Anganwadi Recruitment: ಯಾದಗಿರಿ, ಬೆಳಗಾವಿಯಲ್ಲಿ 316 ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

316 ಹುದ್ದೆಗಳಲ್ಲಿ ಯಾದಗಿರಿಗೆ 34 ಮತ್ತು ಬೆಳಗಾವಿಗೆ 282 ಹುದ್ದೆಗಳು ಮೀಸಲಾಗಿದೆ. ಆಯಾ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ಕ್ಷೇತ್ರದಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಳಗಾವಿ ಮತ್ತು ಯಾದಗಿರಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರ ನೇಮಕಕ್ಕೆ ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ( Women and Child Development Department) ಮುಂದಾಗಿದೆ. ಅಂಗನವಾಡಿ ನೇಮಕಾತಿಕ್ಕೆ ಸಂಬಂಧಿಸಿದಂತೆ 316 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಗಳಿಗೆ (Anganwadi Worker and Helper) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 5 ಆಗಿದೆ. ಕರ್ನಾಟಕ ಅಂಗನವಾಡಿ ನೇಮಕಾತಿಯ ಅಧಿಕೃತ ವೆಬ್‌ಸೈಟ್ anganwadirecruit.kar.nic.in ಜಾಲತಾಣದಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ಇನ್ನು ಈ 316 ಹುದ್ದೆಗಳಲ್ಲಿ ಯಾದಗಿರಿಗೆ 34 ಮತ್ತು ಬೆಳಗಾವಿಗೆ 282 ಹುದ್ದೆಗಳು ಮೀಸಲಾಗಿದೆ. ಆಯಾ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ಕ್ಷೇತ್ರದಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ
    ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
    ಹುದ್ದೆಗಳ ಸಂಖ್ಯೆ: 316
    ಉದ್ಯೋಗ ಸ್ಥಳ: ಯಾದಗಿರಿ-ಬೆಳಗಾವಿ
    ವೇತನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ನಿಯಮಗಳ ಪ್ರಕಾರ


















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಅಂಗನವಾಡಿ ಕಾರ್ಯಕರ್ತೆ38ಎಸ್​ಎಸ್​ಎಲ್​ಸಿ
    ಅಂಗನವಾಡಿ ಸಹಾಯಕಿ2784 ಅಥವಾ 9ನೇ ತರಗತಿ

    ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಬಿಬಿಎಂಪಿಯಲ್ಲಿ ಬೃಹತ್​ ನೇಮಕಾತಿ; 940 ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ

    ವಯೋಮಿತಿ ಸಡಿಲಿಕೆ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಾವಳಿಯಂತೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
    ಭರ್ತಿ ಮಾಡಿದ ಅರ್ಜಿ ನಮೂನೆ
    ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿ
    ವಾಸಸ್ಥಳದ ದೃಢೀಕರಣ
    ವಿದ್ಯಾರ್ಹತೆ ಪ್ರಮಾಣಪತ್ರ
    ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
    ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 4 ಆಗಸ್ಟ್​  2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 5 ಸೆಪ್ಟೆಂಬರ್​ 2022

    ಇದನ್ನು ಓದಿ: ಬೆಳಗಾವಿಯಲ್ಲಿದೆ ಸ್ಟೆನೋಗ್ರಾಫರ್​ ಹುದ್ದೆ; ಮಾಸಿಕ 52650 ರೂವರೆಗೆ ವೇತನ

    ಪ್ರಮುಖ ಲಿಂಕ್​ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: anganwadirecruit.kar.nic.in

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: