ರಾಜಸ್ಥಾನ್ ರಾಜ್ಯ ತಂಡದ ಮಾಜಿ ಲೆಗ್ ಸ್ಪಿನ್ನರ್ ವಿವೇಕ್ ಯಾದವ್ ಕೊರೋನಾಗೆ ಬಲಿಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ 36 ವರ್ಷದ ವಿವೇಕ್ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಹೀಗಾಗಿ ಕೀಮೊಥೆರಪಿ ನಡೆಯುತ್ತಿತ್ತು. ಈ ವೇಳೆ ನಡೆಸಲಾದ ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟಿವ್ ಆಗಿರುವುದು ತಿಳಿದು ಬಂದಿದೆ. ಹೀಗಾಗಿ ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ವಿವೇಕ್ ಯಾದವ್ ಮೃತಪಟ್ಟಿದ್ದಾರೆ.
ಈ ವಿಚಾರವನ್ನು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಟ್ವೀಟ್ ಮೂಲಕ ತಿಳಿಸಿದ್ದು, ರಾಜಸ್ಥಾನ್ ರಣಜಿ ತಂಡದ ಆಟಗಾರ ಹಾಗೂ ನನ್ನ ಆತ್ಮೀಯ ಸ್ನೇಹಿತ ವಿವೇಕ್ ಯಾದವ್ ನಮ್ಮನ್ನಗಲಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
Rajasthan Ranji Player and a dear friend...Vivek Yadav is no more. May his soul R.I.P. Thoughts and prayers with the family 🙏 Om Shanti.
— Wear a Mask. Stay Safe, India (@cricketaakash) May 5, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ