Gautam Gambhir: ಈತನನ್ನು ಟೀಮ್ ಇಂಡಿಯಾಗೆ ಸೇರಿಸಲು ಸೂಕ್ತ ಸಮಯ: ಗೌತಮ್ ಗಂಭೀರ್

IPL 2020: . ಆತ ಪ್ರಥಮ ದರ್ಜೆ ಕ್ರಿಕೆಟ್​ನಲ್ಲೂ ಪ್ರಾಬಲ್ಯ ಹೊಂದಿದ್ದು, ಈಗ ಐಪಿಎಲ್​ನಲ್ಲೂ ಸ್ಥಿರ ಪ್ರದರ್ಶನ ಮುಂದುವರೆಸಿದ್ದಾರೆ. ಅವರಿಗಿನ್ನೂ 30 ವರ್ಷ. ಇನ್ನೂ 6 ರಿಂದ 7 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಬಹುದು.

Gautam Gambhir

Gautam Gambhir

 • Share this:
  ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೂರ್ಯಕುಮಾರ್ ಯಾದವ್ ಮಿಂಚಿಂಗ್ ಮುಂದುವರೆದಿದೆ. ಬ್ಯಾಕ್ ಟು ಬ್ಯಾಕ್ ಅರ್ಧಶತಕಗಳ ಮೂಲಕ ಸಂಚಲನ ಸೃಷ್ಟಿಸುತ್ತಿದ್ದಾರೆ. ಇದರಿಂದಾಗಿಯೇ ಮುಂಬೈ ಇಂಡಿಯನ್ಸ್ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಆಯ್ಕೆ ಮಾಡುವ ಕೂಗು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಇದೀಗ ಸೂರ್ಯನ ಪರ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಬ್ಯಾಟ್ ಬೀಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಗೌತಿ, ಸೂರ್ಯಕುಮಾರ್ ಅವರು ಕೇವಲ ಟಿ20 ಬ್ಯಾಟ್ಸ್​ಮನ್ ಅಲ್ಲ. ಆತನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಆಡುವ ಸಾಮರ್ಥ್ಯವಿದೆ ಎಂದಿದ್ದಾರೆ.

  ಸೂರ್ಯಕುಮಾರ್ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕಳೆದ ಮೂರು ಸೀಸನ್​ಗಳಲ್ಲೂ 400ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದಾರೆ. ಅಲ್ಲದೆ 3-4 ವರ್ಷಗಳಿಂದ ದೇಶೀಯ ಕ್ರಿಕೆಟ್​ನಲ್ಲೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದಾಗ್ಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡಲಾದ ತಂಡದಲ್ಲಿ ಸೂರ್ಯನಿಗೆ ಅವಕಾಶ ನೀಡಿರಲಿಲ್ಲ. ಈ ಆಯ್ಕೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಭರ್ಜರಿ ಅರ್ಧಶತಕ ಬಾರಿಸಿ ಗಮನ ಸೆಳೆದಿದ್ದರು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಕ್ವಾಲಿಫೈಯರ್ ಮ್ಯಾಚ್​ನಲ್ಲೂ ಆಕರ್ಷಕ ಅರ್ಧಶತಕ ಬಾರಿಸಿದರು.

  ಇದೇ ಕಾರಣದಿಂದ ಅದ್ಭುತ ಫಾರ್ಮ್​ನಲ್ಲಿರುವ ಸೂರ್ಯಕುಮಾರ್ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲು ಸೂಕ್ತ ಸಮಯ ಎಂದು ಗಂಭೀರ್ ತಿಳಿಸಿದ್ದಾರೆ. ಆತ ಪ್ರಥಮ ದರ್ಜೆ ಕ್ರಿಕೆಟ್​ನಲ್ಲೂ ಪ್ರಾಬಲ್ಯ ಹೊಂದಿದ್ದು, ಈಗ ಐಪಿಎಲ್​ನಲ್ಲೂ ಸ್ಥಿರ ಪ್ರದರ್ಶನ ಮುಂದುವರೆಸಿದ್ದಾರೆ. ಅವರಿಗಿನ್ನೂ 30 ವರ್ಷ. ಇನ್ನೂ 6 ರಿಂದ 7 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಬಹುದು ಎಂಬುದು ನನ್ನ ಅಭಿಪ್ರಾಯ. ಒತ್ತಡವನ್ನು ಸಮರ್ಥವಾಗಿ ನಿರ್ವಹಿಸುವ ಕಲೆ ಆತನಲ್ಲಿದ್ದು, ಹೀಗಾಗಿ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲು ಇದುವೇ ಸೂಕ್ತ ಸಮಯ ಎಂದು ಗಂಭೀರ್ ಅಭಿಪ್ರಾಯಪಟ್ಟರು.

  ಪ್ರಸಕ್ತ ಐಪಿಎಲ್​ನಲ್ಲಿ 15 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ 148.23 ಸ್ಟ್ರೈಕ್ ರೇಟ್​ನಲ್ಲಿ 461 ರನ್​ ಕಲೆಹಾಕಿದ್ದಾರೆ. ಇನ್ನು ಕಳೆದ ಸೀಸನ್​ನಲ್ಲಿ 424 ರನ್ ಬಾರಿಸಿದ್ರೆ, 2018 ರಲ್ಲಿ 14 ಪಂದ್ಯಗಳಿಂದ 512 ರನ್ ಸಿಡಿಸಿದ್ದರು.
  POINTS TABLE:

  SCHEDULE TIME TABLE:

  ORANGE CAP:

  PURPLE CAP:

  RESULT DATA:

  MOST SIXES:

  ಇದನ್ನೂ ಓದಿ: IPL 2020: ಇಲ್ಲಿವರೆಗೂ ಈತ ಹೇಳಿದ ಭವಿಷ್ಯ ನಿಜವಾಗಿದೆ: ಈ ಬಾರಿ ಕಪ್ ಗೆಲ್ಲುವ ತಂಡವನ್ನೂ ತಿಳಿಸಿದ್ದಾನೆ..!
  Published by:zahir
  First published: