RCB vs RR: ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ ಸಾಧ್ಯತೆ: ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ

ಮೂರು ಭರ್ಜರಿ ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವನ್ನು ಮಣಿಸುವುದು ಕೂಡ ರಾಜಸ್ಥಾನ್​ ರಾಯಲ್ಸ್​ಗೆ ಸವಾಲಾಗಲಿದೆ. ಹೀಗಾಗಿ ತಂಡದಲ್ಲಿ ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ.

RCB vs RR

RCB vs RR

 • Share this:
  ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಈ ಪಂದ್ಯ ನಡೆಯಲಿದ್ದು, ಗೆಲುವಿಗಾಗಿ ಉಭಯ ತಂಡಗಳು ರಣತಂತ್ರ ರೂಪಿಸುತ್ತಿದೆ. ಈಗಾಗಲೇ ಚೆನ್ನೈ ಪಿಚ್​ನಲ್ಲಿ ಸತತ ಮೂರು ಗೆಲುವು ದಾಖಲಿಸಿರುವ ಆರ್​ಸಿಬಿ ಮುಂಬೈನಲ್ಲೂ ಜಯದೊಂದಿಗೆ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಅತ್ತ ಮೂರು ಪಂದ್ಯಗಳಲ್ಲಿ 2 ಸೋಲು ಕಂಡಿರುವ ರಾಜಸ್ಥಾನ್ ರಾಯಲ್ಸ್ ಆರ್​ಸಿಬಿ ವಿರುದ್ದ ಗೆಲ್ಲುವ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

  ಇತ್ತ ಮೂರು ಭರ್ಜರಿ ಗೆಲುವು ದಾಖಲಿಸಿರುವ ಆರ್​ಸಿಬಿ ತಂಡವನ್ನು ಮಣಿಸುವುದು ಕೂಡ ರಾಜಸ್ಥಾನ್​ ರಾಯಲ್ಸ್​ಗೆ ಸವಾಲಾಗಲಿದೆ. ಹೀಗಾಗಿ ತಂಡದಲ್ಲಿ ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ. ಅದರಂತೆ ಕಳೆದ ಮೂರು ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದು ವಿಫಲರಾಗಿರುವ ಮನನ್ ವೋಹ್ರಾ ಅವರನ್ನು ರಾಜಸ್ಥಾನ್​ ಕೈ ಬಿಡಲಿದೆ. ಅವರ ಸ್ಥಾನದಲ್ಲಿ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಆರ್​ಸಿಬಿ ವಿರುದ್ದ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಶಿವಂ ದುಬೆ ಸ್ಥಾನದಲ್ಲಿ ಮಹಿಪಾಲ್ ಲೋಮರರ್​ಗೆ ಚಾನ್ಸ್​ ಸಿಗುವ ಸಾಧ್ಯತೆಯಿದೆ.

  ಇನ್ನು ಆರ್​ಸಿಬಿ ತಂಡದಲ್ಲೂ ಒಂದು ಪ್ರಮುಖ ಬದಲಾವಣೆ ಕಾಣಿಸಿಕೊಳ್ಳಲಿದ್ದು, ಅದರಂತೆ ರಜತ್ ಪಾಟಿದಾರ್ ಬದಲಿಗೆ ಮತ್ತೋರ್ವ ಆಟಗಾರನಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆ. ಕೆಕೆಆರ್ ವಿರುದ್ದದ ಪಂದ್ಯದಲ್ಲಿ ಆರ್​ಸಿಬಿ ಮೂವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿದಿತ್ತು. ಆದರೆ ಮುಂಬೈ ಮೈದಾನದಲ್ಲಿ ನಾಲ್ವರು ವಿದೇಶಿ ಆಟಗಾರರು ಆಡಲಿದ್ದಾರೆ. ಏಕೆಂದರೆ ಮುಂಬೈ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಈ ಮೈದಾನದಲ್ಲಿ ದೊಡ್ಡ ಮೊತ್ತ ಪೇರಿಸಿದರೆ ಮಾತ್ರ ಸುಲಭವಾಗಿ ಜಯ ಸಾಧಿಸಬಹುದು. ಹೀಗಾಗಿ ಆರ್​ಆರ್ ವಿರುದ್ದ ರಜತ್ ಪಾಟಿದಾರ್ ಸ್ಥಾನದಲ್ಲಿ ಫಿನ್ ಅಲೆನ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಬಹುದು.  ಏಕೆಂದರೆ ಆರ್​ಸಿಬಿ 3 ಪಂದ್ಯಗಳಲ್ಲಿ ಆರಂಭಿಕ ವೈಫಲ್ಯ ಹೊಂದಿದೆ. ಪವರ್​ಪ್ಲೇನಲ್ಲೇ ವಿಕೆಟ್ ಬೀಳುತ್ತಿರುವುದರಿಂದ 4ನೇ ಪಂದ್ಯದಲ್ಲಿ ಫಿನ್ ಅಲೆನ್ ಅವರನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿದರೆ ಮೊದಲ 6 ಓವರ್​ಗಳ ಸಂಪೂರ್ಣ ಲಾಭ ಪಡೆದುಕೊಳ್ಳಬಹುದು. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಫಿನ್ ಅಲೆನ್ ಅವಕಾಶ ಪಡೆಯುವ ಸಾಧ್ಯತೆಯಿದೆ. ಅದರಂತೆ ಆರ್​ಸಿಬಿ ರಾಜಸ್ಥಾನ್ ವಿರುದ್ದ 1 ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆ. ಹಾಗಿದ್ರೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ನೋಡೋಣ.  ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೋಮರರ್, ರಾಹುಲ್ ತೇವಟಿಯಾ, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕಟ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ.

  ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿನ್ ಅಲೆನ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್​ವೆಲ್, ಎಬಿ ಡಿವಿಲಿಯರ್ಸ್​, ವಾಷಿಂಗ್ಟನ್ ಸುಂದರ್, ಕೈಲ್ ಜೇಮಿಸನ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಯುಜುವೇಂದ್ರ ಚಹಲ್.
  Published by:zahir
  First published: