13ನೇ ಆವೃತ್ತಿಯ ಐಪಿಎಲ್ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಕಾದಾಟದಲ್ಲಿ ಡೇವಿಡ್ ವಾರ್ನರ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ಹಾಗೂ ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗಲಿವೆ. ಮತ್ತೊಂದು ಪಂದ್ಯ ದುಬೈನಲ್ಲಿ ನಡೆಯಲಿದ್ದು ಮುಂಬೈ ಇಂಡಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೆಣೆಸಾಟ ನಡೆಸಲಿವೆ.
ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಎಸ್ಆರ್ಹೆಚ್ ಹಾಗೂ ಕೆಕೆಆರ್ಗೆ ಈ ಪಂದ್ಯ ಮುಖ್ಯವಾಗಿದೆ. ಕೋಲ್ಕತ್ತಾ ತಂಡದಲ್ಲಿ ನಾಯಕತ್ವದ ಬದಲಾವಣೆ ಆದರೂ ತಂಡದ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಓಪನರ್ಗಳು ಸೇರಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಲ ತುಂಬಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ.
RR vs RCB: ಎಬಿಡಿ ಅಬ್ಬರದ ಮುಂದೆ ಮರೆಯದಿರಿ ಚೊಚ್ಚಲ ಪಂದ್ಯದಲ್ಲೇ ಆರ್ಸಿಬಿ ಹುಡುಗನ ರೋಚಕ ಕ್ಯಾಚ್
ಆ್ಯಂಡ್ರೊ ರಸೆಲ್ಗೆ ಎಷ್ಟೇ ಅವಕಾಶ ಸಿಕ್ಕರು ಉಪಯೋಗಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಮೇಲೆ ಹೆಚ್ಚು ಗಮನ ಹರಿಸಬೇಕೆಂದು ನಾಯಕತ್ವದಿಂದ ಕೆಳಗಿಳಿದಿದ್ದರು. ಆದರೆ, ಕಳೆದ ಪಂದ್ಯದಲ್ಲಿ ಯಾವುದೇ ಕಮಾಲ್ ಮಾಡಲಿಲ್ಲ. ಇಯಾನ್ ಮಾರ್ಗನ್ ಏಕಾಂಗಿ ಹೋರಾಟಕ್ಕೆ ಯಾವೊಬ್ಬ ಬ್ಯಾಟ್ಸ್ಮನ್ ಸಾತ್ ನೀಡುತ್ತಿಲ್ಲ.
ಇತ್ತ ಕೆಕೆಆರ್ ರೀತಿಯಲ್ಲೇ ಹೈದರಾಬಾದ್ ಸ್ಥಿತಿ ಕೂಡ ಇದೆ. ಜಾನಿ ಬೈರ್ಸ್ಟೋ, ಮನೀಶ್ ಪಾಂಡೆ ಯಶಸ್ಸು ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಬೌಲಿಂಗ್ನಲ್ಲಿ ರಶೀದ್ ಖಾನ್, ನಟರಾಜನ್ ಹೊರತುಪಡಿಸಿ ಬೇರೆಯವರಿಂದ ಸ್ಥಿರ ನಿರ್ವಹಣೆ ಕಾಣುತ್ತಿಲ್ಲ.
ಉಭಯ ತಂಡಗಳು ಈವರೆಗೆ 18 ಬಾರಿ ಮುಖಾಮುಖಿ ಆಗಿದ್ದು ಸನ್ರೈಸರ್ಸ್ ಹೈದರಾಬಾದ್ 7 ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಇತಿಹಾಸವಿದೆ.
ಬ್ರಾವೋಗಿಂತ ಜಡೇಜಾ ಮೇಲೆಕೆ ಅಷ್ಟು ನಂಬಿಕೆ ಎಂದು ಪ್ರಶ್ನಿಸಿದವರಿಗೆ ಧೋನಿ ಕೊಟ್ರು ಉತ್ತರ
ಇನ್ನೂ ಇಂದು ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಮುಂಬೈ ಇಂಡಿಯನ್ಸ್ ಸತತ ಸೋಲಿನ ಬಳಿಕ ಗೆಲುವಿನ ಲಯಕ್ಕೆ ಬಂದಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ.
ಸ್ಫೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಬೊಂಬಾಟ್ ಅರ್ಧಶತಕದ ಮೂಲಕ ಟೂರ್ನಿಗೆ ಎಂಟ್ರಿ ಕೊಟ್ಟಿದ್ದು ತಂಡದ ಬಲವನ್ನು ಹೆಚ್ಚಿಸಿದೆ. ಅಲ್ಲದೆ ನಾಯಕ ಕೆ. ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ದೀಪಕ್ ಹೂಡ ತಂಡಕ್ಕೆ ನೆರವಾಗಲಿದ್ದಾರೆ.
ಇತ್ತ ಮುಂಬೈ ಇಂಡಿಯನ್ಸ್ ಎಲ್ಲಾ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ಎಲ್ಲ ಆಟಗಾರರು ಪ್ರಚಂಡ ಫಾರ್ಮ್ನಲ್ಲಿದ್ದಾರೆ. ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಜವಾಬ್ದಾರಿಗೂ ಮೀರಿ ಪ್ರದರ್ಶನ ನೀಡುತ್ತಿದ್ದಾರೆ. ಆಲ್ರೌಂಡರ್ ಕೀರೊನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಹಾಗೂ ಕ್ರುನಾಲ್ ಪಾಂಡ್ಯ ಫಿನಿಶಿಂಗ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಇನ್ನೂ ಜೀವಂತ; ಇಲ್ಲಿದೆ ನೋಡಿ ಲೆಕ್ಕಾಚಾರ
ಮುಂಬೈ ಬೌಲಿಂಗ್ ಕೂಡ ಮಾರಕವಾಗಿದೆ. ಲಸಿತ್ ಮಲಿಂಗ ಅಲಭ್ಯತೆ ಚೂರು ಎದ್ದುಕಾಣುತ್ತಿಲ್ಲ. ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಬೆಂಕಿಯ ಚೆಂಡು ಉಗುಳುತ್ತಿದ್ದರೆ, ರಾಹುಲ್ ಚಹಾರ್, ಕ್ರುನಾಲ್ ಪಾಂಡ್ಯ ಸ್ಪಿನ್ ವಿಭಾಗದ ಅಸ್ತ್ರವಾಗಿದ್ದಾರೆ.
ಉಭಯ ತಂಡಗಳು ಐಪಿಎಲ್ನಲ್ಲಿ ಈವರೆಗೆ 25 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 14 ಹಾಗೂ ಪಂಜಾಬ್ 11 ಪಂದ್ಯಗಳಲ್ಲಿ ಗೆಲುವು ಕಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ