ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ನಲ್ಲಿ(Air India Air Transport Services Limited) 62 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸರ್ವೀಸ್ ಅಶ್ಯೂರೆನ್ಸ್ ಎಕ್ಸಿಕ್ಯೂಟಿವ್, ಸರ್ವೀಸ್ ಅಶ್ಯೂರೆನ್ಸ್ ಮ್ಯಾನೇಜರ್ (Service Assurance Executive, Service Assurance Manager) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 6 ಆಗಿದೆ.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗಿದೆ. ಅಭ್ಯರ್ಥಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸಬೇಕಿದೆ. ಈ ಹುದ್ದೆ ಆಯ್ಕೆ, ಅರ್ಜಿ ಸಲ್ಲಿಕೆ ಮತ್ತು ನೇಮಕಾತಿ ಸೇರಿದಂತೆ ಇನ್ನಿತರ ಪ್ರಮುಖ ಮಾಹಿತಿ ಈ ಕೆಳಗಿನಂತಿದೆ.
ಸಂಸ್ಥೆಯ ಹೆಸರು: ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (AIATSL)
ಹುದ್ದೆಯ ಹೆಸರು: ಸರ್ವೀಸ್ ಅಶ್ಯೂರೆನ್ಸ್ ಎಕ್ಸಿಕ್ಯೂಟಿವ್, ಸರ್ವೀಸ್ ಅಶ್ಯೂರೆನ್ಸ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 62
ಉದ್ಯೋಗ ಸ್ಥಳ: ಮುಂಬೈ - ಮಹಾರಾಷ್ಟ್ರ
ಸಂಬಳ: 25000-50000 ರೂ.ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಖ್ಯೆ |
ವೇತನ |
ವಯೋಮಿತಿ |
ಸರ್ವೀಸ್ ಅಶ್ಯೂರೆನ್ಸ್ ಎಕ್ಸಿಕ್ಯೂಟಿವ್ |
50 |
ಗರಿಷ್ಠ 28 |
25000 ರೂ ಮಾಸಿಕ |
ರ್ವೀಸ್ ಅಶ್ಯೂರೆನ್ಸ್ ಮ್ಯಾನೇಜರ್ |
12 |
32 |
50000 ರೂ ಮಾಸಿಕ |
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ಇದನ್ನು ಓದಿ: ರೈಲ್ ಇಂಡಿಯಾದಲ್ಲಿ ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ; ಬೆಂಗಳೂರಿನಲ್ಲಿ ಕೆಲಸ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: 500 ರೂ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ:
ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ
ಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಜುಲೈ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಆಗಸ್ಟ್ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
aiasl.in
ಇದನ್ನು ಓದಿ: 56 ನರ್ಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದ SAIL; ಇಲ್ಲಿದೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ