PBKS vs MI: ಇಂದು ಬಲಿಷ್ಠ ಮುಂಬೈಗೆ ಪಂಜಾಬ್​ ಕಿಂಗ್ಸ್​ ಸವಾಲು..!

Punjab Kings vs Mumbai Indians: ಒಟ್ಟಿನಲ್ಲಿ ಸತತ ಸೋಲಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್​ ಬಲಿಷ್ಠ ಮುಂಬೈಗೆ ಸೋಲುಣಿಸುವ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

PBKS-vs-MI

PBKS-vs-MI

  • Share this:
    ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್‌ ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ 4 ಪಂದ್ಯಗಳನ್ನಾಡಿದ್ದು, ಅದರಲ್ಲಿ ರೋಹಿತ್ ಪಡೆ 2 ಗೆಲುವು ದಾಖಲಿಸಿದರೆ, ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್​ 1 ಜಯಗಳಿಸಿದೆ.

    ಸದ್ಯ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್​ 4ನೇ ಸ್ಥಾನದಲ್ಲಿದ್ದರೆ, ಸತತ ಮೂರು ಸೋಲಿನಿಂದಾಗಿ ಪಂಜಾಬ್ ಕಿಂಗ್ಸ್ 7ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಜಯದ ಲಯಕ್ಕೆ ಮರಳುವ ಒತ್ತಡದಲ್ಲಿದ್ದೆ ಪಂಜಾಬ್ ಕಿಂಗ್ಸ್​ ತಂಡ. ಅತ್ತ ಹಾಲಿ ಚಾಂಪಿಯನ್ ಮುಂಬೈ ಕೂಡ ಕಳೆದ ಪಂದ್ಯದಲ್ಲಿ ಸೋಲನುಭವಿಸಿದ್ದು, ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ದ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಮೇಲೆರುವ ತವಕದಲ್ಲಿದೆ.

    ಈ ಪಂದ್ಯವು ಚೆನ್ನೈನಲ್ಲಿ ನಡೆಯುತ್ತಿದ್ದು, ಇಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಮುಂಬೈ ಆರ್​ಸಿಬಿ ವಿರುದ್ದ ಸೋಲನುಭವಿಸಿತ್ತು. ಹಾಗೆಯೇ ಪಂಜಾಬ್ ಕಿಂಗ್ಸ್​ ಸನ್​ರೈಸರ್ಸ್ ಹೈದರಾಬಾದ್ ವಿರುದ್ದ ಶರಣಾಗಿತ್ತು. ಸ್ಪಿನ್ನರ್​ಗಳಿಗೆ ಅನುಕೂಲಕರವಾಗಿರುವ ಈ ಪಿಚ್​ನಲ್ಲಿ ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುತ್ತಿದ್ದು, ಎರಡನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವುದು ತುಸು ಕಷ್ಟಕರ. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ ಎದುರಾಳಿ ತಂಡವನ್ನು 150 ರನ್​ಗಳೊಳಗೆ ನಿಯಂತ್ರಿಸಿದರೆ ಗೆಲುವು ಸುಲಭ ಎಂಬುದಕ್ಕೆ ಈ ಬಾರಿಯ ನಡೆದ ಹಲವು ಪಂದ್ಯಗಳೇ ಸಾಕ್ಷಿ.



    ಒಟ್ಟಿನಲ್ಲಿ ಸತತ ಸೋಲಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್​ ಬಲಿಷ್ಠ ಮುಂಬೈಗೆ ಸೋಲುಣಿಸುವ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ. ಅತ್ತ ಪಂಜಾಬ್​ಗೆ ಸೋಲುಣಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೇರಲು ಮುಂಬೈ ಇಂಡಿಯನ್ಸ್ ಕಠಿಣ ಪೈಪೋಟಿ ನೀಡಲಿದೆ.



    ಪಂಜಾಬ್ ಕಿಂಗ್ಸ್​: ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ,  ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, ಅರ್ಷ್​ದೀಪ್ ಸಿಂಗ್ , ಡೇವಿಡ್ ಮಲಾನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್,  ಮೊಯಿಸಸ್ ಹೆನ್ರಿಕ್ಸ್,  ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್, ಮೊಹಮ್ಮದ್ ಶಮಿ.

    ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅಂಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್,  ಸೂರ್ಯಕುಮಾರ್ ಯಾದವ್ ತಿವಾರಿ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಜೇಮ್ಸ್ ನೀಶನ್, ಯುಧ್ವೀರ್ ಚರಕ್, ಮಾರ್ಕೊ ಜಾನ್ಸೆನ್, ಜಸ್ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್
    Published by:zahir
    First published: