Jobs in Air India: ಏರ್​ ಇಂಡಿಯಾದಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ; Walk-In-Inerviwನಲ್ಲಿ ಭಾಗಿಯಾಗಿ

ವಿವಿಧ ಕ್ಯಾಬಿನ್​ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಸೆಪ್ಟೆಂಬರ್​ 13 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಿ

ಏರ್​ ಇಂಡಿಯಾ

ಏರ್​ ಇಂಡಿಯಾ

  • Share this:
    ಏರ್​ ಇಂಡಿಯಾ ಲಿಮಿಟೆಡ್​ನ (Air India Limited) ವಿಮಾನಯಾನ ಸೇವೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಮುಂದಾಗಲಾಗಿದೆ. ವಿವಿಧ ಕ್ಯಾಬಿನ್​ ಕ್ರೂ (Cabin Crew) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದೇ ಸೆಪ್ಟೆಂಬರ್​ 13 ರಂದು ನೇರ ಸಂದರ್ಶನ ನಡೆಯಲಿದೆ.

    ಈ ಹುದ್ದೆಗಳು ಸಂಪೂರ್ಣವಾಗಿ ಮಹಿಳಾ ಉದ್ಯೋಗಿಗಳಿಗೆ ಮೀಸಲಾಗಿದೆ. ಮುಂಬೈನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಡೆಯುವ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಏರ್​​ ಇಂಡಿಯಾ
    ಹುದ್ದೆಯ ಹೆಸರುಕ್ಯಾಬಿನ್ ಕ್ರ್ಯೂ
    ಒಟ್ಟು ಹುದ್ದೆನಿರ್ದಿಷ್ಟ ಪಡಿಸಲಾಗಿಲ್ಲ
    ಉದ್ಯೋಗ ಸ್ಥಳಮುಂಬೈ
    ವೇತನಏರ್ ಇಂಡಿಯಾ ನಿಯಮಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಹುದ್ದೆ ಸಂಪೂರ್ಣ ಮಾಹಿತಿ

    ವಯೋಮಿತಿ: ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳನ್ನು ಹೊಂದಿರಬೇಕು ಮತ್ತು ಗರಿಷ್ಠ ವಯಸ್ಸು 27 ವರ್ಷಗಳು ಇರಬೇಕು.

    ವಯೋಮಿತಿ ಸಡಿಲಿಕೆ:
    ಅನುಭವಿ ಅಭ್ಯರ್ಥಿಗಳು: 05 ವರ್ಷಗಳು

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ನೇರ ಸಂದರ್ಶನ ನಡೆಯುವ ಸ್ಥಳ

    ಪಾರ್ಲೆ ಸ್ಕ್ವೇರ್ ಮಾಲ್, ಬಿ.ಎನ್. ಅಗರ್ವಾಲ್ ಕಮರ್ಷಿಯಲ್ ಕಾಂಪ್ಲೆಕ್ಸ್, ವೈಲ್ ಪಾರ್ಲೆ ವಿಲೇ ಪಾರ್ಲೆ ರೈಲು ನಿಲ್ದಾಣದ ಹತ್ತಿರ (ಪೂರ್ವ), ಮುಂಬೈ, ಮಹಾರಾಷ್ಟ್ರ.

    ಇದನ್ನು ಓದಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿದೆ ವಿವಿಧ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 03 ಸೆಪ್ಟೆಂಬರ್​​ 2022
    ವಾಕ್-ಇನ್ ದಿನಾಂಕ: 13 ಸೆಪ್ಟೆಂಬರ್ 2022 ಬೆಳಗ್ಗೆ 9. 30ರಿಂದ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: airindia.in

    ನೇರ ಸಂದರ್ಶನದ ವೇಳೆ ಈ ದಾಖಲೆ ಅವಶ್ಯ

    -ಎರಡು ಪಾಸಪೋರ್ಸ್​ ಸೈಜ್​ ಫೋಟೋ
    -ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್​ಎಸ್​ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
    -ಇತರೆ ಪ್ರಮಾಣ ಪತ್ರಗಳೊಂದಿಗೆ ನೇರ ಸಂದರ್ಶನಕ್ಕೂ 30 ನಿಮಿಷ ಮೊದಲೇ ಹಾಜರಿರಬೇಕು.
    Published by:Seema R
    First published: