Virat Kohli: IPL ನಲ್ಲಿ ಮತ್ತೊಂದು ದಾಖಲೆ ಬರೆದ ದಾಖಲೆಯ ಸರದಾರ

ಐಪಿಎಲ್​ ಕ್ರಿಕೆಟ್​ನಲ್ಲಿ 183 ಇನಿಂಗ್ಸ್​ನಲ್ಲಿ 5638 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ರನ್​ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಹಾಗೆಯೇ ಈ ಬಾರಿ ಕೂಡ ಭರ್ಜರಿ ಫಾರ್ಮ್​ 10 ಇನಿಂಗ್ಸ್​ನಲ್ಲಿ 365 ರನ್ ಸಿಡಿಸುವ ಮೂಲಕ ಆರೆಂಜ್ ಕ್ಯಾಪ್ ಪೈಪೋಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

Virat Kohli

Virat Kohli

 • Share this:
  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಪೂರೈಸಿದ ಮೊದಲ ಭಾರತೀಯನಾಗಿ ಗುರುತಿಸಿಕೊಂಡಿದ್ದ ರನ್ ಮೆಷಿನ್, ಈ ಬಾರಿ ಬೌಂಡರಿ ಸರದಾರನಾಗಿ ಮಿಂಚಿದ್ದಾರೆ. ಹೌದು, ಬುಧವಾರ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ 2 ಬೌಂಡರಿ ಬಾರಿಸುವ  ಮೂಲಕ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 500 ಫೋರ್ ಬಾರಿಸಿದ ಎರಡನೇ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದರು. ಹಾಗೆಯೇ ಈ ಸಾಧನೆಗೈದ 2ನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

  ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಸತತ 2 ಶತಕ ಸಿಡಿಸಿ ದಾಖಲೆ ಬರೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಐಪಿಎಲ್​ನಲ್ಲಿ 500 ಬೌಂಡರಿ ಬಾರಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದರು. ಧವನ್ ಸದ್ಯ 575 ಫೋರ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಕೊಹ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

  ಹಾಗೆಯೇ ಈ ಬಾರಿ ಐಪಿಎಲ್ ಆಡದಿರುವ ಸುರೇಶ್ ರೈನಾ 493 ಬೌಂಡರಿಗಳೊಂದಿಗೆ 3ನೇ ಸ್ಥಾನ ಪಡೆದಿದ್ದರೆ, ಗೌತಮ್ ಗಂಭೀರ್ 491 ಫೋರ್ ಬಾರಿಸಿ 4ನೇ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ 485 ಐದನೇ ಸ್ಥಾನದೊಂದಿಗೆ ವಿರಾಟ್ ಕೊಹ್ಲಿಯ ಹಿಂದಿದ್ದಾರೆ.

  ಇನ್ನು ಐಪಿಎಲ್​ ಕ್ರಿಕೆಟ್​ನಲ್ಲಿ 183 ಇನಿಂಗ್ಸ್​ನಲ್ಲಿ 5638 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ರನ್​ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಹಾಗೆಯೇ ಈ ಬಾರಿ ಕೂಡ ಭರ್ಜರಿ ಫಾರ್ಮ್​ 10 ಇನಿಂಗ್ಸ್​ನಲ್ಲಿ 365 ರನ್ ಸಿಡಿಸುವ ಮೂಲಕ ಆರೆಂಜ್ ಕ್ಯಾಪ್ ಪೈಪೋಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
  POINTS TABLE:

  SCHEDULE TIME TABLE:

  ORANGE CAP:

  PURPLE CAP:

  RESULT DATA:

  MOST SIXES:

  ಇದನ್ನೂ ಓದಿ: IPL 2020: 3ನೇ ವರ್ಷಕ್ಕೆ CSK ಸುಸ್ತು: ಡ್ಯಾಡಿಸ್ ಆರ್ಮಿ ವಿರುದ್ಧ ಕಿಡಿಕಾರಿದ ಕೋಚ್​
  Published by:zahir
  First published: