• Home
 • »
 • News
 • »
 • ipl
 • »
 • IPL 2021: ಐಪಿಎಲ್ ವೇಳೆ ಕಾಣಿಸಿಕೊಂಡ ಬುಕ್ಕಿಗಳು: ಮ್ಯಾಚ್ ಫಿಕ್ಸಿಂಗ್ ಕರಿನೆರಳು..?

IPL 2021: ಐಪಿಎಲ್ ವೇಳೆ ಕಾಣಿಸಿಕೊಂಡ ಬುಕ್ಕಿಗಳು: ಮ್ಯಾಚ್ ಫಿಕ್ಸಿಂಗ್ ಕರಿನೆರಳು..?

match fixing

match fixing

ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಬುಕ್ಕಿಗಳು ದೊಡ್ಡ ಮಟ್ಟದ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದ್ದು, ಹೀಗಾಗಿ ಮತ್ತಷ್ಟು ವಿಚಾರಣೆಗೆ ಒಳಪಡಿಸಿ ಬುಕ್ಕಿಗಳ ಉದ್ದೇಶಗಳ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

 • Share this:

  ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಮತ್ತೆ ಫಿಕ್ಸಿಂಗ್ ಗುಮಾನಿ ಶುರುವಾಗಿದೆ. ಏಕೆಂದರೆ ಮೇ. 2 ರಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಬ್ಬರು ಮ್ಯಾಚ್ ಫಿಕ್ಸಿಂಗ್ ಬುಕ್ಕಿಗಳು ಕಾಣಿಸಿಕೊಂಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ಈ ಬುಕ್ಕಿಗಳು ಕ್ರೀಡಾಂಗಣಕ್ಕೆ ಪ್ರವೇಶ ಮಾಡಿದ್ದರು. ಪ್ರೇಕ್ಷಕರಿಗೆ ಅವಕಾಶವಿಲ್ಲದಿದ್ದರೂ ಈ ಬುಕ್ಕಿಗಳು ನಕಲಿ ವಿಐಪಿ ಐಡಿ ಕಾರ್ಡ್​ ಬಳಸಿ ಸ್ಟೇಡಿಯಂ ಪ್ರವೇಶಿಸಿದ್ದರು.


  ಐಪಿಎಲ್​ನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಮುನ್ನ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಬಾರಿ ಮುಖಾಮುಖಿಯಾಗಿತ್ತು. ಈ ವೇಳೆ ಸ್ಟೇಡಿಯಂನಲ್ಲಿ ಈ ಇಬ್ಬರು ಬುಕ್ಕಿಗಳು ಕಾಣಿಸಿಕೊಂಡಿದ್ದು, ಸಂಶಯದ ಹಿನ್ನೆಲೆಯಲ್ಲಿ ಪೊಲೀಸರು ವಶ ಪಡೆದಿದ್ದಾರೆ. ಬಂಧಿತರನ್ನು ಪಂಜಾಬ್​ನ ಕೃಷ್ಣನ್ ಗರ್ಗ್ ಹಾಗೂ ಮನೀಷ್ ಕನ್ಸಾಲ್ ಎಂದು ಗುರುತಿಸಲಾಗಿದೆ.


  ಸದ್ಯ ಈ ಇಬ್ಬರೂ ಬುಕ್ಕಿಗಳ ವಿರುದ್ದ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ ಐದು ದಿನಗಳವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವಣ ಪಂದ್ಯದ ವೇಳೆ ಫಿಕ್ಸಿಂಗ್ ನಡೆಸಲಾಗಿದೆಯೇ ಎಂಬ ಬಗ್ಗೆ ದಿಲ್ಲಿ ಕ್ರೈಮ್ ಬ್ರಾಂಚ್ ತನಿಖೆ ನಡೆಸುತ್ತಿದೆ.


  ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಬುಕ್ಕಿಗಳು ದೊಡ್ಡ ಮಟ್ಟದ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದ್ದು, ಹೀಗಾಗಿ ಮತ್ತಷ್ಟು ವಿಚಾರಣೆಗೆ ಒಳಪಡಿಸಿ ಬುಕ್ಕಿಗಳ ಉದ್ದೇಶಗಳ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


  ಸನ್​ರೈಸರ್ಸ್​ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಆರ್ ತಂಡ 220 ರನ್ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಎಸ್ಆರ್​ಹೆಚ್ 168 ರನ್​ಗಳಿಸಿತ್ತು. ಇದೀಗ ಈ ಪಂದ್ಯದ ನಡುವೆ ಬೆಟ್ಟಿಂಗ್ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದು, ಇದಾಗ್ಯೂ ಫಿಕ್ಸಿಂಗ್ ನಡೆದಿದೆಯಾ ಎಂಬುದು ತನಿಖೆಯಿಂದ ತಿಳಿದು ಬರಲಿದೆ ಎಂದಿದ್ದಾರೆ. ಒಟ್ಟಿನಲ್ಲಿ ಐಪಿಎಲ್​ನಲ್ಲಿ ಫಿಕ್ಸಿಂಗ್ ಭೂತ ಆವರಿಸಿರುವುದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

  Published by:zahir
  First published: