ಐಪಿಎಲ್ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ 6 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 5 ಜಯ ಸಾಧಿಸುವ ಮೂಲಕ ಆರ್ಸಿಬಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನು 6 ರಲ್ಲಿ 4 ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ಪಾಯಿಂಟ್ ಟೇಬಲ್ನಲ್ಲಿ 6ನೇ ಸ್ಥಾನದಲ್ಲಿದೆ. ಇದು ಮೊದಲಾರ್ಧದ ಕೊನೆಯ ಪಂದ್ಯವಾಗಿರುವುದರಿಂದ ಗೆಲ್ಲಲೇಬೇಕು ಎಂದು ಪಣತೊಟ್ಟಿದೆ ಉಭಯ ತಂಡಗಳು. ಹೀಗಾಗಿ ಈ ಪಂದ್ಯಕ್ಕಾಗಿ ಎರಡೂ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.
ಅತ್ತ ಅಹಮದಾಬಾದ್ ಪಿಚ್ನಲ್ಲಿ ಮೊದಲ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಪಂಜಾಬ್ ತಂಡದಲ್ಲಿ ಮಹತ್ವ ಬದಲಾವಣೆ ಕಾಣಿಸಿಕೊಳ್ಳುವುದು ಖಚಿತ. ಅದರಂತೆ 6 ಪಂದ್ಯಗಳಲ್ಲಿ ವಿಫಲರಾಗಿರುವ ನಿಕೋಲಸ್ ಪೂರನ್ ಸ್ಥಾನದಲ್ಲಿ ಡೇವಿಡ್ ಮಲಾನ್ ಕಣಕ್ಕಿಯಬಹುದು. ಇದರ ಹೊರತಾಗಿ ಪಂಜಾಬ್ ತಂಡದಲ್ಲಿ ಬೇರೆ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ. ಏಕೆಂದರೆ ಕಳೆದ ಪಂದ್ಯದಲ್ಲಿ ಪಂಜಾಬ್ ಬ್ಯಾಟಿಂಗ್ನಲ್ಲಿ 123 ರನ್ಗಳಿಸಿದರು, ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿದ್ದರು. ಹೀಗಾಗಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಇತ್ತ ಆರ್ಸಿಬಿ ಕೂಡ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್ಸಿಬಿ ಗೆದ್ದರೂ ಅದು ರೋಚಕ ಜಯವಾಗಿತ್ತು. ಎಬಿಡಿ ಹೊರತುಪಡಿಸಿದರೆ ಉಳಿದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಕೊನೆಯ ಓವರ್ನಲ್ಲಿ ಎಬಿಡಿ 23 ರನ್ ಬಾರಿಸುವ ಮೂಲಕ ಆರ್ಸಿಬಿ ಬೃಹತ್ ಮೊತ್ತ ಪೇರಿಸುವಂತಾಗಿತ್ತು. ಹೀಗಾಗಿ ಪಂಜಾಬ್ ವಿರುದ್ದ ಆರ್ಸಿಬಿ ಬ್ಯಾಟಿಂಗ್ ಲೈನಪ್ ಬಗ್ಗೆ ಹೆಚ್ಚಿನ ಗಮನ ನೀಡಲಿದೆ. ಏಕೆಂದರೆ ಆರ್ಸಿಬಿ ಟಾಸ್ ಸೋತರೆ ಬೃಹತ್ ಮೊತ್ತ ಪೆರಿಸಲೇಬೇಕು. ಹೀಗಾಗಿ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಶಹಬಾಜ್ ಅಹ್ಮದ್ರನ್ನು ಕಣಕ್ಕಿಳಿಸಬಹುದು.
6ನೇ ಕ್ರಮಾಂಕದಲ್ಲಿ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ನಲ್ಲಿ ವಿಫಲರಾಗುತ್ತಿದ್ದಾರೆ. ಅತ್ತ ಸ್ಪಿನ್ ವಿಭಾಗದಲ್ಲಿ ಯಜುವೇಂದ್ರ ಚಹಲ್ ಕೂಡ ಯಶಸ್ವಿಯಾಗುತ್ತಿಲ್ಲ. ಈ ಇಬ್ಬರಲ್ಲಿ ಒಬ್ಬರನ್ನು ಕೈಬಿಟ್ಟು ಆಲ್ರೌಂಡರ್ ಶಹಬಾಜ್ ಅಹ್ಮದ್ರನ್ನು ಆಡಿಸಬಹುದು.
ಇದರಿಂದ ಆರ್ಸಿಬಿ 8 ಅಥವಾ 9ನೇ ವಿಕೆಟ್ವರೆಗೂ ಬ್ಯಾಟಿಂಗ್ ಲೈನಪ್ ಹೊಂದಬಹುದು. ಹೀಗಾಗಿ ಈ ಒಂದು ಬದಲಾವಣೆಯೊಂದಿಗೆ ಆರ್ಸಿಬಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆ.ಎಲ್. ರಾಹುಲ್ , ಮಾಯಾಂಕ್ ಅಗರ್ವಾಲ್ , ಕ್ರಿಸ್ ಗೇಲ್ , ದೀಪಕ್ ಹೂಡಾ , ಡೇವಿಡ್ ಮಲಾನ್ , ಮೊಯಿಸಸ್ ಹೆನ್ರಿಕ್ಸ್ , ಶಾರುಖ್ ಖಾನ್ , ಕ್ರಿಸ್ ಜೋರ್ಡನ್ , ಮೊಹಮ್ಮದ್ ಶಮಿ , ರವಿ ಬಿಷ್ಣೋಯ್ , ಅರ್ಷ್ದೀಪ್ ಸಿಂಗ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ