Anganwadi Recruitment: ವಿಜಯನಗರ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ವಿವರ

ಜಿಲ್ಲೆಯ ಕೂಡ್ಲಿಗಿ, ಹೋಸಪೇಟೆ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಹರಪ್ಪನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಈ ನೇಮಕಾತಿ ನಡೆಯಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
     ವಿಜಯನಗರ (Vijayanagara) ಜಿಲ್ಲೆಯಲ್ಲಿ ಖಾಲಿ ಇರುವ   ಅಂಗನವಾಡಿ ಕಾರ್ಯಕರ್ತರ (Anganwadi Worker) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ವಿಜಯನಗರ ಜಿಲ್ಲೆಯ 5 ಶಿಶಯ ಅಬಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​​ 6 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಸಲ್ಲಿಸಬಹುದಾಗಿದೆ.

    ಜಿಲ್ಲೆಯ ಕೂಡ್ಲಿಗಿ, ಹೋಸಪೇಟೆ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಹರಪ್ಪನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಈ ನೇಮಕಾತಿ ನಡೆಯಲಿದೆ

    ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
    ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
    ಸಂಖ್ಯೆ: 63
    ಉದ್ಯೋಗ ಸ್ಥಳ: ವಿಜಯನಗರ
    ವೇತನ: 5000-10000 ರೂ ಪ್ರತಿ ತಿಂಗಳು


















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಅಂಗನವಾಡಿ ಕಾರ್ಯಕರ್ತರು15ಎಸ್​ಎಸ್​ಎಲ್​ಸಿ
    ಅಂಗನವಾಡಿ ಸಹಾಯಕರು48ನಾಲ್ಕು, 9ನೇ ತರಗತಿ ಪಾಸ್​​

    ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಾವಳಿಯಂತೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.

    ಇದನ್ನು ಓದಿ: ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ನಲ್ಲಿದೆ 87 ಕ್ಲರ್ಕ್​​ ಹುದ್ದೆ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
    ಭರ್ತಿ ಮಾಡಿದ ಅರ್ಜಿ ನಮೂನೆ
    ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿ
    ವಾಸಸ್ಥಳದ ದೃಢೀಕರಣ
    ವಿದ್ಯಾರ್ಹತೆ ಪ್ರಮಾಣಪತ್ರ
    ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
    ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಅಕ್ಟೋಬರ್​​​​ 2022

    ಪ್ರಮುಖ ಲಿಂಕ್​ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: anganwadirecruit.kar.nic.in

    ಇದನ್ನು ಓದಿ: ಚಿಕ್ಕಮಗಳೂರಿನಲ್ಲಿ74 ಅಂಗನವಾಡಿ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: