Anganwadi Jobs: ಶಿವಮೊಗ್ಗದಲ್ಲಿ 88 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 4ನೇ ತರಗತಿ/10ನೇ ತರಗತಿ ಪಾಸ್ ಆಗಿರಬೇಕು.

ಅಂಗನವಾಡಿ ವೆಬ್​ಸೈಟ್​

ಅಂಗನವಾಡಿ ವೆಬ್​ಸೈಟ್​

  • Share this:
WCD Shivamogga Recruitment 2022: ಶಿವಮೊಗ್ಗ ಜಿಲ್ಲೆ (Shivamogga District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 88 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಫೆಬ್ರವರಿ 13ರವರೆಗೆ ಅರ್ಜಿ ಹಾಕಬಹುದು. ಜನವರಿ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾ ಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.











































ಸಂಸ್ಥೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಶಿವಮೊಗ್ಗ
ಹುದ್ದೆಯ ಹೆಸರುಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ
 ಒಟ್ಟು ಹುದ್ದೆಗಳು88
ವಿದ್ಯಾರ್ಹತೆ10ನೇ ತರಗತಿ, 4ನೇ ತರಗತಿ ಉತ್ತೀರ್ಣ
 ಕೆಲಸದ ಸ್ಥಳಶಿವಮೊಗ್ಗ
ವಯೋಮಿತಿ18-35 ವರ್ಷ
ವೇತನ ನಿಯಮಾನುಸಾರ
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/02/2022

ಹುದ್ದೆಯ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 20 ಹುದ್ದೆಗಳು
ಅಂಗನವಾಡಿ ಸಹಾಯಕಿ: 68 ಹುದ್ದೆಗಳು
ಒಟ್ಟು-88 ಹುದ್ದೆಗಳು

ಇದನ್ನೂ ಓದಿ: Railway Jobs: 2422 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಪಾಸಾದವರು Apply ಮಾಡಿ

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 4ನೇ ತರಗತಿ/10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: KPSC ನೇಮಕಾತಿ: 150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/02/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
Published by:Latha CG
First published: