• ಹೋಂ
  • »
  • ನ್ಯೂಸ್
  • »
  • Jobs
  • »
  • Anganwadi Recruitment: ಚಿತ್ರದುರ್ಗದಲ್ಲಿ 112 ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

Anganwadi Recruitment: ಚಿತ್ರದುರ್ಗದಲ್ಲಿ 112 ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆ

ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆ

ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 18 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬೇಕಾಗಿದೆ.

  • Share this:

    ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 112 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಜಿಲ್ಲೆಯ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 18 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಸಲ್ಲಿಸಬೇಕಾಗಿದೆ.


    ಸಂಸ್ಥೆಯ ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
    ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
    ಹುದ್ದೆಗಳ ಸಂಖ್ಯೆ: 112
    ಉದ್ಯೋಗ ಸ್ಥಳ: ಚಿತ್ರದುರ್ಗ
    ವೇತನ: WCD ಚಿತ್ರದುರ್ಗ ನಿಯಮಗಳ ಪ್ರಕಾರ

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಅಂಗನವಾಡಿ ಕಾರ್ಯಕರ್ತೆ16ಎಸ್​ಎಸ್​ಎಲ್​ಸಿ
    ಅಂಗನವಾಡಿ ಸಹಾಯಕಿ96ನಾಲ್ಕು, 9ನೇ ತರಗತಿ ಪಾಸ್​​

    ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗದ ನಿಯಮಾವಳಿಯಂತೆ


    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ


    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ


    ಇದನ್ನು ಓದಿ: ರಾಣಿ ಚೆನ್ನಮ್ಮ ವಿವಿಯಲ್ಲಿ ವಾಕ್​-ಇನ್​-ಇಂಟರ್​ವ್ಯೂ; ಲೈಬ್ರರಿ ಟ್ರೈನಿ ಹುದ್ದೆಗೆ ನೇಮಕಾತಿ


    ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
    ಭರ್ತಿ ಮಾಡಿದ ಅರ್ಜಿ ನಮೂನೆ
    ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿ
    ವಾಸಸ್ಥಳದ ದೃಢೀಕರಣ
    ವಿದ್ಯಾರ್ಹತೆ ಪ್ರಮಾಣಪತ್ರ
    ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
    ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ.


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18 ಜೂನ್​, 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಜುಲೈ, 2022


    ಇದನ್ನು ಓದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 32 ಹುದ್ದೆಗಳಿಗೆ ನೇಮಕಾತಿ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ


    ಪ್ರಮುಖ ಲಿಂಕ್​ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: anganwadirecruit.kar.nic.in


    ಅರ್ಜಿ ಸಲ್ಲಿಕೆ ವಿಧಾನ


    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
    - ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಲ್ಲಿಸಿ.
    - ಚಿತ್ರದುರ್ಗ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೆಳಗೆ ನೀಡಲಾದ ಲಿಂಕ್​ ಕ್ಲಿಕ್​ ಮಾಡಿ
    - ಚಿತ್ರದುರ್ಗ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
    - ಚಿತ್ರದುರ್ಗ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.

    Published by:Seema R
    First published: