ಐಪಿಎಲ್ 2022ರ (IPL 2022) ಟೂರ್ನಿಯ 10ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ತಂಡಗಳು ಮುಖಾಮುಖಿಯಾಗಲಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಸಿಎಸ್ಕೆ (CSK) ಈ ಪಂದ್ಯ ಗೆಲ್ಲುವ ಮೂಲಕ ಜಯದ ಖಾತೆ ತೆರೆಯಲು ಹವಣಿಸುತ್ತಿದ್ದರೆ, ಮತ್ತೊಂದೆಡೆ ಆಡಿರುವ 2 ಪಂದ್ಯಗಳಲ್ಲಿ ಒಂದು ಜಯ ಒಂದು ಸೋಲು ಕಂಡಿರುವ ಪಂಜಾಬ್ ಗೆಲುವಿನ ಟ್ರ್ಯಾಕ್ಗೆ ಮರಳುವ ವಿಶ್ವಾಸದಲ್ಲಿದೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಜಡೇಜಾ(Jadeja) ನಾಯಕತ್ವದಲ್ಲಿ ಕಣಕ್ಕಿದರೆ, ಇತ್ತ ಮಾಯಾಂಕ್ ಅರ್ಗವಾಲ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ನಡುವೆ ಉಭಯ ತಂಡಗಳ ಬಲಾಬಲ ಹೇಗಿದೆ ಎನ್ನುವುದನ್ನು ನೋಡೋಣ ಬನ್ನಿ.
ಇನ್ನು, ಜಡೇಜಾ ನಾಯಕತ್ವದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಇನ್ನು ಗೆಲುವಿನ ಖಾತೆ ತೆರೆಯದಿರುವುದು ಚೆನ್ನೈ ಅಭಿಮಾಣಿಗಳಲ್ಲಿ ಬೆಸರದ ಸಂಗತಿಯಾಗಿದೆ. ಈ ಪಂದ್ಯದಲ್ಲಾದರೂ ಗೆಲುವನ್ನು ಕಾಣಲಿದೆಯಾ ಎಂದು ಕಾದುನೋಡಬೇಕಿದೆ. ಇತ್ತ ಮಾಯಾಂಕ್ ನೇತೃತ್ವದಲ್ಲಿ ಗೆಲುವು, ಸೋಲು ಎರಡನ್ನೂ ಕಂಡಿರುವ ಪಂಜಾಬ್ ಕೊಂಚ ವಿಶ್ವಾಸದಲ್ಲಿದೆ.
ಪಂದ್ಯದ ವಿವರ:
ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಇಂದು ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಇದನ್ನೂ ಓದಿ: IPL 2022 Record: ಟಿ20 ಅಲ್ಲಿ ಹೊಸ ದಾಖಲೆ ಬರೆದ ಧೋನಿ, ಬ್ರಾವೋ ಈಗ ನಂಬರ್ ಒನ್ ಬೌಲರ್
ಹೀಗಿದೆ ಪಿಚ್ ವರದಿ:
ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟ್ಸ್ಮನ್ ಹಾಗೂ ಬೌಲರ್ ಇಬ್ಬರಿಗೂ ಉತ್ತಮ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಮೊದಲ ಇನ್ನಿಂಗ್ಸ್ನ ಸರಾಸರಿ ಮೊತ್ತ 180 ಆಗಿದೆ.
ಉಭಯ ತಂಡಗಳ ಬಲಾಬಲ:
ಉಭಯ ತಂಡಗಳು ಇದುವರೆಗೆ 25 ಬಾರಿ ಮುಖಾಮುಖಿಯಾಗಿದ್ದು, ಸಿಎಸ್ಕೆ 15 ಪಂದ್ಯಗಳನ್ನು ಗೆದ್ದಿದೆ. ಹಾಗೆಯೇ ಪಂಜಾಬ್ ಕಿಂಗ್ಸ್ ತಂಡ 10 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇನ್ನು ಐಪಿಎಲ್ ನ ಕಳೆದ ಸೀಸನ್ನಲ್ಲಿ ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು.
ಇದನ್ನೂ ಓದಿ: Dhoni-Gautham: ಅರೇ.. ಶಾಕ್ ಆಗ್ಬೇಡಿ, ನೀವ್ ನೋಡ್ತಿರೋದು ನಿಜ! ಧೋನಿ-ಗಂಭೀರ್ ಸಮಾಗಮಕ್ಕೆ ಕ್ರೀಡಾಭಿಮಾನಿಗಳು ಫಿದಾ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ಉಳಿದೊಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ಉಳಿದೊಂದು ಪಂದ್ಯದಲ್ಲಿ ಜಯ ಸಾಧಿಸಿದೆ.
ಉಭಯ ತಂಡಗಳ ಸಂಭಾವ್ಯ ತಂಡ:
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ಧೋನಿ (ವಿಕೆಟ್ ಕೀಪರ್),ರವೀಂದ್ರ ಜಡೇಜಾ (ನಾಯಕ), ಡ್ವೈನ್ ಪ್ರಿಟೋರಿಯಸ್, ಡ್ವೇನ್ ಬ್ರಾವೋ, ಮುಕೇಶ್ ಚೌಧರಿ, ಕೆಎಂ ಆಸಿಫ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್ಸ್ಟೋನ್, ಪ್ರಭ್ಸಿಮ್ರಾನ್ ಸಿಂಗ್, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಹರ್, ಅರ್ಷದೀಪ್ ಸಿಂಗ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ