AIISH Recruitment 2022: ಮೈಸೂರಿನ ವಾಕ್ ಮತ್ತು​ ಶ್ರವಣ ಸಂಸ್ಥೆಯಲ್ಲಿದೆ ಅಕೌಂಟೆಂಟ್​ ಹುದ್ದೆ

ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎಐಐಎಸ್​ಎಚ್​

ಎಐಐಎಸ್​ಎಚ್​

  • Share this:
    ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು​ ಶ್ರವಣ ಸಂಸ್ಥೆಯಲ್ಲಿ (All India Institute of Speech and Hearing Mysore)  ಅಕೌಂಟೆಂಟ್​ (Accountant) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 3 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ನೇಮಕಾತಿ ನಡೆಸಲಾಗುತ್ತಿದ್ದು, ಈ ಹುದ್ದೆಗಳನ್ನು ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ವಿಸ್ತರಣೆ ಮಾಡಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಅಖಿಲ ಭಾರತ ವಾಕ್ ಮತ್ತು​ ಶ್ರವಣ ಸಂಸ್ಥೆ (AIISH )
    ಹುದ್ದೆಯ ಹೆಸರು: ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್
    ಹುದ್ದೆಗಳ ಸಂಖ್ಯೆ: 2
    ಉದ್ಯೋಗ ಸ್ಥಳ: ಮೈಸೂರು
    ವೇತನ: 9300-34800 ರೂ ಪ್ರತಿ ತಿಂಗಳು
























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಲೆಕ್ಕಾಧಿಕಾರಿ1ಸಂಸ್ಥೆಯ ನಿಯಮ ಅನುಸಾರಗರಿಷ್ಟ 56 ವರ್ಷ9300-34800 ರೂ ಮಾಸಿಕ
    ಸಹಾಯಕ ಲೆಕ್ಕಾಧಿಕಾರಿ1ಪದವಿಗರಿಷ್ಟ 30 ವರ್ಷಸಂಸ್ಥೆಯ ನಿಯಮ ಅನುಸಾರ

    ಅರ್ಜಿ ಸಲ್ಲಿಕೆ: ಆಫ್​ಲೈನ್​ ಮೂಲಕ

    ಅರ್ಜಿ ಶುಲ್ಕ
    ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಪ.ಜಾ, ಪ.ಪಂ ಅಭ್ಯರ್ಥಿಗಳು: 40 ರೂ.
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 100 ರೂ.

    ಪಾವತಿ ವಿಧಾನ: ಆನ್‌ಲೈನ್ ಮತ್ತು ನಿಫ್ಟ್​​

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನು ಓದಿ: ಪಿಯು ಉಪನ್ಯಾಸಕರ ನೇಮಕಾತಿ; ಇಲ್ಲಿದೆ ಹುದ್ದೆಯ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ವಿಳಾಸ

    ಮುಖ್ಯ ಆಡಳಿತಾಧಿಕಾರಿಗಳ ಕಛೇರಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006.

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18 ಆಗಸ್ಟ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಅಕ್ಟೋಬರ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: aiishmysore.in

    ಇದನ್ನು ಓದಿ: ಬೆಂಗಳೂರಿನ ದಾಸರಹಳ್ಳಿಯ ಶಾಲೆಯಲ್ಲಿದೆ ಶಿಕ್ಷಕರ ಹುದ್ದೆ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಿಗದಿತ ದಿನಾಂಕಕ್ಕೆ ಮುನ್ನ ಮೇಲಿನ ವಿಳಾಸಕ್ಕೆ ರಿಜಿಸ್ಟರ್​ ಅಥವಾ ಸ್ಪೀಡ್​ ಪೋಸ್ಟ್​ ಮೂಲಕ ಕಳುಹಿಸಿ.
    Published by:Seema R
    First published: