Anganwadi Jobs: ಯಾದಗಿರಿಯಲ್ಲಿ 31 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಮಾರ್ಚ್​ 31ರವರೆಗೆ ಅರ್ಜಿ ಹಾಕಬಹುದು. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Yadgir Anganwadi Recruitment 2022: ಯಾದಗಿರಿ ಜಿಲ್ಲೆ (Yadgir District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 31 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಮಾರ್ಚ್​ 31ರವರೆಗೆ ಅರ್ಜಿ ಹಾಕಬಹುದು. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.











































 ಸಂಸ್ಥೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಯಾದಗಿರಿ
ಹುದ್ದೆಯ ಹೆಸರುಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು31
ವಿದ್ಯಾರ್ಹತೆ10ನೇ ತರಗತಿ, 4ನೇ ತರಗತಿ ಉತ್ತೀರ್ಣ
ಕೆಲಸದ ಸ್ಥಳಯಾದಗಿರಿ
ವಯೋಮಿತಿ18-35 ವರ್ಷ
ವೇತನನಿಯಮಾನುಸಾರ
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 04/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/03/2022

ಹುದ್ದೆಯ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 7 ಹುದ್ದೆಗಳು
ಅಂಗನವಾಡಿ ಸಹಾಯಕಿ: 24 ಹುದ್ದೆಗಳು
ಒಟ್ಟು-31 ಹುದ್ದೆಗಳು

ಇದನ್ನೂ ಓದಿ: HAL ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಈಗಲೇ Apply ಮಾಡಿ

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 4ನೇ ತರಗತಿ/10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

 ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: Government Job: ತಿಂಗಳಿಗೆ ₹ 57,000 ಸಂಬಳ, ಮಾರ್ಚ್​​ 9ರಂದು Walk-in-Interview

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/03/2022
Published by:Latha CG
First published: