IPL 2021 Video: ಮೊದಲ ಅರ್ಧಶತಕವನ್ನು ಮುದ್ದಿನ ಮಗಳಿಗೆ ಅರ್ಪಿಸಿದ ವಿರಾಟ್ ಕೊಹ್ಲಿ

2008 ರಿಂದ ಆರ್​ಸಿಬಿ ಪರ ಆಡುತ್ತಿರುವ ಕೊಹ್ಲಿ 188 ಇನಿಂಗ್ಸ್​ನಿಂದ 6021 ರನ್ ಬಾರಿಸಿದ್ದಾರೆ. ಕೇವಲ ಒಂದು ತಂಡದ ಪರ ಆಡಿ ಈ ಸಾಧನೆ ಮಾಡಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ.

Virat kohli

Virat kohli

 • Share this:
  ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ 10 ವಿಕೆಟ್​ಗಳಿಂದ  ಭರ್ಜರಿ ಜಯ ಸಾಧಿಸಿತ್ತು. ರಾಜಸ್ಥಾನ್ ನೀಡಿದ 178 ರನ್​ಗಳ ಟಾರ್ಗೆಟ್​ನ್ನು ಬೆನ್ನತ್ತಿದ ಆರ್​ಸಿಬಿಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು.

  ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಈ ಸೀಸನ್​ನ ತಮ್ಮ ಮೊದಲ ಹಾಫ್ ಸೆಂಚುರಿಯನ್ನು ಮುದ್ದಿನ ಮಗಳು ವಮಿಕಾಗೆ ಅರ್ಪಿಸಿದ್ದು ವಿಶೇಷ. ಅರ್ಧಶತಕ ಪೂರೈಸುತ್ತಿದ್ದಂತೆ ಮೈದಾನದಿಂದ ಇದು ಮಗಳಿಗೆ ಎಂದು ಕೊಹ್ಲಿ ತಿಳಿಸುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

  ಈ ಅರ್ಧಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲಿ 6 ಸಾವಿರ ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ. ಅಲ್ಲದೆ ಕೇವಲ ಒಂದು ತಂಡದ ಪರ ಆಡಿ 6 ಸಾವಿರ ರನ್ ಪೂರೈಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

  2008 ರಿಂದ ಆರ್​ಸಿಬಿ ಪರ ಆಡುತ್ತಿರುವ ಕೊಹ್ಲಿ 188 ಇನಿಂಗ್ಸ್​ನಿಂದ 6021 ರನ್ ಬಾರಿಸಿದ್ದಾರೆ. ಕೇವಲ ಒಂದು ತಂಡದ ಪರ ಆಡಿ ಈ ಸಾಧನೆ ಮಾಡಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಲಿದ್ದಾರೆ. ಐಪಿಎಲ್​ನಲ್ಲಿ ಒಂದೇ ತಂಡದ ಪರ ಆಡಿ 5 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಕೊಹ್ಲಿ ಹೆಸರಿನಲ್ಲಿದೆ. ಅಲ್ಲದೆ ಟಾಪ್ ರನ್ ​ಸರದಾರರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

  ಕೊಹ್ಲಿ ಹೊರತಾಗಿ 5 ಸಾವಿರ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಸುರೇಶ್ ರೈನಾ 2ನೇ ಸ್ಥಾನದಲ್ಲಿದ್ದು, ರೈನಾ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿ 5448 ರನ್ ಕಲೆಹಾಕಿದ್ದಾರೆ. ಅದೇ ರೀತಿ ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಶಿಖರ್ ಧವನ್ 5428 ರನ್​ಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಇನ್ನು ಡೆಲ್ಲಿ ಡೇರ್ ಡೇವಿಲ್ಸ್​ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 5384 ರನ್​ಗಳಿಸುವ ಮೂಲಕ 4ನೇ ಸ್ಥಾನದಲ್ಲಿದ್ದಾರೆ.  ಹಾಗೆಯೇ 5ನೇ ಸ್ಥಾನದಲ್ಲಿ ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳನ್ನು ಪ್ರತಿನಿಧಿಸಿರುವ ರೋಹಿತ್ ಶರ್ಮಾ ಇದ್ದಾರೆ. ಹಿಟ್​ಮ್ಯಾನ್ ಇದುವರೆಗೆ ಐಪಿಎಲ್​ನಲ್ಲಿ 5368 ರನ್​ ಕಲೆಹಾಕಿದ್ದಾರೆ.
  Published by:zahir
  First published: