RR vs RCB: ರಾಯಲ್ಸ್​ಗೆ​ ರಾಯಲ್ ಚಾಲೆಂಜ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

RR ಹಾಗೂ RCB ಇದುವರೆಗೆ 23 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಉಭಯ ತಂಡಗಳು ತಲಾ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 3 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಮೂಡಿಬಂದಿಲ್ಲ.

rcb vs rr

rcb vs rr

 • Share this:
  ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲಲು ಉಭಯ ತಂಡಗಳು ರಣತಂತ್ರ ರೂಪಿಸಿದೆ. ಈಗಾಗಲೇ ಚೆನ್ನೈ ಪಿಚ್​ನಲ್ಲಿ ಸತತ ಮೂರು ಗೆಲುವು ದಾಖಲಿಸಿರುವ ಆರ್​ಸಿಬಿ ಮುಂಬೈನಲ್ಲೂ ಜಯದೊಂದಿಗೆ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಅತ್ತ ಮೂರು ಪಂದ್ಯಗಳಲ್ಲಿ 2 ಸೋಲು ಕಂಡಿರುವ ರಾಜಸ್ಥಾನ್ ರಾಯಲ್ಸ್ ಆರ್​ಸಿಬಿ ವಿರುದ್ದ ಗೆಲ್ಲುವ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

  ಮುಂಬೈ ಪಿಚ್​ ಬ್ಯಾಟಿಂಗ್​ ಸಹಕಾರಿಯಾಗಿದ್ದು, ಹೀಗಾಗಿ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಬಳಗದೊಂದಿಗೆ ಕಣಕ್ಕಿಳಿಯಲಿದೆ. ಏಕೆಂದರೆ ಈ ಮೈದಾನದಲ್ಲಿ ಇದುವರೆಗೆ 78 ಟಿ20 ಪಂದ್ಯಗಳನ್ನಾಡಲಾಗಿದೆ. ಅದರಲ್ಲಿ 37 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಆದರೆ ಚೇಸಿಂಗ್ ಮಾಡಿದ ತಂಡ ಗೆದ್ದಿರುವುದು 42 ಬಾರಿ ಎಂಬುದು ವಿಶೇಷ.

  ಇನ್ನು ಆರ್ಆರ್ ಹಾಗೂ ಆರ್​ಸಿಬಿ ಇದುವರೆಗೆ 23 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಉಭಯ ತಂಡಗಳು ತಲಾ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 3 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಮೂಡಿಬಂದಿಲ್ಲ. ಇನ್ನು ಕೊನೆಯ 5 ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್​ ಆರ್​ಸಿಬಿ ವಿರುದ್ದ 3 ಗೆಲುವು ದಾಖಲಿಸಿದೆ. ಆದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ರಾಜಸ್ಥಾನ್ ವಿರುದ್ದ 2 ಪಂದ್ಯಗಳನ್ನು ಗೆದ್ದುಕೊಂಡಿತ್ತು ಎಂಬುದು ವಿಶೇಷ.

  ಇನ್ನು ಉಭಯ ತಂಡಗಳ ಕದನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಯಾರು ಎಂದು ನೋಡುವುದಾದರೆ, ಎಬಿ ಡಿವಿಲಿಯರ್ಸ್ ಅಗ್ರಸ್ಥಾನದಲ್ಲಿದ್ದಾರೆ. ಎಬಿಡಿ ಇದುವರೆಗೆ ಆರ್​ಆರ್​ ವಿರುದ್ದ 484 ರನ್ ಬಾರಿಸಿದ್ದಾರೆ. ಹಾಗೆಯೇ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಕೂಡ ರಾಜಸ್ಥಾನ್ ವಿರುದ್ದ 482 ರನ್ ಕಲೆಹಾಕಿದ್ದಾರೆ. ಬೌಲರುಗಳ ವಿಭಾಗದಲ್ಲೂ ಆರ್​ಸಿಬಿ ಸ್ಪಿನ್ನರ್ ಯುಜುವೇಂದ್ರ ಚಹಲ್ ಅಗ್ರಸ್ಥಾನದಲ್ಲಿದ್ದಾರೆ. ಚಹಲ್ ರಾಜಸ್ಥಾನ್ ವಿರುದ್ದ ಇದುವರೆಗೆ 14 ವಿಕೆಟ್ ಪಡೆದಿದ್ದಾರೆ. ಆದರೆ ಆರ್​ಸಿಬಿ ವಿರುದ್ದ ಪ್ರಸ್ತುತ ರಾಜಸ್ಥಾನ್​ ತಂಡದಲ್ಲಿರುವ ಯಾವೊಬ್ಬ ಬೌಲರ್ ಕೂಡ 9 ಕ್ಕಿಂತ ಹೆಚ್ಚಿನ ವಿಕೆಟ್ ಪಡೆದಿಲ್ಲ ಎಂಬುದು ವಿಶೇಷ.

  ಈ ಎಲ್ಲಾ ಅಂಕಿ ಅಂಶಗಳನ್ನು ಗಮನಿಸಿದರೆ ರಾಜಸ್ಥಾನ್ ರಾಯಲ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮೇಲುಗೈ ಸಾಧಿಸಿರುವುದು ಸ್ಪಷ್ಟ. ಇದಾಗ್ಯೂ ಪಂದ್ಯ ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವುದರಿಂದ ಅಂತಿಮ ಹಂತದವರೆಗೂ ಹೋರಾಟವನ್ನು ನಿರೀಕ್ಷಿಸಬಹುದು.  ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಯುಜ್ವೇಂದ್ರ ಚಾಹಲ್, ದೇವದತ್ ಪಡಿಕ್ಕಲ್, ಹರ್ಷಲ್ ಪಟೇಲ್, ಡೇನಿಯಲ್ಸ್ ಸ್ಯಾಮ್ಸ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಆಡಮ್ ಝಂಪಾ, ಶಹಬಾಜ್ ಅಹ್ಮದ್, ಫಿನ್ ಅಲೆನ್, ಕೇನ್ ರಿಚರ್ಡ್ಸನ್, ಪವನ್ ದೇಶಪಾಂಡೆ, ಗ್ಲೆನ್ ಮ್ಯಾಕ್ಸ್ ವೆಲ್, ರಜತ್ ಪಟಿದಾರ್, ಮೊಹಮ್ಮದ್ ಅಜರುದ್ದೀನ್, ಕೈಲ್ ಜೇಮಿಸನ್, ಡಾನ್ ಕ್ರಿಶ್ಚಿಯನ್, ಸುಯೇಶ್ ಪ್ರಭುದೇಸಾಯಿ, ಕೆ.ಎಸ್.ಭರತ್  ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಮುಸ್ತಾಫಿಜುರ್ ರಹೀಮ್, ಚೇತನ್ ಸಕರಿಯಾ, ಕೆ.ಸಿ.ಕರಿಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್
  Published by:zahir
  First published: