KSP Recruitment 2022: 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ ಇಲ್ಲಿದೆ

KSP Recruitment 2022: ಉಳಿಕೆ ಮೂಲ ವೃಂದ ಸೇರಿದಂತೆ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೋಲಿಸ್​ ಕಾನ್ಸ್​ಟೇಬಲ್​ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಪೊಲೀಸ್​ ಕಾನ್ಸ್​ಟೇಬಲ್ (Police Constable)​ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಪೊಲೀಸ್ ಇಲಾಖೆಯ (Karnataka State Police) ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಒಟ್ಟು 3484 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 31 ಆಗಿದೆ.

    ಉಳಿಕೆ ಮೂಲ ವೃಂದ ಸೇರಿದಂತೆ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೋಲಿಸ್​ ಕಾನ್ಸ್​ಟೇಬಲ್​ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)
    ಹುದ್ದೆಯ ಹೆಸರು: ಪೊಲೀಸ್ ಕಾನ್ಸ್ಟೇಬಲ್ (CAR/ DAR)
    ಹುದ್ದೆಗಳ ಸಂಖ್ಯೆ: 3484
    ಉದ್ಯೋಗ ಸ್ಥಳ: ಕರ್ನಾಟಕ
    ಸಂಬಳ: 23500- 47650 ರೂ ಪ್ರತಿ ತಿಂಗಳು















    ಹುದ್ದೆಹುದ್ದೆ ಸಂಖ್ಯೆ
    ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) - ಕರ್ನಾಟಕ ರಾಜ್ಯ3064
    ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) - ಕಲ್ಯಾಣ ಕರ್ನಾಟಕ420

    ಶಿಕ್ಷಣ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಅಧಿಸೂಚನೆ ಪ್ರಕಾರ ಮೇಲೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು ಮೀರಿರಬಾರದು.

    ಇದನ್ನು ಓದಿ: 2500 ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

    ವಯೋಮಿತಿ ಸಡಿಲಿಕೆ:
    ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 200 ರೂ.
    ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 400 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

    ಇದನ್ನು ಓದಿ: 778 ಪಿಯು ಉಪನ್ಯಾಸಕರ ನೇಮಕಾತಿ; ಶೀಘ್ರದಲ್ಲೇ ಹೊರಬೀಳಲಿದೆ ಅಧಿಸೂಚನೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19ನೇ ಸೆಪ್ಟೆಂಬರ್ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 03 ನವೆಂಬರ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ (3064 ಪೋಸ್ಟ್‌ಗಳು): ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ (420 ಪೋಸ್ಟ್‌ಗಳು): ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ksp.karnataka.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: