HOME » NEWS » Ipl » IPL 2021 PBKS VS CSK PREDICTED PLAYING 11 ZP

PBKS vs CSK: ಧೋನಿ ಪಡೆಯಲ್ಲಿ 1 ಬದಲಾವಣೆ ಸಾಧ್ಯತೆ: ಉಭಯ ತಂಡಗಳು ಹೀಗಿರಲಿದೆ..!

ಆರಂಭಿಕರಾಗಿ ಕೆಎಲ್ ರಾಹುಲ್-ಮಯಾಂಕ್ ಕಣಕ್ಕಿಳಿಯಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ಗೇಲ್ ಬಂದರೆ, ಮೊದಲ ಪಂದ್ಯದಲ್ಲಿ ಅಬ್ಬರಿಸಿದ ದೀಪಕ್ ಹೂಡಾ ಇಂದು ಕೂಡ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. 5ನೇ ಕ್ರಮಾಂಕದಲ್ಲಿ ನಿಕೋಲಸ್ ಪೂರನ್ ಕಣಕ್ಕಿಳಿಯಲಿದ್ದಾರೆ.

news18-kannada
Updated:April 16, 2021, 5:35 PM IST
PBKS vs CSK: ಧೋನಿ ಪಡೆಯಲ್ಲಿ 1 ಬದಲಾವಣೆ ಸಾಧ್ಯತೆ: ಉಭಯ ತಂಡಗಳು ಹೀಗಿರಲಿದೆ..!
CSK vs PBKS
  • Share this:
ಕಳೆದ ಸೀಸನ್​ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ ಈ ಸೀಸನ್​ನ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಡೆಲ್ಲಿ ವಿರುದ್ದ ನಡೆದ ಪಂದ್ಯದಲ್ಲಿ ಸಿಎಸ್​ಕೆ 7 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇತ್ತ ರಾಜಸ್ಥಾನ್ ರಾಯಲ್ಸ್ ವಿರುದ್ದ 4 ರನ್​ಗಳ ರೋಚಕ ಜಯ ಸಾಧಿಸಿ ಪಂಜಾಬ್ ಕಿಂಗ್ಸ್ ಶುಭಾರಂಭ ಮಾಡಿತ್ತು. ಇದೀಗ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನ 8ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.

ಪಂಜಾಬ್ ಜಯ ಲಯವನ್ನು ಮುಂದುವರೆಸುವ ಇರಾದೆಯಲ್ಲಿದ್ದರೆ, ಸೋಲಿನಿಂದ ಗೆಲುವಿನ ಕಡೆ ಮುಖ ಮಾಡಲು ಚೆನ್ನೈ ಸೂಪರ್ ಕಿಂಗ್ಸ್ ಸಜ್ಜಾಗಿ ನಿಂತಿದೆ. ಉಭಯ ತಂಡಗಳು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ 180 ಕ್ಕೂ ಅಧಿಕ ರನ್ ಪೇರಿಸಿರುವುದು ವಿಶೇಷ. ಡೆಲ್ಲಿ ವಿರುದ್ದ ಸಿಎಸ್​ಕೆ 188 ರನ್ ಬಾರಿಸಿದರೆ, ರಾಜಸ್ಥಾನ್ ವಿರುದ್ದ ಪಂಜಾಬ್ 221 ರನ್ ಕಲೆಹಾಕಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರನ್​ಮಳೆ ಹರಿಯಲಿದೆ.

ಇದಾಗ್ಯೂ ಮೊದಲ ಪಂದ್ಯದಲ್ಲಿ ವಿಫಲರಾಗಿರುವ ಕೆಲ ಆಟಗಾರರನ್ನು ಸಿಎಸ್​ಕೆ ಇಂದು ಕೈ ಬಿಡುವ ಸಾಧ್ಯತೆಯಿದೆ. ಅದರಲ್ಲೂ ತಂಡದ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್​ ಅವರ ಬದಲಿಗೆ ಇಂದು ರಾಬಿನ್ ಉತ್ತಪ್ಪ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಉತ್ತಪ್ಪಗೆ ತಂಡದಲ್ಲಿ ಚಾನ್ಸ್ ಸಿಕ್ಕರೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದರ ಹೊರತಾಗಿ ಸಿಎಸ್​ಕೆ ತಂಡದಲ್ಲಿ ಬೇರೆ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.

ಅತ್ತ ಪಂಜಾಬ್ ಕಿಂಗ್ಸ್​ ಮೊದಲ ಗೆಲುವಿನ ಹುಮ್ಮಸ್ಸಿನಲ್ಲಿದ್ದು, ಹೀಗಾಗಿ ಅದೇ ತಂಡವನ್ನೇ ಕಣಕ್ಕಿಳಿಸಲಿದೆ. ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್-ಮಯಾಂಕ್ ಕಣಕ್ಕಿಳಿಯಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ಗೇಲ್ ಬಂದರೆ, ಮೊದಲ ಪಂದ್ಯದಲ್ಲಿ ಅಬ್ಬರಿಸಿದ ದೀಪಕ್ ಹೂಡಾ ಇಂದು ಕೂಡ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. 5ನೇ ಕ್ರಮಾಂಕದಲ್ಲಿ ನಿಕೋಲಸ್ ಪೂರನ್ ಕಣಕ್ಕಿಳಿಯಲಿದ್ದಾರೆ.

ಇಂದು ಕಣಕ್ಕಿಳಿಯುವ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ:

ಚೆನ್ನೈ ಸೂಪರ್ ಕಿಂಗ್ಸ್​: ರಾಬಿನ್ ಉತ್ತಪ್ಪ, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಡ್ವೇನ್ ಬ್ರಾವೋ, ಶಾರ್ದುಲ್ ಠಾಕೂರ್, ದೀಪಕ್ ಚಹರ್.
ಪಂಜಾಬ್ ಕಿಂಗ್ಸ್​: ಕೆ.ಎಲ್. ರಾಹುಲ್, ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜೈ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.
Published by: zahir
First published: April 16, 2021, 5:35 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories