೈಸರ್ಸ್ ವಿರುದ್ದ 20 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಸನ್​ರೈಸರ್ಸ್ ತಂಡದಲ್ಲಿರುವ ಮಾಂತ್ರಿಕ ಸ್ಪಿನ್ನರ್ ರಶೀದ್ ಖಾನ್ ಪಂಜಾಬ್ ವಿರುದ್ದ 20 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

PBKS-vs-SRH

PBKS-vs-SRH

 • Share this:
  ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿದೆ. ಎರಡೂ ತಂಡಗಳು ಈವರೆಗೆ ತಲಾ 3 ಪಂದ್ಯಗಳನ್ನಾಡಿದ್ದು, ಪಂಜಾಬ್ ಕಿಂಗ್ಸ್ 1 ಗೆಲುವು ದಾಖಲಿಸಿದರೆ, ಸನ್​ರೈಸರ್ಸ್​ ಮೂರರಲ್ಲೂ ಸೋತು ನಿರಾಸೆ ಮೂಡಿಸಿದೆ. ಹೀಗಾಗಿ ಇಂದಿನ ಪಂದ್ಯವು ಸೋತವರ ನಡುವಿನ ಕದನ ಎಂದೇ ವಿಶ್ಲೇಷಿಸಲಾಗುತ್ತಿದೆ.

  ಐಪಿಎಲ್​ನಲ್ಲಿ ಉಭಯ ತಂಡಗಳು ಇದುವರೆಗೆ 16 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಸನ್​ರೈಸರ್ಸ್​ ಹೈದರಾಬಾದ್ 11 ಬಾರಿ ಗೆಲುವು ದಾಖಲಿಸಿದರೆ, ಪಂಜಾಬ್ 5 ಬಾರಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಅಂಕಿ ಅಂಶಗಳ ಪ್ರಕಾರ ಸನ್​ರೈಸರ್ಸ್ ಹೈದರಾಬಾದ್ ಮೇಲುಗೈ ಹೊಂದಿದೆ. ಇನ್ನು ಕಳೆದ ಸೀಸನ್​ನಲ್ಲಿನ ಮುಖಾಮುಖಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಗೆಲುವು ದಾಖಲಿಸಿತ್ತು. ಇನ್ನು ಕೊನೆಯ ಹತ್ತು ಮುಖಾಮುಖಿಯಲ್ಲಿ ಪಂಜಾಬ್ 3 ಬಾರಿ ಮಾತ್ರ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಗೆಲುವು ದಾಖಲಿಸಿದೆ.

  ಇನ್ನು ಉಭಯ ತಂಡಗಳ ಮುಖಾಮುಖಿಯಲ್ಲಿ ಟಾಪ್ ರನ್ ಸರದಾರರು ಯಾರು ಎಂದು ನೋಡುವುದಾದರೆ, ಸನ್​ರೈಸರ್ಸ್​ ನಾಯಕ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದಾರೆ. ವಾರ್ನರ್ ಇದುವರೆಗೆ ಪಂಜಾಬ್ ವಿರುದ್ದ 661 ರನ್ ಕಲೆಹಾಕಿದ್ದಾರೆ. ನಂತರದ ಸ್ಥಾನದಲ್ಲಿ ಕೆಎಲ್ ರಾಹುಲ್ ಇದ್ದು, ಪಂಜಾಬ್ ನಾಯಕ ಇದುವರಗೆ 282 ರನ್ ಬಾರಿಸಿದ್ದಾರೆ.

  ಬೌಲರುಗಳ ವಿಭಾಗದಲ್ಲಿ ಪಂಜಾಬ್ ವೇಗಿ ಮೊಹಮ್ಮದ್ ಶಮಿ ಸನ್​ರೈಸರ್ಸ್ ವಿರುದ್ದ 20 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಸನ್​ರೈಸರ್ಸ್ ತಂಡದಲ್ಲಿರುವ ಮಾಂತ್ರಿಕ ಸ್ಪಿನ್ನರ್ ರಶೀದ್ ಖಾನ್ ಪಂಜಾಬ್ ವಿರುದ್ದ 20 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಉತ್ತಮ ಸಾಧನೆ ಮಾಡಿರುವ ಆಟಗಾರರು ಪ್ರಸ್ತುತ ತಂಡದಲ್ಲಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

  ಪಂದ್ಯದ ಸಮಯ: 3.30
  ಸ್ಥಳ: ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
  ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್​, ಹಾಟ್ ಸ್ಟಾರ್

  ಪಂಜಾಬ್ ಕಿಂಗ್ಸ್​: ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, ಅರ್ಷ್​ದೀಪ್ ಸಿಂಗ್ , ಡೇವಿಡ್ ಮಲನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್

  ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಟಿ ನಟರಾಜನ್, ಅಭಿಷೇಕ್ ಶರ್ಮಾ, ಶಹಬಾಜ್ ನದೀಮ್, ರಶೀದ್ ಖಾನ್, ಕೇದರ್ ಜಾಧವ್ , ಮುಜೀಬುರ್ ರೆಹಮಾನ್ , ಜೆ ಸುಚಿತ್
  Published by:zahir
  First published: