Jobs in Anganwadi: ಚಿಕ್ಕಮಗಳೂರಿನಲ್ಲಿ74 ಅಂಗನವಾಡಿ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

ಚಿಕ್ಕಮಗಳೂರು, ಕಡೂರು, ತರಿಕೇರಿ, ಕೊಪ್ಪ, ಎನ್​ಆರ್​ ಪುರ, ಮೂಡಿಗೆರೆ ತಾಲೂಕಿನ  ವಿವಿಧ ಅಂಗನವಾಡಿ ಕೇಂದ್ರದಲ್ಲಿ ಈ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರ ಕೆಳಗಿನಂತಿದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಚಿಕ್ಕಮಗಳೂರು (Chikkamagaluru)ಜಿಲ್ಲೆಯಲ್ಲಿ ಖಾಲಿ ಇರುವ 74 ಅಂಗನವಾಡಿ ಕಾರ್ಯಕರ್ತರ (Anganwadi Worker) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅರ್ಹ ಮತ್ತು ಸೂಕ್ತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​​ 10  ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಸಲ್ಲಿಸಬಹುದಾಗಿದೆ.

    ಚಿಕ್ಕಮಗಳೂರು, ಕಡೂರು, ತರಿಕೇರಿ, ಕೊಪ್ಪ, ಎನ್​ಆರ್​ ಪುರ, ಮೂಡಿಗೆರೆ ತಾಲೂಕಿನ  ವಿವಿಧ ಅಂಗನವಾಡಿ ಕೇಂದ್ರದಲ್ಲಿ ಈ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ವಿವರ ಕೆಳಗಿನಂತಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆ ಹೆಸರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು
    ಹುದ್ದೆ ಹೆಸರುಅಂಗನವಾಡಿ ಕಾರ್ಯಕರ್ತೆಯರು
    ಒಟ್ಟು ಹುದ್ದೆ75
    ಕಾರ್ಯ ನಿರ್ವಹಣೆ ಸ್ಥಳಚಿಕ್ಕಮಗಳೂರು
    ವೇತನ5000 ರೂ ಮಾಸಿಕ

    ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ನಲ್ಲಿದೆ 87 ಕ್ಲರ್ಕ್​​ ಹುದ್ದೆ

    ವಿದ್ಯಾರ್ಹತೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ ನಾಲ್ಕನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು

    ವಯೋಮಿತಿ ಸಡಿಲಿಕೆ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು ನಿಯಮಾವಳಿಯಂತೆ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಅರ್ಜಿಯೊಂದಿಗೆ ಕೆಳಗಂಡ ದಾಖಲೆ ಲಗತ್ತಿಸಿ
    ಭರ್ತಿ ಮಾಡಿದ ಅರ್ಜಿ ನಮೂನೆ
    ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್​ಎಸ್​ಎಲ್​ಸಿ ಅಂಕಪಟ್ಟಿ
    ವಾಸಸ್ಥಳದ ದೃಢೀಕರಣ
    ವಿದ್ಯಾರ್ಹತೆ ಪ್ರಮಾಣಪತ್ರ
    ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
    ಪತಿಯ ಮರಣ ಪ್ರಮಾಣ ಪತ್ರ ಸೇರಿದಂತೆ ಅರ್ಜಿಯಲ್ಲಿ ಸೂಚಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕಿದೆ.

    ಇದನ್ನು ಓದಿ: ದೂರಸಂಪರ್ಕ ಇಲಾಖೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗಾವಕಾಶ; ತಿಂಗಳಿಗೆ 75 ಸಾವಿರ ರೂ ವೇತನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಅಕ್ಟೋಬರ್​​ 2022

    ಪ್ರಮುಖ ಲಿಂಕ್​ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: anganwadirecruit.kar.nic.in

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: