ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 28ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ರಾಜಸ್ಥಾನ್ ರಾಯಲ್ಸ್ 55 ರನ್ಗಳ ಭರ್ಜರಿ ಜಯ ಸಾಧಿಸಿದೆ. ಆರ್ಆರ್ ನೀಡಿದ 221 ರನ್ಗಳ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಸನ್ರೈಸರ್ಸ್ 8 ವಿಕೆಟ್ ನಷ್ಟಕ್ಕೆ 165 ರನ್ಗಳಿಸಲಷ್ಟೇ ಶಕ್ತರಾದರು.
ಇದಕ್ಕೂ ಮುನ್ನ ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ತಂಡದ ಹೊಸ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಕಣಕ್ಕಿಳಿದ ಆರ್ಆರ್ ತಂಡಕ್ಕೆ ಜೋಸ್ ಬಟ್ಲರ್ ಬಿರುಸಿನ ಆರಂಭ ಒದಗಿಸಿದರು. ಆದರೆ ಮತ್ತೊಂದು ತುದಿಯಲ್ಲಿದ್ದ ಯಶಸ್ವಿ ಜೈಸ್ವಾಲ್ (12) ರಶೀದ್ ಖಾನ್ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇದಾಗ್ಯೂ ಸಂಜು ಸ್ಯಾಮ್ಸನ್ ಜೊತೆಗೂಡಿ ಬ್ಯಾಟ್ ಬೀಸಿದ ಬಟ್ಲರ್ ಹೈದರಾಬಾದ್ ಬೌಲರುಗಳ ಬೆಂಡೆತ್ತಿದರು.
ಮೊದಲ 10 ಓವರ್ನಲ್ಲಿ 77 ರನ್ ಕಲೆಹಾಕಿದ ಈ ಜೋಡಿ ಆ ಬಳಿಕ ಬಿರುಸಿನ ಬ್ಯಾಟಿಂಗ್ಗೆ ಮುಂದಾದರು. ಅದರಂತೆ 16ನೇ ಓವರ್ ವೇಳೆಗೆ ತಂಡದ ಮೊತ್ತವನ್ನು 146ಕ್ಕೆ ತಂದು ನಿಲ್ಲಿಸಿದರು. ಈ ನಡುವೆ ಬಟ್ಲರ್ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಅಕ್ಷರಶಃ ಅಬ್ಬರಿಸಿದ ಇಂಗ್ಲೆಂಡ್ ಆಟಗಾರ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಹಂತದಲ್ಲಿ 48 ರನ್ ಬಾರಿಸಿದ್ದ ಸಂಜು ಸ್ಯಾಮ್ಸನ್ ವಿಜಯ್ ಶಂಕರ್ಗೆ ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ ಗಟ್ಟಿಯಾಗಿ ನೆಲೆಯೂರಿದ್ದ ಜೋಸ್ ಬಟ್ಲರ್ ತಮ್ಮ ಆರ್ಭಟವನ್ನು ಮುಂದುವರೆಸಿದರು. ಪರಿಣಾಮ 19ನೇ ಓವರ್ನಲ್ಲಿ ರಾಜಸ್ಥಾನ್ ರಾಯಲ್ಸ್ ಮೊತ್ತ 200ರ ಗಡಿದಾಟಿತು. ಈ ವೇಳೆ 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್ನೊಂದಿಗೆ 124 ರನ್ ಬಾರಿಸಿದ ಬಟ್ಲರ್ ಸಂದೀಪ್ ಶರ್ಮಾಗೆ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ಅಂತಿಮ ಓವರ್ನಲ್ಲಿ ಭರ್ಜರಿ ಸಿಕ್ಸರ್ ಬಾರಿಸುವುದರೊಂದಿಗೆ ಡೇವಿಡ್ ಮಿಲ್ಲರ್ ರಾಜಸ್ಥಾನ್ ರಾಯಲ್ಸ್ ತಂಡದ ಮೊತ್ತವನ್ನು 3 ವಿಕೆಟ್ ನಷ್ಟಕ್ಕೆ 220ಕ್ಕೆ ತಂದು ನಿಲ್ಲಿಸಿದರು.
ಈ ಬಿಗ್ ಟಾರ್ಗೆಟ್ ಬೆನ್ನತ್ತಿದ ಎಸ್ಆರ್ಹೆಚ್ಗೆ ಆರಂಭಿಕರಾಗಿ ಕಣಕ್ಕಿಳಿದ ಮನೀಷ್ ಪಾಂಡೆ ಹಾಗೂ ಜಾನಿ ಬೈರ್ಸ್ಟೋವ್ ಉತ್ತಮ ಆರಂಭ ಒದಗಿಸಿದ್ದರು. ಪವರ್ಪ್ಲೇನಲ್ಲಿ ತಂಡದ ಮೊತ್ತ 57ಕ್ಕೇರಿಸಿ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು. ಆದರೆ ಪವರ್ಪ್ಲೇ ಮುಕ್ತಾಯದ ಬೆನ್ನಲ್ಲೇ ಪಾಂಡೆ (31) ಹಾಗೂ ಬೈರ್ಸ್ಟೊವ್ (30) ನಿರ್ಗಮಿಸಿದರು. ನಂತರದ ಬಂದ ಕೇನ್ ವಿಲಿಯಮ್ಸನ್ (20), ವಿಜಯ್ ಶಂಕರ್ (8) ಹಾಗೂ ಕೇದರ್ ಜಾಧವ್ ಬೇಗನೆ ವಿಕೆಟ್ ಒಪ್ಪಿಸಿ ಹೊರನಡೆದರು.
ಈ ಹಂತದಲ್ಲಿ ಮೊಹಮ್ಮದ್ ನಬಿ ಕೇವಲ 5 ಎಸೆತಗಳಲ್ಲಿ 17 ರನ್ ಬಾರಿಸಿದರೂ, ಅದನ್ನು ದೊಡ್ಡ ಮೊತ್ತವನ್ನಾಗಿಸಲು ಸಾಧ್ಯವಾಗಲಿಲ್ಲ. ಇನ್ನು ಸಮದ್ (10), ರಶೀದ್ ಖಾನ್ (0) ನಿರ್ಗಮನದೊಂದಿಗೆ ರಾಜಸ್ಥಾನ್ ಗೆಲುವು ಖಾತ್ರಿಯಾಯಿತು. ಅಂತಿಮವಾಗಿ 8 ವಿಕೆಟ್ ಕಳೆದುಕೊಂಡು ಸನ್ರೈಸರ್ಸ್ ಹೈದರಾಬಾದ್ 165 ರನ್ಗಳಿಸಿತು. ಇದರೊಂದಿಗೆ ರಾಜಸ್ಥಾನ್ ರಾಯಲ್ಸ್ 55 ರನ್ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಆರ್ಆರ್ ಪರ ಮುಸ್ತಫಿಜುರ್ ರೆಹಮಾನ್ ಹಾಗೂ ಕ್ರಿಸ್ ಮೋರಿಸ್ ತಲಾ 3 ವಿಕೆಟ್ ಉರುಳಿಸಿ ಮಿಂಚಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ