news18-kannada Updated:November 4, 2020, 5:48 PM IST
Virat kohli
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದೃಷ್ಟದ ಬಲದಿಂದ ಪ್ಲೇ ಆಫ್ ಪ್ರವೇಶಿಸಿದೆ. 3 ವರ್ಷಗಳ ಬಳಿಕ ಪ್ಲೇ ಆಫ್ಗೆ ಎಂಟ್ರಿ ಕೊಟ್ಟಿರುವ ಕೊಹ್ಲಿ ಪಡೆಯು ಎಲಿಮಿನೇಟರ್ ರೌಂಡ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಇಬ್ಬರು ಪ್ರಮುಖ ಆಟಗಾರರು ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.
ಹೌದು, ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಮೋರಿಸ್ ಗಾಯಗೊಂಡಿದ್ದಾರೆ. ಹೀಗಾಗಿ ಪಂದ್ಯದ ಅರ್ಧದಲ್ಲೇ ಮೋರಿಸ್ ಡಗೌಟ್ನತ್ತ ಹೆಜ್ಜೆ ಹಾಕಿದ್ದರು. ಅಲ್ಲದೆ ಈ ಪಂದ್ಯದಲ್ಲಿ ಕೇವಲ 2 ಓವರ್ ಮಾತ್ರ ಎಸೆದಿದ್ದರು. ಬಳಿಕ ಫೀಲ್ಡಿಂಗ್ಗೆ ಇಳಿದಿರಲಿಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೂ ಆಲ್ರೌಂಡರ್ ಮೋರಿಸ್ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.
ಅತ್ತ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ತಂಡದ ಪ್ರಮುಖ ವೇಗಿ ನವದೀಪ್ ಸೈನಿ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಸನ್ರೈಸರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಫಿಟ್ನೆಸ್ ಸಾಧಿಸಿದರೆ ಮಾತ್ರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಸೈನಿ ಆಡಲಿದ್ದಾರಾ ಎಂಬುದರ ಬಗ್ಗೆ ಇನ್ನೂ ಕೂಡ ಸ್ಪಷ್ಟತೆಯಿಲ್ಲ.
ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ, ಕ್ರಿಸ್ ಮೋರಿಸ್ ಮತ್ತು ನವದೀಪ್ ಸೈನಿ ಅವರ ಬಗ್ಗೆ ಇನ್ನಷ್ಟೇ ನಿರ್ಣಯ ತೆಗೆದುಕೊಳ್ಳಬೇಕಾಗಿದೆ. ನವೆಂಬರ್ 6 ರಂದು (ಶುಕ್ರವಾರ) ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೆ ಇವರಿಬ್ಬರೂ ಲಭ್ಯರಾಗಲಿದ್ದಾರೆ ಎಂಬ ಭರವಸೆ ಮಾತ್ರ ವ್ಯಕ್ತಪಡಿಸಿದ್ದಾರೆ.
ಶುಕ್ರವಾರದೊಳಗೆ ಈ ಇಬ್ಬರು ಆಟಗಾರರು ಫಿಟ್ನೆಸ್ ಸಾಧಿಸಿದರೆ ಮಾತ್ರ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಪಂದ್ಯದಲ್ಲಿ ನವದೀಪ್ ಸೈನಿ ಸ್ಥಾನದಲ್ಲಿ ಯುವ ಆಲ್ರೌಂಡರ್ ಶಹಬಾಜ್ ಅಹ್ಮದ್ ಅವರ ಸ್ಥಾನದಲ್ಲಿ ಪಡೆದಿದ್ದರು. ಅಲ್ಲದೆ ಎರಡು ವಿಕೆಟ್ ಉರುಳಿಸಿ ಗಮನಾರ್ಹ ಕೊಡುಗೆ ನೀಡಿದರು. ಒಂದು ವೇಳೆ ಸೈನಿ ಮುಂದಿನ ಪಂದ್ಯಕ್ಕೂ ಅಲಭ್ಯರಾದರೆ ಶಹಬಾಜ್ ಸ್ಥಾನ ಪಡೆಯಲಿದ್ದಾರೆ. ಹಾಗೆಯೇ ಮೊರೀಸ್ ಸ್ಥಾನದಲ್ಲಿ ಮೊಯೀನ್ ಅಲಿ ಕಣಕ್ಕಿಳಿಯಬಹುದು.
ಒಟ್ಟಿನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಆರ್ಸಿಬಿಗೆ ನಿರ್ಣಾಯಕ ಹಂತದ ಪಂದ್ಯಕ್ಕೂ ಮುನ್ನ ಆಟಗಾರರ ಗಾಯದ ಸಮಸ್ಯೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
ಇದನ್ನೂ ಓದಿ: MS Dhoni: ಯುವ ಪೀಳಿಗೆಗೆ ಜವಾಬ್ದಾರಿ ನೀಡಬೇಕಿದೆ: ಮುಂದಿನ ನಡೆಯ ಬಗ್ಗೆ ಸುಳಿವು ನೀಡಿದ ಧೋನಿ
Published by:
zahir
First published:
November 4, 2020, 5:48 PM IST