• ಹೋಂ
  • »
  • ನ್ಯೂಸ್
  • »
  • Jobs
  • »
  • AIISH Mysore Recruitment: M.A, M.Ed ಆದವರಿಗೆ ಉದ್ಯೋಗ ಅವಕಾಶ; ಮೈಸೂರಿನಲ್ಲಿದೆ ಕೆಲಸ

AIISH Mysore Recruitment: M.A, M.Ed ಆದವರಿಗೆ ಉದ್ಯೋಗ ಅವಕಾಶ; ಮೈಸೂರಿನಲ್ಲಿದೆ ಕೆಲಸ

ಎಐಐಎಸ್​ಎಚ್​

ಎಐಐಎಸ್​ಎಚ್​

ಸ್ನಾತಕೋತ್ತರ ಪದವೀಧರರಿಗೆ ಉತ್ತಮ ಅವಕಾಶವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 31 ಕಡೆಯ ದಿನಾಂಕವಾಗಿದೆ.

  • Share this:

    ಮೈಸೂರಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ (All India Institute of Speech and HearingAll India Institute of Speech and Hearing) ​​ನಲ್ಲಿ ಸಂಶೋಧನಾ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಪದವೀಧರರಿಗೆ ಉತ್ತಮ ಅವಕಾಶವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 31 ಕಡೆಯ ದಿನಾಂಕವಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ (Offline) ಮೂಲಕ ಸಲ್ಲಿಸಬಹುದಾಗಿದೆ.


    ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ತಾತ್ಕಲಿಕ ಹುದ್ದೆಗಳಿಗೆ ನೇಮಕಾತಿ ನಡೆಸಿದ್ದು, ಇದು 12 ತಿಂಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಸಲಾಗುವುದು. ಬಳಿಕ ಅಭ್ಯರ್ಥಿ ಸಾಮರ್ಥ್ಯದ ಆಧಾರದ ಮೇಲೆ ವಿಸ್ತರಣೆ ನಡೆಸಲಾಗುವುದು.

    ಹುದ್ದೆ ಮಾಹಿತಿವಿವರ
    ಹುದ್ದೆಸಂಶೋಧನಾ ಸಹಾಯಕ
    ಉದ್ಯೋಗ ಸ್ಥಳಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು
    ಹುದ್ದೆಗಳ ಸಂಖ್ಯೆ1
    ವೇತನ16000ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 55% ಅಂಕಗಳೊಂದಿಗೆ ಎಂ.ಇಡ್​​, ಎಂ.ಇಡ್​ (Spl. Edn), ಎಂಎ ಪೂರ್ಣಗೊಳಿಸಿರಬೇಕು.


    ವಯೋಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಕಡಿಮೆಯಿರಬೇಕು.


    ವಯಸ್ಸಿನ ಸಡಿಲಿಕೆ:
    ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಮೈಸೂರು ನಿಯಮಗಳ ಪ್ರಕಾರ


    ಅರ್ಜಿ ಶುಲ್ಕ
    ಮಹಿಳೆಯರು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ
    ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡ ಅಭ್ಯರ್ಥಿಗಳು:  40 ರೂ.
    ಸಾಮಾನ್ಯ. ಹಿಂದುಳಿದ ಅಭ್ಯರ್ಥಿಗಳು: 100 ರೂ.


    ಇದನ್ನು ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಟೆಕ್ನಿಕಲ್ ಪ್ರೋಗ್ರಾಮರ್​​ ಹುದ್ದೆಗೆ ಅರ್ಜಿ ಆಹ್ವಾನ


    ಅರ್ಜಿಶುಲ್ಕ ಪಾವತಿ ವಿಧಾನ: ಆನ್‌ಲೈನ್/NEFT


    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 31, 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: aiishmysore.in


    ಇದನ್ನು ಓದಿ: ಬಳ್ಳಾರಿ ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ


    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಮೇ 31 ಸಂಜೆ 5.30ರೊಳಗೆ ಸಲ್ಲಿಸಬೇಕು.


    ಮುಖ್ಯ ಆಡಳಿತಾಧಿಕಾರಿಗಳ ಕಚೇರಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು - 570006


    ಅರ್ಜಿ ಸಲ್ಲಿಕೆ ವಿಧಾನ


    ವೆಬ್​ಸೈಟ್​ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ಸಮೂನೆಯನ್ನು ಅಭ್ಯರ್ಥಿಗಳು ಭರ್ತಿ ಮಾಡಬೇಕು.
    ಅರ್ಜಿಯಲ್ಲಿ ಫೋಟೋ, ಸಹಿ. ಅಂಕ ಪ್ರಮಾಣ ಪತ್ರ, ಇನ್ನಿತತೆ ಅವಶ್ಯಕತ ಪ್ರಮಾಣ ಪತ್ರಗಳನ್ನು ಕೂಡ ಕಡ್ಡಾಯವಾಗಿ ಸಲ್ಲಿಸಬೇಕು.
    ಹುದ್ದೆಗೆ ಅರ್ಹವಾದ ಶೈಕ್ಷಣಿಕ ಅರ್ಹತೆ ಮತ್ತು ಅನುಭವ ಹೊಂದಿರಬೇಕು. ಈಗಾಗಲೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವವರು ಈ ಹುದ್ದೆಗೆ ಅರಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

    Published by:Seema R
    First published: