• Home
  • »
  • News
  • »
  • jobs
  • »
  • Accenture Hiring: ಬಿಇ ಆದವರಿಗೆ ಆಕ್ಸೆಂಚರ್​ನಲ್ಲಿದೆ ಭರ್ಜರಿ ಅವಕಾಶ

Accenture Hiring: ಬಿಇ ಆದವರಿಗೆ ಆಕ್ಸೆಂಚರ್​ನಲ್ಲಿದೆ ಭರ್ಜರಿ ಅವಕಾಶ

ಸಂಸ್ಥೆಯಲ್ಲಿ ಅಸೋಸಿಯೇಟ್​ ಸಾಫ್ಟ್​ವೇರ್​ ಇಂಜಿನಿಯರ್ (Associate Software Engineer) ಹುದ್ದೆಗೆ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ

ಸಂಸ್ಥೆಯಲ್ಲಿ ಅಸೋಸಿಯೇಟ್​ ಸಾಫ್ಟ್​ವೇರ್​ ಇಂಜಿನಿಯರ್ (Associate Software Engineer) ಹುದ್ದೆಗೆ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ

ಸಂಸ್ಥೆಯಲ್ಲಿ ಅಸೋಸಿಯೇಟ್​ ಸಾಫ್ಟ್​ವೇರ್​ ಇಂಜಿನಿಯರ್ (Associate Software Engineer) ಹುದ್ದೆಗೆ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ

  • Share this:

    ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್ (Accenture) ವಿವಿಧ ಪದವೀಧರ ಅಭ್ಯರ್ಥಿಗಳ​ ನೇಮಕಾತಿಗೆ ಮುಂದಾಗಿದೆ. ಬೆಂಗಳೂರು (Bangalore) ಸೇರಿದಂತೆ ದೇಶದಲ್ಲಿ ವಿವಿಧ ನಗರಗಳಲ್ಲಿ ಈ ನೇಮಕಾತಿ ನಡೆಯಲಿದೆ. ಹೊಸಬರು ಸೇರಿದಂತೆ ಅನುಭವಿ ಉದ್ಯೋಗಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೂಲಕ ಈ ಕಂಪನಿಯಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿದ್ದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಆಗಿದೆ.


    ಸಂಸ್ಥೆಯಲ್ಲಿ ಅಸೋಸಿಯೇಟ್​ ಸಾಫ್ಟ್​ವೇರ್​ ಇಂಜಿನಿಯರ್ (Associate Software Engineer) ಹುದ್ದೆಗೆ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಬಿಇ, ಬಿಟೆಕ್​, ಎಂಸಿಎ ಮತ್ತು ಎಂಎಸ್ಸಿ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ ಮತ್ತು ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರ ಈ ಕೆಳಗಿನಂತಿದೆ.


    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಆಕ್ಸೆಂಚರ್​ (Accenture)
    ಹುದ್ದೆಅಸೋಸಿಯೇಟ್​ ಸಾಫ್ಟ್​ವೇರ್​ ಇಂಜಿನಿಯರ್​​
    ಒಟ್ಟು ಹುದ್ದೆನಿಗದಿಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳಬೆಂಗಳೂರು, ಹೈದರಾಬಾದ್, ಪುಣೆ, ಮುಂಬೈ, ಚೆನ್ನೈ, ಗುರ್ಗಾಂವ್, ಕೋಲ್ಕತ್ತಾ
    ವೇತನ450000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ, ಬಿಟೆಕ್​, ಎಂಇ, ಎಂಟೆಕ್​, ಎಂಸಿಎ ಅಥವಾ ಎಂಎಸ್ಸಿ ಪದವಿಯನ್ನು ಪಡೆದಿರಬೇಕು.


    ಇದನ್ನು ಓದಿ: ಬಳ್ಳಾರಿ ನಿರ್ಮಿತಿ ಕೇಂದ್ರದಲ್ಲಿದೆ ವಿವಿಧ ಹುದ್ದೆ; ಬೇಗ ಅರ್ಜಿ ಸಲ್ಲಿಸಿ


    ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ


    ವಯೋಮಿತಿ: ಆಕ್ಸೆಂಚರ್​​​ ನಿಯಮದ ಅನುಸಾರ


    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಹುದ್ದೆ ಕುರಿತ ವಿವರ
    -ಪೈಥಾನ್, ಪರ್ಲ್, ಗೋ, ನೋಡ್, ಜಾವಾ ಒಂದು ಅಥವಾ ಹೆಚ್ಚಿನ ಭಾಷೆಗಳಲ್ಲಿ ಪ್ರವೇಶ ಮಟ್ಟದ ಕೋಡಿಂಗ್ ಪರಿಣತಿ ಹೊಂದಿರಬೇಕು.


    -ಅಲ್ಗಾರಿದಮ್‌ಗಳು, ಡೇಟಾ ರಚನೆಗಳು, ಸ್ಕ್ರಿಪ್ಟಿಂಗ್ ಮತ್ತು ಸಾಫ್ಟ್‌ವೇರ್ ವಿನ್ಯಾಸ ಅಭ್ಯಾಸಗಳನ್ನು ಬರೆಯುವುದು, ಅರ್ಥಮಾಡಿಕೊಳ್ಳಬೇಕು.


    -ಅಭ್ಯರ್ಥಿಯು 11 ತಿಂಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿರಬಾರದು
    -ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.


    ಇದನ್ನು ಓದಿ: 487 ಹುದ್ದೆಗಳ ನೇಮಕಾತಿಗೆ ಮುಂದಾದ ಕೆಎಂಎಫ್​​


    ವಿಶೇಷ ಸೂಚನೆ:
    ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕಳೆದ ಮೂರು ತಿಂಗಳೊಳಗೆ ಸಂಸ್ಥೆ ನಡೆಸಿದ ಯಾವುದೇ ನೇಮಕಾತಿ, ಸಂದರ್ಶನಕ್ಕೆ ಹಾಜರಾಗಿರಬಾರದು.


    ಅರ್ಜಿ ಸಲ್ಲಿಕೆ ವಿಧಾನ:
    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: https://www.accenture.com/


    ಅರ್ಜಿ ಸಲ್ಲಿಸುವ ಪ್ರಕ್ರಿಯೆ


    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ


    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.


    ಅರ್ಜಿ ಸಲ್ಲಿಸುವವರು ಈ ಲಿಂಕ್ ಕ್ಲಿಕ್​ ಮಾಡಬೇಕು. ಬಳಿಕ ಪಿಡಿಎಫ್/ಎಂಎಸ್ ವರ್ಡ್ ಫಾರ್ಮ್ಯಾಟ್ ಮೂಲಕ ರೆಸ್ಯೂಮೆ ಅಪ್ಲೋಡ್ ಮಾಡಬೇಕು.


    Published by:Seema R
    First published: