RCB vs RR: ಟಾಸ್​ ಗೆದ್ದಾಯ್ತು.. ಅಖಾಡಕ್ಕೆ ಇಳಿದಾಯ್ತು! ಇನ್ನೂ ಆರ್​​ಸಿಬಿ ಗೆಲ್ಲೊದೊಂದೆ ಬಾಕಿ

ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟಾಸ್​ ಗೆದ್ದ ಆರ್​​ಸಿಬಿ ಬೌಲಿಂಗ್​ ಆಯ್ಕೆ

ಟಾಸ್​ ಗೆದ್ದ ಆರ್​​ಸಿಬಿ ಬೌಲಿಂಗ್​ ಆಯ್ಕೆ

  • Share this:
ಇಂಡಿಯನ್ ಪ್ರೀಮಿಯರ್ ಲೀಗ್(Indian Premier League) 15ನೇ ಸೀಸನ್‌ 13ನೇ ಪಂದ್ಯದಲ್ಲಿ ಆರ್​ಆರ್​(RR) ಹಾಗೂ ಆರ್​ಸಿಬಿ(RCB) ಮುಖಾಮುಖಿಯಾಗುತ್ತಿವೆ.  ಮುಂಬೈ(Mumbai)ನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಈ ಸೀಸನ್​ನಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ತೋರುತ್ತಿವೆ. ಆರ್​ಸಿಬಿಯ ಬ್ಯಾಟಿಂಗ್(Batting) ತುಂಬಾ ಪ್ರಬಲವಾಗಿದ್ದರೂ, ರಾಜಸ್ಥಾನ್ ರಾಯಲ್ಸ್ (RR vs RCB) ಬೌಲಿಂಗ್ ವಿಭಾಗ ಅದ್ಭುತವಾಗಿದೆ. ರಾಜಸ್ಥಾನ ಇಲ್ಲಿಯವರೆಗೆ ಎರಡು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಬೆಂಗಳೂರು(Bengaluru) ಒಂದು ಪಂದ್ಯವನ್ನು ಗೆದ್ದು ಒಂದು ಸೋತಿದೆ. ಇದೀಗ ಐಪಿಎಲ್ ಟೂರ್ನಿಯಲ್ಲಿಂದು ರಾಯಲ್ ಹೋರಾಟ. ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI)

ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI)

ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಶೆರ್ಫಾನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ: ಬಡತನದಿಂದ ಕ್ರಿಕೆಟ್​ಗೆ ಟಾಟಾ ಹೇಳಲು ನಿರ್ಧರಿಸಿದ್ದ ಆಟಗಾರ ಈಗ ಎಲ್ಲರ ಕಣ್ಮಣಿ

ಉತ್ತಮ ಆರಂಭ ಪಡೆದಿರುವ ರಾಜಸ್ತಾನ್​ ರಾಯಲ್ಸ್​!

ಸಂಜು ಸ್ಯಾಮನ್ಸ್ ನೇತೃತ್ವದ ರಾಜಸ್ತಾನ್ ರಾಯಲ್ಸ್ ಈ ಸೀಸನ್‌ನಲ್ಲಿ ಉತ್ತಮ ಆರಂಭ ಪಡೆದಿದೆ. ಆಡಿರುವ ಎರಡು ಪಂದ್ಯಗಳನ್ನ ಜಯಿಸಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧ 61 ರನ್‌ಗಳಿಂದ ಪಂದ್ಯ ಜಯಿಸಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ 23ರನ್‌ಗಳಿಂದ ಪಂದ್ಯ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯ ಗೆಲ್ಲುವ ಉತ್ಸಾದಲ್ಲೇ ರಾಜಸ್ಥಾನ್​ ರಾಯಲ್ಸ್ ತಂಡ ಕಣಕ್ಕಿಳಿಯಲಿದೆ. ಇತ್ತ ಆರ್​ಸಿಬಿ ಕೂಡ ಇಂದಿನ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ. ಮಂಗಳವಾರ ಕ್ರಿಕೆಟ್​ ಅಭಿಮಾನಿಗಳಿಗೆ ಸಖತ್ ಕಿಕ್​ ಕೊಡುವ ಪಂದ್ಯ ಇದು ಎಂದರೆ ತಪ್ಪಾಗಲಾರದು.


ಆರ್‌ಆರ್‌ ವಿರುದ್ಧ ಹೆಚ್ಚು ಪಂದ್ಯ ಗೆದ್ದಿರುವ ಆರ್​ಸಿಬಿ!

ರಾಜಸ್ತಾನ್ ರಾಯಲ್ಸ್ ಹಾಗೂ ಆರ್‌ಸಿಬಿ ತಂಡವು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಆರ್‌ಸಿಬಿ 12 ಪಂದ್ಯಗಳಲ್ಲಿ ಗೆಲುವನ್ನ ಸಾಧಿಸಿದ್ರೆ, ರಾಜಸ್ಥಾನ್ ರಾಯಲ್ಸ್‌ 10 ಪಂದ್ಯಗಳಲ್ಲಿ ಗೆದ್ದಿದೆ. 2 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಉಭಯ ತಂಡಗಳು ಒಮ್ಮೆ ಮುಖಾಮುಖಿಯಾಗಿದ್ದು, ಆರ್‌ಸಿಬಿ ಪಂದ್ಯ ಜಯಿಸಿದೆ. ಮ್ಯಾಕ್ಸ್​ವೆಲ್​ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾವುದೇ ಕಾರಣಕ್ಕೂ ಆರ್​ಸಿಬಿ ಲೂಸ್​ ಬೌಲಿಂಗ್​ ಮಾಡಬಾರದು.

ಇದನ್ನೂ ಓದಿ: ಅವೇಶ್​ ಖಾನ್​ ದಾಳಿಗೆ ತತ್ತರಿಸಿದ ಸನ್​ರೈಸರ್ಸ್! ಗೆದ್ದು ಬೀಗಿದ ಲಕ್ನೋ ಸೂಪರ್​ ಜೈಂಟ್ಸ್​

ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಬಟ್ಲರ್!

ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಓಪನರ್ ಜಾಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್ ನಡೆಸಿದ್ದರು ಟಿ-20 ಕ್ರಿಕೆಟ್‌ನಲ್ಲಿ ಎರಡನೇ ಶತಕ ದಾಖಲಿಸಿದರು. 68 ಎಸೆತಗಳಲ್ಲಿ 100 ರನ್ ಕಲೆಹಾಕಿದ್ದರು ಬಟ್ಲರ್.

Published by:Vasudeva M
First published: