ಇಂಡಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯ ಇಂದು ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದ್ದು ರಾಜಸ್ಥಾನ ರಾಯಲ್ಸ್ ತಂಡ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಸೋತು 4 ಪಂದ್ಯಗಳಲ್ಲಿ ಜಯಭೇರಿ ಸಾಧಿಸಿದ್ದು (+1.060) ನೆಟ್ ರನ್ ರೇಟ್ ನಿಂದ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಆಡಿರುವ 5 ಪಂದ್ಯಗಳಲ್ಲಿ 2 ಗೆಲುವು, 3 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ತಂಡದ ಲಕ್ಕಿ ಮೈದಾನ ಶಾರ್ಜಾದಲ್ಲೇ ಜಯ ದಾಖಲಿಸಲು ಹೋರಾಡುತ್ತಿದೆ. ನಾಯಕ ಸ್ಟೀವ್ ಸ್ಮಿತ್, ಸಂಜು ಸ್ಯಾಮ್ಸನ್ ಆರಂಭಿಕ ಹಂತದಲ್ಲಿ ಸಂಪೂರ್ಣ ವಿಫಲರಾಗುತ್ತಿದ್ದಾರೆ.
IPL 2020: CSK ಆಟಗಾರರು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ: ಸೆಹ್ವಾಗ್ ವ್ಯಂಗ್ಯ
ಸ್ಯಾಮ್ಸನ್ ಆರಂಭಿಕ 2 ಪಂದ್ಯಗಳಲ್ಲಿ ಸಿಡಿದರೂ ಸತತ 3 ಪಂದ್ಯಗಳಲ್ಲಿ ರನ್ಗಳಿಸಲು ಪರದಾಡಿದ್ದಾರೆ. ಮುಂಬೈ ಎದುರು ಜೋಸ್ ಬಟ್ಲರ್ ಹೊರತುಪಡಿಸಿ ಬ್ಯಾಟಿಂಗ್ ವಿಭಾಗದ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಮುಂಬೈ ಎದುರು ತಂಡದಲ್ಲಿ ಸ್ಥಾನ ಪಡೆದರೂ ಕನಿಷ್ಠ ಖಾತೆ ತೆರೆಯಲು ವಿಫಲರಾಗಿದ್ದರು.
ಇತ್ತ ಡೆಲ್ಲಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಭಾರತೀಯರು ಮಿಂಚುತ್ತಿರುವುದು ತಂಡಕ್ಕೆ ಹೆಚ್ಚು ಸಹಕಾರಿಯಾಗಿದೆ. ಪೃಥ್ವಿಶಾ, ಶಿಖರ್ ಧವನ್, ನಾಯಕ ಶ್ರೇಯಸ್ ಅಯ್ಯರ್ ಶ್ರೇಷ್ಠ ಪ್ರದರ್ಶನ ತೋರುತ್ತಿದ್ದಾರೆ. ಬೌಲಿಂಗ್ನಲ್ಲಿ ರಬಾಡ, ಅನ್ರಿಚ್ ನೋರ್ಜೆ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ.
ಕಳೆದ ಆರ್ಸಿಬಿ ವಿರುದ್ಧ ಮಿಂಚಿದ್ದ ಮಾರ್ಕಸ್ ಸ್ಟೋಯಿನಿಸ್ ಆಲ್ ರೌಂಡ್ ಪ್ರದರ್ಶನ ಕೂಡ ತಂಡಕ್ಕೆ ಪ್ಲಸ್ ಪಾಯಿಂಟ್. ಆದರೆ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಗಾಯದ ಸಮಸ್ಯೆಯಿಂದ ಕೂಟದಿಂದ ಹೊರನಡೆದಿದ್ದು ಡೆಲ್ಲಿ ಸ್ಪಿನ್ ವಿಭಾಗಕ್ಕೆ ಕೊಂಚ ಮಟ್ಟಿನ ಹಿನ್ನಡೆಯಾಗಿದೆ.
ರಾಜಸ್ಥಾನ್ ತಂಡಕ್ಕೆ ಹೋಲಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠವಾಗಿದ್ದು, ಶ್ರೇಯಸ್ ಪಡೆ ಇಂದಿನ ಪಂದ್ಯದಲ್ಲಿ ಗೆಲ್ಲುವುದು ಬಹುತೇಕ ಪಕ್ಕಾ ಆಗಿದೆ. ಚಿಕ್ಕ ಮೈದಾನವಾದ್ದರಿಂದ ಆರ್ಆರ್ ತಂಡ ಮೊದಲು ಬ್ಯಾಟ್ ಮಾಡಿದರೆ 195-215 ರನ್ ಕಲೆಹಾಕುವ ಅಂದಾಜಿದೆ. ಇತ್ತ ಡೆಲ್ಲಿ ಮೊದಲು ಬ್ಯಾಟ್ ಮಾಡಿದರೆ 205-225 ರನ್ ಚಚ್ಚುವ ಸಾಧ್ಯತೆ ಹೆಚ್ಚಿದೆ.
IPL 2020, RR vs DC: ಸೋಲಿನ ಸುಳಿಯಿಂದ ಹೊರಬರಲು ಆರ್ಆರ್ ತಂಡದಲ್ಲಿ ಮಹತ್ವದ ಬದಲಾವಣೆ?
ರಾಜಸ್ಥಾನ: ಯಶಸ್ವಿ ಜೈಸ್ವಾಲ್/ಮನನ್ ವೋಹ್ರಾ, ಸ್ಟೀವನ್ ಸ್ಮಿತ್ (ನಾಯಕ), ಜಾಸ್ ಬಟ್ಲರ್, ಸಂಜು ಸ್ಯಾಮ್ಸನ್, ಮಹಿಪಾಲ್ ಲೊನ್ರೊರ್, ರಾಹುಲ್ ತೆವಾತಿಯ, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್/ ವರುಣ್ ಆರುಣ್, ಕಾರ್ತಿಕ್ ತ್ಯಾಗಿ.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಶಿಮ್ರಾನ್ ಹೆಟ್ಮೇರ್, ಮಾರ್ಕಸ್ ಸ್ಟೋಯಿನಿಸ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅನ್ರಿಚ್ ನೋರ್ಜೆ.
ಪಂದ್ಯ ಆರಂಭ: ರಾತ್ರಿ : 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಮುಖಾಮುಖಿ: 20, ರಾಜಸ್ಥಾನ ರಾಯಲ್ಸ್: 11, ಡೆಲ್ಲಿ ಕ್ಯಾಪಿಟಲ್ಸ್: 9.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ