ಅದು 2017, ಏಪ್ರಿಲ್ 23. ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಕಪ್ತಾನ ನಿರ್ಧಾರವನ್ನು ಸಮರ್ಥಿಸುವಂತೆ ಬೆಂಗಳೂರು ಬೌಲರುಗಳು ಬೌಲಿಂಗ್ ಮಾಡಿದ್ದರು. ಪರಿಣಾಮ ಕೆಕೆಆರ್ 19.3 ಓವರ್ನಲ್ಲಿ 131 ರನ್ಗೆ ಸರ್ವಪತನ ಕಂಡಿತು.
132 ರನ್ಗಳ ಸಾಧಾರಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೊಲ್ಕತ್ತಾ ವೇಗಿ ಕೌಲ್ಟರ್ ನೈಲ್ ಮೊದಲ ಓವರ್ನಲ್ಲೇ ಕೊಹ್ಲಿಯನ್ನ ಔಟ್ ಮಾಡಿ ಶಾಕ್ ನೀಡಿದ್ದರು. ನಾಯಕನ ಹಿಂದೆ ಬಂದ ಬ್ಯಾಟ್ಸ್ಮನ್ಗಳು ಪೆವಿಲಿಯನ್ ಪರೇಡ್ ನಡೆಸಿ ಕೇವಲ 49 ರನ್ಗಳಿಗೆ ಆಲೌಟ್ ಆಗಿದ್ದರು. ಆರ್ಸಿಬಿಯ ಈ ಕಳಪೆ ಪ್ರದರ್ಶನದಿಂದ 82 ರನ್ಗಳ ಹೀನಾಯ ಸೋಲನುಭವಿಸಿತು.
ಕೆಕೆಆರ್ ವಿರುದ್ಧದ ಈ ಹೀನಾಯ ಸೋಲಿಗೆ ಇದೀಗ ಆರ್ಸಿಬಿ ಮರುತ್ತರ ನೀಡಿದೆ. ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ನ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಗೆಲುವು ಸಾಧಿಸಿದೆ. ಎಬಿ ಡಿವಿಲಿಯರ್ಸ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲರ್ಗಳ ಭರ್ಜರಿ ಪ್ರದರ್ಶನದಿಂದ ಕೊಹ್ಲಿ ಪಡೆ ಭರ್ಜರಿ ಜಯ ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.
ಆರ್ಸಿಬಿ ನೀಡಿದ್ದ 195 ರನ್ಗಳ ಕಠಿಣ ಟಾರ್ಗೆಟ್ ಬೆನ್ನಟ್ಟಿದ ಕೆಕೆಆರ್ ನಿಗದಿತ 20 ಓವರ್ನಲ್ಲಿ 112 ರನ್ ಗಳಿಸಲಷ್ಟೇ ಪೇರಿಸಲು ಶಕ್ತರಾದರು. ಈ ಮೂಲಕ 82 ರನ್ಗಳ ಹೀನಾಯ ಸೋಲುನುಭವಿಸಿತು. ಇತ್ತ ಭರ್ಜರಿ ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ಮೂರು ವರ್ಷಗಳ ಹಿಂದಿನ 82 ರನ್ಗಳ ಹೀನಾಯ ಸೋಲಿನ ಲೆಕ್ಕ ಚುಕ್ತಾ ಮಾಡಿತು. ಈ ಮೂಲಕ ಐಪಿಎಲ್ ಇತಿಹಾಸದ ಕಳಪೆ ಪ್ರದರ್ಶನದ ರಿವೇಂಜನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ ತೀರಿಸಿಕೊಂಡಿತು.
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
ಇದನ್ನೂ ಓದಿ:IPL 2020: ಮೈದಾನದಲ್ಲೇ ಬೈಯ್ದಾಡಿಕೊಂಡ ಪಾಂಡ್ಯ ಬ್ರದರ್ಸ್: ಸಿಟ್ಟಿಗೆ ಕಾರಣವೇನು ಗೊತ್ತಾ?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ