HOME » NEWS » Ipl » IPL 2021 RR VS PBKS HEAD TO HEAD STATISTICS ZP

RR vs PBKS: ಕಿಂಗ್ಸ್ vs ರಾಯಲ್ಸ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ? ಇಲ್ಲಿದೆ ಮಾಹಿತಿ

ಕಳೆದ ಸೀಸನ್​ನಲ್ಲಿ ಎರಡೂ ಪಂದ್ಯಗಳಲ್ಲಿ ಸೋಲುಣಿಸಿರುವ ರಾಜಸ್ಥಾನ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕೆಎಲ್ ರಾಹುಲ್ ಪಡೆ ಇದ್ದರೆ, ಪಂಜಾಬ್ ವಿರುದ್ದ ಹ್ಯಾಟ್ರಿಕ್ ಗೆಲುವಿನ ಮೂಲಕ ಐಪಿಎಲ್ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ ಸ್ಯಾಮ್ಸನ್ ಪಡೆ.

news18-kannada
Updated:April 12, 2021, 3:56 PM IST
RR vs PBKS: ಕಿಂಗ್ಸ್ vs ರಾಯಲ್ಸ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ? ಇಲ್ಲಿದೆ ಮಾಹಿತಿ
RR vs PBKS
  • Share this:
ಐಪಿಎಲ್ ಅಂಗಳದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್​ ಕಿಂಗ್ಸ್​ ತಂಡವನ್ನು ಎದುರಿಸಲಿದೆ. ಪಂಜಾಬ್ ತಂಡವು ಹೊಸ ಹೆಸರಿನೊಂದಿಗೆ ಹುಮ್ಮಸ್ಸಿನಲ್ಲಿದ್ದರೆ, ರಾಜಸ್ಥಾನ್​ ತಂಡವು ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಆಡುವ ತವಕದಲ್ಲಿದೆ. ಇನ್ನು ಎರಡೂ ತಂಡಗಳನ್ನು ಮುನ್ನಡೆಸುತ್ತಿರುವುದು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳು ಎಂಬುದು ವಿಶೇಷ. ಇದಾಗ್ಯೂ ಆರ್​ಆರ್​ ತಂಡದಲ್ಲಿ ಜೋಸ್ ಬಟ್ಲರ್ ಸ್ಥಾನ ಪಡೆದರೆ ಅವರೇ ಕೀಪಿಂಗ್ ಮಾಡಲಿದ್ದಾರೆ.

ಇನ್ನು ಉಭಯ ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ರಾಜಸ್ಥಾನ್ ರಾಯಲ್ಸ್ 12 ರಲ್ಲಿ ಗೆದ್ದರೆ, ಪಂಜಾಬ್ ಕಿಂಗ್ಸ್ ಇಲೆವೆನ್ 9 ರಲ್ಲಿ ಜಯ ಸಾಧಿಸಿದೆ. ಹಾಗೆಯೇ ಕಳೆದ ಸೀಸನ್​ನಲ್ಲಿ ಆಡಿದ 2 ಪಂದ್ಯಗಳಲ್ಲೂ ರಾಜಸ್ಥಾನ್ ಗೆದ್ದು ಬೀಗಿತ್ತು. ಇದೇ ಆತ್ಮ ವಿಶ್ವಾಸದಲ್ಲಿ ಇಂದು ಕೂಡ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ.

ರಾಜಸ್ಥಾನ್ ರಾಯಲ್ಸ್​ ವಿರುದ್ಧ ಬ್ಯಾಟಿಂಗ್​ನಲ್ಲಿ ಪಂಜಾಬ್ ಪರ ಕೆಎಲ್ ರಾಹುಲ್ ಉತ್ತಮ ಬ್ಯಾಟಿಂಗ್​ ಸರಾಸರಿ ಹೊಂದಿದ್ದಾರೆ. ಹಾಗೆಯೇ ಪಂಜಾಬ್ ವಿರುದ್ಧ ಆರ್​ಆರ್ ನಾಯಕ ಸಂಜು 406 ರನ್​ ಬಾರಿಸಿ ಉತ್ತಮ ಫಾರ್ಮ್​ ಪ್ರದರ್ಶಿಸಿರುವುದು ವಿಶೇಷ. ಹೀಗಾಗಿ ಇಂದು ಕೂಡ ರಾಹುಲ್ ಹಾಗೂ ಸ್ಯಾಮ್ಸನ್ ಬ್ಯಾಟಿಂಗ್ ಪ್ರದರ್ಶನ ಮೇಲೆ ಉಭಯ ತಂಡಗಳ ಸ್ಕೋರ್ ನಿಗದಿಯಾಗಬಹುದು.

ಇನ್ನು ಬೌಲಿಂಗ್ ವಿಭಾಗದಲ್ಲಿ ಈ ಹಿಂದೆ ಪರಸ್ಪರ ತಂಡಗಳಲ್ಲಿ ಮಿಂಚಿದ್ದ ಆಟಗಾರರು ಪ್ರಸ್ತುತ ತಂಡಗಳಿಲ್ಲ ಎಂಬುದು ವಿಶೇಷ. ರಾಜಸ್ಥಾನ್ ವಿರುದ್ದ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ ಆಗಿ ಪಿಯೂಷ್ ಚಾವ್ಲಾ ಇದ್ದಾರೆ. ಈ ಹಿಂದೆ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಚಾವ್ಲಾ ಆರ್​ಆರ್ ವಿರುದ್ಧ 14 ವಿಕೆಟ್ ಕಬಳಿಸಿದ್ದರು. ಹಾಗೆಯೇ ಆರ್​ಆರ್ ಪರ ಸಿದ್ಧಾರ್ಥ್ ತ್ರಿವೇದಿ 11 ವಿಕೆಟ್​ ಪಡೆದಿದ್ದಾರೆ.

ಕಳೆದ ಸೀಸನ್​ನಲ್ಲಿ ಎರಡೂ ಪಂದ್ಯಗಳಲ್ಲಿ ಸೋಲುಣಿಸಿರುವ ರಾಜಸ್ಥಾನ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕೆಎಲ್ ರಾಹುಲ್ ಪಡೆ ಇದ್ದರೆ, ಪಂಜಾಬ್ ವಿರುದ್ದ ಹ್ಯಾಟ್ರಿಕ್ ಗೆಲುವಿನ ಮೂಲಕ ಐಪಿಎಲ್ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ ಸ್ಯಾಮ್ಸನ್ ಪಡೆ. ಹೀಗಾಗಿ ಎರಡೂ ತಂಡಗಳ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.

ಪಂಜಾಬ್ ಕಿಂಗ್ಸ್ ತಂಡ​: ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, ಅರ್ಷ್​ದೀಪ್ ಸಿಂಗ್ , ಡೇವಿಡ್ ಮಲನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್
Youtube Video
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಚೇತನ್ ಸಕರಿಯಾ, ಕೆ.ಸಿ.ಕರಿಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್
Published by: zahir
First published: April 12, 2021, 3:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories