ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 54ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಸೆಣಸಾಡುತ್ತಿವೆ. ಈ ಪಂದ್ಯವು ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆಯುತ್ತಿದೆ. ಇನ್ನು, ಪಾಫ್ ಡುಪ್ಲೇಸಿಸ್ (Faf Du Plesiss) ನಾಯಕತ್ವದ ಆರ್ಸಿಬಿ ತಂಡಕ್ಕೆ ಹಾಗೂ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ಹೈದರಾಬಾದ್ ತಂಡಕ್ಕೆ ಇಂದಿನ ಪಂದ್ಯ ಬಹಳ ಪ್ರಮುಖವಾಗಿದ್ದು, ಬೆಂಗಳೂರು ತಂಡವು ಇಂದಿನ ಪಂದ್ಯ ಗೆಲ್ಲುವ ಮೂಲಕ ಪ್ಲೇ ಆಫ್ (Play off ಹಂತದ ಹಾದಿಯನ್ನು ಸುಗಮಗೊಳಿಸಕೊಳ್ಳಬೇಕಿದೆ. ಟಾಸ್ (Toss) ಗೆದ್ದು ಬ್ಯಾಟಿಂಗ್ (Batting) ಆಯ್ದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವಾಗಿದೆ. ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಮತ್ತೆ ಡಕ್ ಔಟ್ (Duck Out) ಆಗಿದ್ದಾರೆ. ಹಿಂದಿನ ಪಂದ್ಯದಲ್ಲಿ ಫಾರ್ಮ್ಗೆ ಮರಳಿದ್ದ ಕಿಂಗ್ ಕೊಹ್ಲಿ ಮತ್ತೆ ಎಡವಿದ್ದಾರೆ. ಹಸಿರು ಬಣ್ಣದ ಜೆರ್ಸಿ (Green Color Jersey) ತೊಟ್ಟು ಕಣಕ್ಕಿಳಿದ ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ.
ಇನ್ನಿಂಗ್ಸ್ನ ಮೊದಲ ಬಾಲ್ನಲ್ಲೇ ವಿರಾಟ್ ಔಟ್!
ಇನ್ನಿಂಗ್ಸ್ ಆರಂಭದ ಮೊದಲ ಎಸೆತದಲ್ಲೇ ವಿರಾಟ್ ಕೊಹ್ಲಿ ಔಟಾಗಿದ್ದಾರೆ. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರಿಂದ ಒಳ್ಳೆಯ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ, ವಿರಾಟ್ ಸುಚಿತ್ ಎಸೆದ ಮೊದಲ ಬೌಲ್ನಲ್ಲೇ ಹೈದರಾಬಾದ್ ಸನ್ರೈಸರ್ಸ್ ತಂಡ ನಾಯಕ ಕೇನ್ ವಿಲಿಯಮ್ಸನ್ಗೆ ಕ್ಯಾಚ್ ನೀಡಿ ಔಟ್ ಆದರು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ, ಇಂದಿನ ಪಂದ್ಯದಲ್ಲಿ ಖಾತೆ ತೆರಯುವ ಮುನ್ನವೇ ಡಕ್ ಔಟ್ ಆಗಿದ್ದಾರೆ.
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ!
RCB ತಂಡದಲ್ಲಿ ಹಸಿರು ಜೆರ್ಸಿ ಧರಿಸುವ ಟ್ರೆಂಡ್ 2011 ರಲ್ಲಿ ಪ್ರಾರಂಭವಾಯಿತು. ಇದಾದ ನಂತರ ಪ್ರತಿ ವರ್ಷ ಐಪಿಎಲ್ ಪಂದ್ಯಗಳಲ್ಲಿ ತಂಡವು ಹಸಿರು ಜೆರ್ಸಿಯನ್ನು ಧರಿಸುತ್ತದೆ. ಈ ಡ್ರೆಸ್ ಧರಿಸುವುದರ ಹಿಂದೆ ತಂಡಕ್ಕೆ ವಿಶೇಷ ಉದ್ದೇಶವಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪರಿಸರದ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶೇಷ ಅಭಿಯಾನವನ್ನು ನಡೆಸುತ್ತಿದೆ. ಈ ಜೆರ್ಸಿಯ ಮೂಲಕ RCB ತಂಡವು ಜನರಿಗೆ ಸಂದೇಶವನ್ನು ರವಾನಿಸುತ್ತದೆ, ಸುತ್ತಮುತ್ತಲಿನ ಪರಿಸರ ಉಳಿವಿಗಾಗಿ ಇದನ್ನು ಧರಿಸುತ್ತಾರೆ. ಒಟ್ಟಾರೆಯಾಗಿ, RCB ತಂಡವು ಪರಿಸರವನ್ನು ಉಳಿಸಲು ಮತ್ತು ಜಾಗತಿಕ ತಾಪಮಾನವನ್ನು ತಡೆಯಲು ಗ್ರೋ ಗ್ರೀನ್ ಅಭಿಯಾನವನ್ನು ಉತ್ತೇಜಿಸುತ್ತಿದೆ.
ಇದನ್ನೂ ಓದಿ: ಗ್ರೀನ್ ಜರ್ಸಿಯಲ್ಲಿ ಕಣಕ್ಕಿಳಿಯಲಿರುವ RCB, ಈ ಜರ್ಸಿಯ ವಿಶೇಷತೆ ಏನು ಗೊತ್ತಾ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11
ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್ವೆಲ್, ಶಾಬಾಜ್ ಅಹ್ಮದ್, ಮಹಿಪಾಲ್ ಲೋಮ್ರಾರ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್ವುಡ್.
ಸನ್ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11
ಕೇನ್ ವಿಲಿಯಮ್ಸನ್(ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಯ್ಡನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಶಾಂಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್.
ಇದನ್ನೂ ಓದಿ: ಈ ರೀತಿ ಪವಾಡ ನಡೆದಲ್ಲಿ ಪ್ಲೇ ಆಫ್ ಹಂತಕ್ಕೆ ತಲುಪಲಿದೆ ಚೆನ್ನೈ ಸೂಪರ್ ಕಿಂಗ್ಸ್
ಪ್ಲೇ ಆಫ್ ಪ್ರವೇಶಿಸುವ ದೃಷ್ಟಿಯಿಂದ ಎರಡೂ ತಂಡಗಳ ಪಾಲಿಗೆ ಇಂದಿನ ಪಂದ್ಯ ಸಾಕಷ್ಟು ಮಹತ್ವದ್ದೆನಿಸಿದ್ದು, ಎರಡೂ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸುವ ನಿರೀಕ್ಷೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ