ವಿಮಾನ ಯಾನ ಸಂಸ್ಥೆಗಳಲ್ಲಿ ಕೆಲಸ ಮಾಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಅಂತಹವರಿಗೊಂದು ಉತ್ತಮ ಅವಕಾಶವನ್ನು ಏರ್ ಇಂಡಿಯಾ (Air India Limited( ವಿಮಾನ ಸಂಸ್ಥೆ ನೀಡಿದೆ. ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ (PUC) ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಂಸ್ಥೆಯ ವೆಬ್ಸೈಟ್ ಮುಖಾಂತರ ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 5 ಆಗಿದೆ.
ಹುದ್ದೆಯ ವಿವರ (Job Description)
ಹುದ್ದೆ |
ಹುದ್ದೆ ಸಂಖ್ಯೆ |
ಸಂಸ್ಥೆ |
ಏರ್ ಇಂಡಿಯಾ ಲಿಮಿಟೆಡ್ |
ಹುದ್ದೆ |
ಕ್ಯಾಬಿನ್ ಕ್ರ್ಯೂ |
ಹುದ್ದೆ ಸಂಖ್ಯೆ |
ನಿರ್ಧಿಷ್ಟ ಪಡಿಸಿಲ್ಲ |
ವೇತನ |
ಏರ್ ಇಂಡಿಯಾ ನಿಯಮದ ಪ್ರಕಾರ |
ಶೈಕ್ಷಣಿಕ ಅರ್ಹತೆ (Education Qualification): ಏರ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಇದನ್ನು ಓದಿ: ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ 32 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಆದವರಿಗೆ ಅವಕಾಶ
ವಯಸ್ಸಿನ ಮಿತಿ (Age Limit): ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ (Age Exception):
ಅನುಭವಿ ಸಿಬ್ಬಂದಿ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ (Application Fees):
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ (Selection Process):
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು (Important Dates):
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಜುಲೈ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು (Notification Links)
ಅಧಿಕೃತ ಅಧಿಸೂಚನೆ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
airindia.in
ಇದನ್ನು ಓದಿ: ರೈಲ್ವೆ ಇಲಾಖೆಯಲ್ಲಿ 1659 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೆ ಅವಕಾಶ
ಹುದ್ದೆ ಅರ್ಹತೆ (Job Criteria)
ಅಗತ್ಯವಿರುವ ಕನಿಷ್ಠ ಎತ್ತರ: ಮಹಿಳಾ ಅಭ್ಯರ್ಥಿಗಳು - 157 ಸೆಂ / ಪುರುಷ ಅಭ್ಯರ್ಥಿಗಳು - 172 ಸೆಂ ಇರಬೇಕು
ತೂಕ: ಎತ್ತರಕ್ಕೆ ಅನುಗುಣವಾಗಿ
ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ
ದೃಷ್ಟಿ 6/6
ಅರ್ಜಿ ಸಲ್ಲಿಕೆ ವಿಧಾನ (How To Apply)
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ