ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಉಭಯಗಳಿಗೂ ಭಾರತೀಯ ಆಟಗಾರರು ನಾಯಕರಾಗಿರುವುದು ವಿಶೇಷ. ಪಂಜಾಬ್ ಕಿಂಗ್ಸ್ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಿದರೆ, ರಾಜಸ್ಥಾನ್ ರಾಯಲ್ಸ್ಗೆ ಹೊಸ ಸಾರಥಿಯಾಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ.
ಉಭಯ ತಂಡಗಳೂ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು, ಹೀಗಾಗಿ ತೀವ್ರ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ. ಈ ಬಾರಿ ಕೂಡ ಪಂಜಾಬ್ ತಂಡದ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಕಣಕ್ಕಿಳಿಯಲಿದ್ದು, ಅತ್ತ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಇನ್ನು ವಿದೇಶಿ ಆಟಗಾರರನಾಗಿ ಕ್ರಿಸ್ ಗೇಲ್, ನಿಕೋಲಸ್ ಪೂರನ್, ಡೇವಿಡ್ ಮಲಾನ್ ಹಾಗೂ ಜೇ ರಿಚರ್ಡ್ಸನ್ ಪಂಜಾಬ್ ಪರ ಕಣಕ್ಕಿಳಿಯಬಹುದು. ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್, ಬೆನ್ ಸ್ಟೋಕ್ಸ್, ಕ್ರಿಸ್ ಮೋರಿಸ್ ಹಾಗೂ ಆಂಡ್ರ್ಯೂ ಟೈ ಕಣಕ್ಕಿಳಿಯುವ ಸಾಧ್ಯತೆಯಿದೆ.
ರಾಜಸ್ಥಾನ್ ತಂಡದ ಪ್ರಮುಖ ವೇಗಿಗಳಾದ ಜೋಫ್ರಾ ಆರ್ಚರ್ ಗಾಯಗೊಂಡು ಟೂರ್ನಿಯಿಂದ ಹೊರಗುಳಿದರೆ, ಮುಸ್ತಫಿಜುರ್ ರೆಹಮಾನ್ ಬಾಂಗ್ಲಾ ಪರ ಆಡುತ್ತಿದ್ದಾರೆ. ಇವರಿಬ್ಬರ ಅಲಭ್ಯತೆಯು ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ವಿಭಾಗದ ಮೇಲೆ ಪರಿಣಾಮ ಬೀರಲಿದೆಯಾ ಕಾದು ನೋಡಬೇಕಿದೆ. ಹಾಗೆಯೇ ಹೊಸ ಹೆಸರಿನೊಂದಿಗೆ ಪಂಜಾಬ್ ಕಿಂಗ್ಸ್ ಜಯದೊಂದಿಗೆ ಐಪಿಎಲ್ ಅಭಿಯಾನವನ್ನು ಆರಂಭಿಸುವ ಇರಾದೆಯಲ್ಲಿದೆ. ಆದರೆ ಕಳೆದ ಸೀಸನ್ನಲ್ಲಿ ಎರಡೂ ಪಂದ್ಯಗಳಲ್ಲಿ ರಾಹುಲ್ ಪಡೆಗೆ ಸೋಲುಣಿಸಿರುವ ರಾಜಸ್ಥಾನ್ ಇದೀಗ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಒಟ್ಟಿನಲ್ಲಿ ಉಭಯ ತಂಡಗಳು ಸಮತೋಲನದಿಂದ ಕೂಡಿರುವುದರಿಂದ ಇಂದಿನ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನಂತು ನಿರೀಕ್ಷಿಸಬಹುದು.
ಪಂಜಾಬ್ ಕಿಂಗ್ಸ್ ತಂಡ: ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, ಅರ್ಷ್ದೀಪ್ ಸಿಂಗ್ , ಡೇವಿಡ್ ಮಲನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಚೇತನ್ ಸಕರಿಯಾ, ಕೆ.ಸಿ.ಕರಿಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್.
ಪಂದ್ಯದ ಸಮಯ: 7.30
ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ