ವಿಶ್ವದ ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆಯಾದ ಅಮುಲ್ (Amul) ತನ್ನ ಕಂಪೆನಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಕೌಂಟ್ ಸಹಾಯಕ (Account Assistant) ಹುದ್ದೆಗಳಿಗೆ ನೇಮಕಾತಿ ಭರ್ತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 2 ಕೊನೆಯ ದಿನಾಂಕವಾಗಿದ್ದು, ವಾಣಿಜ್ಯ ಪದವೀಧರರು ಅರ್ಜಿ ಸಂಸ್ಥೆಯ ಅಧಿಕೃತ ವೆಬ್ ಸೈಟ್ amul.com ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು |
ಮಾಹಿತಿ |
ಹುದ್ದೆ |
ಅಕೌಂಟ್ ಸಹಾಯಕ ಹುದ್ದೆಗಳು |
ಹುದ್ದೆ ಸಂಖ್ಯೆ |
3 |
ಉದ್ಯೋಗದ ಸ್ಥಳ |
ಲಕ್ನೋ, ಜಮ್ಮೆಡ್ಪುರ |
ವೇತನ ಶ್ರೇಣಿ |
ವಾರ್ಷಿಕ ವೇತನ 4,00,000 ರೂ.- 5,00,000 ರೂ. ವರೆಗೆ |
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಟ 18 ವರ್ಷ ಆಗಿದ್ದು, ಗರಿಷ್ಠ 28 ವರ್ಷಗಳನ್ನು ಮೀರಬಾರದು.
ವಿದ್ಯಾರ್ಹತೆ: ಪ್ರಥಮ ದರ್ಜೆ ಅಂಕಗಳೊಂದಿಗೆ ಬಿಕಾಂ (ಕಾಮರ್ಸ್ ಪದವಿ), ಎಂ.ಕಾಂ. ಎಂಬಿಎ, ಪಿಜಿಡಿಎಂನಲ್ಲಿ ಉತ್ತೀರ್ಣರಾಗಿರಬೇಕು. ಲೆಕ್ಕಪತ್ರ ನಿರ್ವಹಣೆ, ತೆರಿಗೆ, ಹಣಕಾಸು ನಿರ್ವಹಣೆ ಇತ್ಯಾದಿಗಳಲ್ಲಿ ಕೆಲಸದ ಅನುಭವ ಹೊಂದಿರಬೇಕು. ಕಂಪ್ಯೂಟರ್ ಕೌಶಲ್ಯವನ್ನೂ ಹೊಂದಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು amul.com ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ; ಯಾವುದೇ ಲಿಖಿತ ಪರೀಕ್ಷೆ ಇಲ್ಲ
ಪ್ರಮುಖ ದಿನಾಂಕ: ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 2, 2022
ಪ್ರಮುಖ ಲಿಂಕ್ಗಳು
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
http://amul.com
ಅರ್ಜಿ ಸಲ್ಲಿಕೆ ವಿಧಾನ
-ಅಮುಲ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಇದನ್ನು ಓದಿ: ಡ್ರಗ್ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಆಗಿದ್ರೆ ಸಾಕು
- ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
-ಅಮುಲ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೆರೆ ಹಿಡಿಯಿರಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ