• Home
  • »
  • News
  • »
  • jobs
  • »
  • AAI Recruitment: ಏರ್​ಪೋರ್ಟ್​​ನಲ್ಲಿ ಕೆಲಸ ಮಾಡಲು ಇಲ್ಲೊಂದು ಚಾನ್ಸ್​ ಇದೆ, ಅರ್ಜಿ ಹಾಕಲು ಇವತ್ತೇ ಕೊನೆ ದಿನ

AAI Recruitment: ಏರ್​ಪೋರ್ಟ್​​ನಲ್ಲಿ ಕೆಲಸ ಮಾಡಲು ಇಲ್ಲೊಂದು ಚಾನ್ಸ್​ ಇದೆ, ಅರ್ಜಿ ಹಾಕಲು ಇವತ್ತೇ ಕೊನೆ ದಿನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು ಆಗಸ್ಟ್​ 31, 2022ಕ್ಕೆ 26 ವರ್ಷ ಮೀರಿರಬಾರದು.

  • Share this:

    AAI Recruitment 2022 Notification: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(Airports Authority of India-AAI)ದಲ್ಲಿ ಖಾಲಿ ಇರುವ 175 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನವಾಗಿದೆ.(Last Date) ಹೀಗಾಗಿ ಅಭ್ಯರ್ಥಿಗಳು ಕೂಡಲೇ ಅರ್ಜಿ ಹಾಕಿ, ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಐಟಿಐ, ಡಿಪ್ಲೋಮಾ ಹಾಗೂ ಬಿಇ/ಬಿ.ಟೆಕ್​ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
    ಹುದ್ದೆಯ ಹೆಸರುಅಪ್ರೆಂಟಿಸ್
    ಒಟ್ಟು ಹುದ್ದೆ175
    ವಿದ್ಯಾರ್ಹತೆಐಟಿಐ, ಡಿಪ್ಲೋಮಾ, ಬಿಇ/ಬಿ.ಟೆಕ್
    ವೇತನಮಾಸಿಕ ₹ 9,000-15,000
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅರ್ಜಿ ಸಲ್ಲಿಸಲು ಕೊನೆ ದಿನ07/11/2022


    ಹುದ್ದೆಯ ಮಾಹಿತಿ:
    ಡಿಪ್ಲೋಮಾ ಅಪ್ರೆಂಟಿಸ್
    ಗ್ರಾಜುಯೇಷನ್ ಅಪ್ರೆಂಟಿಸ್
    ಐಟಿಐ ಅಪ್ರೆಂಟಿಸ್


    ಇದನ್ನೂ ಓದಿ: BESCOM: ಬೆಸ್ಕಾಂನಲ್ಲಿ ಖಾಲಿ ಇರುವ 400 ಅಪ್ರೆಂಟಿಸ್ ಹುದ್ದೆಗಳಿಗೆ ಈಗಲೇ ಅರ್ಜಿ ಹಾಕಿ, ಇವತ್ತೇ ಕೊನೆ ದಿನ


    ವಿದ್ಯಾರ್ಹತೆ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಐಟಿಐ, ಬಿಇ/ ಬಿ.ಟೆಕ್​ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು ಆಗಸ್ಟ್​ 31, 2022ಕ್ಕೆ 26 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


     


    ಅರ್ಜಿ ಸಲ್ಲಿಸುವುದು ಹೇಗೆ?


    • ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವೃತ್ತಿ ಜೀವನ ಪ್ರಾರಂಭಿಸುವವರು ಪ್ರಾಧಿಕಾರದ ಅಧಿಕೃತ ವೆಬ್​ಸೈಟ್https://www.aai.aero/. ಗೆ ಭೇಟಿ ನೀಡಿ.

    • ಅರ್ಹತಾ ಮಾನದಂಡಗಳನ್ನು ಎಚ್ಚರಿಕೆಯಿಂದ ಓದಿ, ನಂತರ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ಭರ್ತಿ ಮಾಡಿ.

    • ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಇತ್ತೀಚಿನ ರೆಸ್ಯೂಮ್​​ನ್ನು ಸಿದ್ಧವಾಗಿಟ್ಟುಕೊಳ್ಳಿ.

    • ಹುದ್ದೆಯ ಹೆಸರು, ನಿಮ್ಮ ಹೆಸರು, ಇಮೇಲ್ ಐಡಿ, ಹುಟ್ಟಿದ ದಿನಾಂಕ, ಶೈಕ್ಷಣಿಕ ಅರ್ಹತೆ, ಅನುಭವ ಇತ್ಯಾದಿಗಳನ್ನು ಭರ್ತಿ ಮಾಡಿ.


    ಇದನ್ನೂ ಓದಿ: Karnataka Jobs: ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ- 13 SDA ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ


    ಡಿಪ್ಲೋಮಾ ಮತ್ತು ಗ್ರಾಜುಯೇಷನ್ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


    ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

    ವೇತನ:
    ಡಿಪ್ಲೋಮಾ ಅಪ್ರೆಂಟಿಸ್ -ಮಾಸಿಕ ₹ 12,000
    ಗ್ರಾಜುಯೇಷನ್ ಅಪ್ರೆಂಟಿಸ್- ಮಾಸಿಕ ₹ 15,000
    ಐಟಿಐ ಅಪ್ರೆಂಟಿಸ್- ಮಾಸಿಕ ₹ 9,000

    Published by:Latha CG
    First published: