ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 6 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ 39 ವರ್ಷದ ಸಿಎಸ್ಕೆ ನಾಯಕ ಧೋನಿ ಕಡೆಯಿಂದ ಮಾತ್ರ ನಿರೀಕ್ಷಿತ ಮಟ್ಟದ ಆಟ ಮೂಡಿಬರುತ್ತಿಲ್ಲ. ಹೀಗಾಗಿ ಮುಂದಿನ ಸೀಸನ್ನಲ್ಲಿ ಧೋನಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಇತ್ತ ಇದರ ಬೆನ್ನಲ್ಲೇ ಧೋನಿಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.
ಕೆಲ ದಿನಗಳ ಹಿಂದೆಯಷ್ಟೇ ರವೀಂದ್ರ ಜಡೇಜಾ ಸಿಎಸ್ಕೆ ತಂಡದ ಮುಂದಿನ ನಾಯಕರಾಗಲಿದ್ದಾರೆ ಎಂದು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಭವಿಷ್ಯ ನುಡಿದಿದ್ದರು. ಆದರೆ ಇದೀಗ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ಧೋನಿಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬುದನ್ನು ಹೆಸರಿಸಿದ್ದಾರೆ.
ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಮಹೇಂದ್ರ ಸಿಂಗ್ ಧೋನಿ ಅವರ ಉತ್ತರಾಧಿಕಾರಿಯಾಗಲಿದ್ದಾರೆ ಎಂದು ವೀರು ಭವಿಷ್ಯ ನುಡಿದಿದ್ದಾರೆ. ಕಳೆದ ಸೀಸನ್ನಿಂದ ಸಿಎಸ್ಕೆ ಪರ ಸ್ಥಿರ ಪ್ರದರ್ಶನ ನೀಡುತ್ತಾ ಬರುತ್ತಿರುವ ರುತುರಾಜ್ ಅವರ ಪ್ರದರ್ಶನವನ್ನು ಆಧಾರವಾಗಿಟ್ಟುಕೊಂಡು ಆತನ ಮುಂದಿನ ಸಿಎಸ್ಕೆ ನಾಯಕನಾಗಲಿದ್ದಾನೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ