ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 54ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿತ್ತು. ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 54ನೇ ಪಂದ್ಯ ಇಂದು ( ಮೇ 8 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ (Sun Risers) ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಿತು. ಈ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ (Faf Du Plessis) ಬಳಗ ಕೇನ್ ವಿಲಿಯಮ್ಸನ್ ಬಳಗವನ್ನು ಸದೆಬಡಿದು 67 ರನ್ಗಳ ಬೃಹತ್ ಜಯ ಸಾಧಿಸಿದೆ. ಟೂರ್ನಿಯಲ್ಲಿ ಏಳನೇ ಜಯ ದಾಖಲಿಸಿರುವ ಆರ್ಸಿಬಿ ನಾಲ್ಕನೇ ಸ್ಥಾನದಲ್ಲಿ ಭದ್ರವಾಗಿದೆ. ಇಂದಿನ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ (Dinesh Karthik) ಅಬ್ಬರಿಸಿದರು. ಕೊನೆ ಓವರ್ನಲ್ಲಿ ಅಬ್ಬರ ಬ್ಯಾಟಿಂಗ್ ಮಾಡಿದರು.
ದಿನೇಶ್ ಕಾರ್ತಿಕ್ ಮುಂದೆ ತಲೆ ಬಾಗಿದ ಕೊಹ್ಲಿ!
ಕೊನೆಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗ್ಲೆನ್ ಮ್ಯಾಕ್ಸ್ವೆಲ್ 24 ಎಸೆತಗಳಲ್ಲಿ 33 ರನ್ ಬಾರಿಸಿದರೆ, ಜೀವದಾನದ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡ ದಿನೇಶ್ ಕಾರ್ತಿಕ್ ಕೇವಲ 8 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 30 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು. 19ನೇ ಓವರ್ನಲ್ಲಿ 3 ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸುವ ಮೂಲಕ ಕೊನೆ ಓವರ್ನಲ್ಲಿ 25 ರನ್ ಗಳಿಸಿದರು. 20 ಓವರ್ ಬಳಿಕ ದಿನೇಶ್ ಕಾರ್ತಿಕ್ ಆರ್ಸಿಬಿ ವಿರಾಟ್ ಕೊಹ್ಲಿ ಎದುರಾದರು. ಆರ್ಸಿಬಿ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ದಿನೇಶ್ ಕಾರ್ತಿಕ್ ಬರ್ತಿದ್ದಂತೆ ತಲೆ ಬಾಗಿ ವೆಲ್ಕಮ್ ಮಾಡಿದ್ದಾರೆ.
ಇದಕ್ಕೆ ವಿರಾಟ್ ಕೊಹ್ಲಿ ಎಲ್ಲರಿಗೂ ಇಷ್ಟ!
ಕಿಂಗ್ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ಗೆ ಬೋ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ತ ಡಕ್ಔಟ್ ಆದಾಗ ಬೇಜಾರು ಮಾಡಿಕೊಂಡಿದ್ದ ವಿರಾಟ್ ಕೊಹ್ಲಿ ಇತರೆ ಆಟಗಾರರು ಅಬ್ಬರಿಸುತ್ತಿದ್ದಂತೆ ಅವರನ್ನು ಪ್ರೋತ್ಸಾಹಿಸಿದರು. ಕೊನೆಗೆ ಬ್ಯಾಟಿಂಗ್ ಮುಗಿಸಿ ಡೆಸ್ಸಿಂಗ್ ರೂಂಗೆ ಬಂದ ದಿನೇಶ್ ಕಾರ್ತಿಕ್ ಕಂಡು ವಿರಾಟ್ ಕುಣಿದಾಡಿದ್ದಾರೆ. ಅಷ್ಟೇ ಅಲ್ಲದೇ ಅವರ ಮುಂದೆ ಬೋ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದಕ್ಕೆ ವಿರಾಟ್ ನಮಗೆ ಇಷ್ಟವಾಗೋದು ಅಂತ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ಐಪಿಎಲ್ ರಣರಂಗದಲ್ಲಿ ಹಸರಂಗ ಮ್ಯಾಜಿಕ್! ಗೆದ್ದು ಬೀಗಿದ ಆರ್ಸಿಬಿ, ಕಪ್ ನಮ್ದೇ ಬಾಸ್
ಆರ್ಸಿಬಿ ಬೌಲರ್ಗಳ ಮ್ಯಾಜಿಕ್!
ಇಂದಿನ ಪಂದ್ಯದಲ್ಲಿ ಆರ್ಸಿಬಿ ತಂಡ ಉತ್ತಮ ಆಟ ಪ್ರದರ್ಶಿಸಿದೆ. ಹಸರಂಗ 5 ವಿಕೆಟ್ ಕಬಳಿಸಿದರೆ, ಹೇಜಲ್ವುಡ್ 2 ವಿಕೆಟ್ ಪಡೆದುಕೊಂಡರು. ಇನ್ನೂ ಗ್ಲೆನ್ ಮ್ಯಾಕ್ಸ್ವೆಲ್ 1 ವಿಕೆಟ್, ಹರ್ಷಲ್ ಪಟೇಲ್ ತಲಾ ಒಂದು ವಿಕೆಟ್ ಪಡೆದುಕೊಂಡರು. ಇನ್ನೂ ಹೇಜಲ್ವುಡ್ ಹಾಗೂ ಹಸರಂಗಗೆ ಹ್ಯಾಟಿಕೆ ವಿಕೆಟ್ ಪಡೆಯವ ಅವಕಾಶ ಕೂಡ ಇತ್ತು.
ಇದನ್ನೂ ಓದಿ: ಸೂಪರ್ ಡೂಪರ್ ಡು ಪ್ಲೆಸಿಸ್, ಕೊನೆಯಲ್ಲಿ ಡಿಕೆ ದರ್ಬಾರ್! ಇದು ಆ್ಯಕ್ಚುಲಿ ಚೆನ್ನಾಗಿರೋದು
ಮತ್ತೆ ಡಕ್ ಔಟ್ ಆದ ವಿರಾಟ್ ಕೊಹ್ಲಿ!
ಇನ್ನಿಂಗ್ಸ್ ಆರಂಭದ ಮೊದಲ ಎಸೆತದಲ್ಲೇ ವಿರಾಟ್ ಕೊಹ್ಲಿ ಔಟಾಗಿದ್ದಾರೆ. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರಿಂದ ಒಳ್ಳೆಯ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ, ವಿರಾಟ್ ಸುಚಿತ್ ಎಸೆದ ಮೊದಲ ಬೌಲ್ನಲ್ಲೇ ಹೈದರಾಬಾದ್ ಸನ್ರೈಸರ್ಸ್ ತಂಡ ನಾಯಕ ಕೇನ್ ವಿಲಿಯಮ್ಸನ್ಗೆ ಕ್ಯಾಚ್ ನೀಡಿ ಔಟ್ ಆದರು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ, ಇಂದಿನ ಪಂದ್ಯದಲ್ಲಿ ಖಾತೆ ತೆರಯುವ ಮುನ್ನವೇ ಡಕ್ ಔಟ್ ಆಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ