DC vs MI: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಹೇಗಿದೆ ಬ್ರಬೋರ್ನ್ ಸ್ಟೇಡಿಯಂ ಪಿಚ್ ರಿಪೋರ್ಟ್?
ಈಗಾಗಲೇ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ (Rishabh Pant) ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಮುಂಬೈ ಇಂಡಿಯನ್ಸ್ ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನ (IPL-2022) 15 ನೇ ಋತುವಿನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ (DC v MI) ತಂಡಗಳು ಮುಖಾಮುಖಿಯಾಗುತ್ತಿವೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ (Brabourne Stadium) ಈ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ (Rishabh Pant) ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಮುಂಬೈ ಇಂಡಿಯನ್ಸ್ ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದಾರೆ. IPL 2020 ರನ್ನರ್ಸ್ ಅಪ್ ತಂಡ ತನ್ನ ಆರಂಭಿಕ ಪಂದ್ಯದಲ್ಲಿ 5 ಬಾರಿ ಚಾಂಪಿಯನ್ಸ್ ಮತ್ತು IPL ನ ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್ನೊಂದಿಗೆ ಸೆಣಸಾಡಲಿದೆ.
DC ಮತ್ತು MI ನಡುವಿನ ಪಂದ್ಯ ನಡೆಯುವ ಸ್ಥಳ ಮತ್ತು ಸಮಯ:
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ವೀಕ್ಷಣೆ ಹೇಗೆ?:
ಮುಂಬೈ ಮತ್ತು ಡೆಲ್ಲಿ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ವೀಕ್ಷಿಸಬಹುದು. ಜೊತೆಗೆ ಡಿಸ್ನಿ ಹಾಟ್ ಸ್ಟಾರ್ನಲ್ಲಿ ನೋಡಬಹುದು. ಇದರೊಂದಿಗೆ ನೀವು ಲೈವ್ ಅಪ್ಡೇಟ್ಗಳಿಗಾಗಿ ನಮ್ಮ ವೆಬ್ಸೈಟ್ News18 Kannada ವನ್ನು ಅನುಸರಿಸಿ.
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬ್ರಬೋರ್ನ್ ಸ್ಟೇಡಿಯಂನಲ್ಲಿ ಮಧ್ಯಾಹ್ನ 3.30 ರಿಂದ ಆರಂಭವಾಗಿದೆ. ಇಂದು ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದ್ದು, ಆದರೆ, 65 ರಷ್ಟು ಆರ್ದ್ರತೆ ಇರುತ್ತದೆ. ಹಗಲಿನಲ್ಲಿ ಗಂಟೆಗೆ 24 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ದೆಹಲಿ ಮತ್ತು ಮುಂಬೈ ನಡುವಿನ ಪಂದ್ಯದಲ್ಲಿ ಮಳೆಯ ಸಾಧ್ಯತೆ ಇಲ್ಲ ಎಂದು ಪಿಚ್ ರಿಪೋರ್ಟ್ನಲ್ಲಿ ತಿಳಿಸಲಾಗಿದೆ.
MI ವಿರುದ್ಧ DC ಪಿಚ್ ವರದಿ:
ಬ್ರಬೋರ್ನ್ ಸ್ಟೇಡಿಯಂನ ಪಿಚ್ ಬೌಲರ್ಗಳು ಮತ್ತು ಬ್ಯಾಟ್ಸ್ಮನ್ಗಳಿಗೆ ಅನುಕೂಲಕರವಾಗಿದೆ. ಎರಡನೇ ಬೌಲಿಂಗ್ ಮಾಡುವ ತಂಡಕ್ಕೆ ಮಂಜಿನ ಅಂಶ ಇರುತ್ತದೆ. ಶಾರ್ಟ್ ಬೌಂಡರಿ ಮತ್ತು ಮೈದಾನದ ತೀಕ್ಷ್ಣವಾದ ಔಟ್ ಫೀಲ್ಡ್ ನಿಂದಾಗಿ ದೊಡ್ಡ ಸ್ಕೋರ್ ಮಾಡುವ ನಿರೀಕ್ಷೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಹೆಡ್ ಟು ಹೆಡ್:
ಕಳೆದ ವರ್ಷ 2021 ರಲ್ಲಿ, ಐದು ಬಾರಿಯ ಚಾಂಪಿಯನ್ ಮುಂಬೈ ವಿರುದ್ಧ DC ಎರಡು ಆರಾಮದಾಯಕ ಗೆಲುವು ಕಂಡಿತ್ತು. ಉಳಿದಂತೆ ಇಲ್ಲಿಯವರೆಗಿನ ಐಪಿಎಲ್ ಇತಿಹಾಸದಲ್ಲಿ, ಎರಡೂ ತಂಡಗಳು ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ 14 ಪಂದ್ಯಗಳನ್ನು ಡೆಲ್ಲಿ ಕ್ಯಾಪಿಟಲ್ಸ್ (ಹಿಂದಿನ ಡೆಲ್ಲಿ ಡೇರ್ಡೆವಿಲ್ಸ್) ಗೆದ್ದಿದೆ. ಉಳಿದ 16 ಮುಂಬೈ ಇಂಡಿಯನ್ಸ್ ಗೆದ್ದಿದೆ.
Published by:shrikrishna bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ